ಬಿಹಾರ: ವಿಧಾನ ಸಭಾ ಚುನಾವಣೆಯಲ್ಲಿ (Bihar assembly election) ಜಯಭೇರಿ ಬಾರಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ನಾಯಕರು ನವೆಂಬರ್ 20ರಂದು ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ (NDA leaders oath-taking ceremony) ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಭಾಗವಹಿಸುವ ನಿರೀಕ್ಷೆ ಇದೆ. ಬಿಹಾರ ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ)ವು ಮಹಾಘಟಬಂಧನ್ ಅನ್ನು ಹೀನಾಯವಾಗಿ ಸೋಲುವಂತೆ ಮಾಡಿತು.
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನವೆಂಬರ್ 20 ರಂದು ಬಿಹಾರದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಎನ್ ಡಿಎ ನಾಯಕರು ಸಮಾರಂಭಕ್ಕೆ ಹಾಜರಾಗುವ ಸಾಧ್ಯತೆ ನಿರೀಕ್ಷೆ ಇದೆ.
ಇದನ್ನೂ ಓದಿ: Saudi Arabia Bus Accident: ಮದೀನಾದಲ್ಲಿ ಭೀಕರ ರಸ್ತೆ ಅಪಘಾತ; ಭಾರತದ 42 ಮಂದಿ ಸಾವು
ಬಿಹಾರ ವಿಧಾಸಭಾ ಚುನಾವಣೆಯಲ್ಲಿ ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಕ್ರಮವಾಗಿ 89 ಮತ್ತು 85 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಮಹಾಘಟಬಂಧನ್ ನ ಮಿತ್ರ ಪಕ್ಷ ಆರ್‌ಜೆಡಿ ಕೇವಲ 25 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಯಿತು. ಕಾಂಗ್ರೆಸ್ 6 ಸ್ಥಾನಗಳನ್ನು ಗಳಿಸಿದ್ದು, ಎಡಪಕ್ಷಗಳು ಒಟ್ಟಾಗಿ ಕೇವಲ 3 ಸ್ಥಾನಗಳನ್ನು ಮಾತ್ರ ಉಳಿಸಿಕೊಂಡಿದೆ. ಬಿಎಸ್‌ಪಿ ಮತ್ತು ಐಐಪಿ ತಲಾ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ದಾಖಲಿಸಿದೆ.
10 ನೇ ಅವಧಿಗೆ ಮುಖ್ಯಮಂತ್ರಿಯಾಗಲು ಸಿದ್ದರಾಗಿರುವ ಜೆಡಿ (ಯು) ನಾಯಕ ನಿತೀಶ್ ಕುಮಾರ್ ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ.
ಬಿಜೆಪಿ-ಜೆಡಿ (ಯು) ಮೈತ್ರಿಕೂಟದ ಸರ್ಕಾರ ರಚನೆ ಯಾವ ರೀತಿ ಇರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ. ನಿತೀಶ್ ಕುಮಾರ್ ಅವರ ಜೆಡಿಯು ಸಿಎಂ ಹುದ್ದೆಯನ್ನು ಪಡೆಯಬಹುದು. ಆದರೆ ಬಿಜೆಪಿ ಮತ್ತು ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ತಲಾ ಒಂದು ಉಪ ಮುಖ್ಯಮಂತ್ರಿ ಹುದ್ದೆಯನ್ನು ಪಡೆಯಬಹುದು.
ಇದನ್ನೂ ಓದಿ: ಯುವ ಜನತೆಯೇ ಟಾರ್ಗೆಟ್; ಉಗ್ರ ಜಾಲವನ್ನು ವಿಸ್ತರಿಸಲು ಸೋಶಿಯಲ್ ಮೀಡಿಯಾ ಬಳಸುತ್ತಿದ್ದ ಆತ್ಮಹತ್ಯಾ ಬಾಂಬರ್ ಉಮರ್
ಟಿಕೆಟ್ ಹಂಚಿಕೆಯ ಸಮಯದಲ್ಲಿ ಪ್ರತಿ ಸಂಸದರಿಗೆ, ಎನ್‌ಡಿಎ ಪಾಲುದಾರರು ಐದು-ಆರು ವಿಧಾನಸಭಾ ಸ್ಥಾನಗಳನ್ನು ಗಳಿಸಿರುವಂತೆ ಕ್ಯಾಬಿನೆಟ್ ಸ್ಥಾನಗಳಿಗೂ ಇದೇ ನಿಯಮ ಜಾರಿಯಾಗಬಹುದು. ಹೊಸ ಸರ್ಕಾರ ಸಮಾನವಾಗಿ ಅಧಿಕಾರ ಹಂಚುವಲ್ಲಿ ಹೆಚ್ಚಿನ ಗಮನ ಹರಿಸಲಿದೆ. ಎನ್‌ಡಿಎ ಜಂಟಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಿದ್ದು, ಇದರಲ್ಲಿ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.