Nikhil Kumaraswamy: ಉಡಾಫೆ ಮಾತು ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿ: ಡಿಕೆಶಿ ವಿರುದ್ಧ ನಿಖಿಲ್ ವಾಗ್ದಾಳಿ
ಶಿವ ಕುಮಾರಣ್ಣ, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.


ಬೆಂಗಳೂರು: ಶಿವಕುಮಾರಣ್ಣ, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿರುಗೇಟು ನೀಡಿದ್ದಾರೆ. ಜನತಾದಳದ ಕಾರ್ಯಕರ್ತರು ನಿಷ್ಠಾವಂತರು. ಗ್ಯಾರಂಟಿ ಅನುಷ್ಠಾನ ಸಮಿತಿ ಹೆಸರಿನಲ್ಲಿ ರಾಜ್ಯದ ಜನರ ತೆರಿಗೆ ಹಣದಲ್ಲಿ ಗೌರವಧನ ಪಡೆಯುತ್ತಿರುವ ಗಂಜಿ ಗಿರಾಕಿ ಕಾಂಗ್ರೆಸ್ ಕಾರ್ಯಕರ್ತರಲ್ಲ ಎನ್ನುವ ಮೂಲಕ ಪ್ರಾದೇಶಿಕ ಪಕ್ಷ ಮುಗಿದೋಯ್ತು ಎಂಬ ಜೆಡಿಎಸ್ ಕುರಿತ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ನಿಗಮ ಮಂಡಳಿಗಳಲ್ಲಿ ನಿಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡಲು ಯೋಗ್ಯತೆ ಇಲ್ಲದವರು ನಮ್ಮ ಕಾರ್ಯಕರ್ತರನ್ನು ಪಕ್ಷಕ್ಕೆ ಕರೆಯುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ತಾಯಿ ಚಾಮುಂಡೇಶ್ವರಿಯ ಆಶೀರ್ವಾದ, ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಮತ್ತು ಕುಮಾರಣ್ಣನವರ ವರ್ಚಸ್ಸಿನ ಮುಂದೆ ನಿಮ್ಮ ಮಾತುಗಳಿಗೆ ಕವಡೆಕಾಸಿನ ಕಿಮ್ಮತ್ತು ಕೊಡುವವರು ಯಾರು ಇಲ್ಲ ಎಂದು ಕಿಡಿಕಾರಿದ್ದಾರೆ.
ಇದೇ ಉತ್ಸಾಹ ಬೆಂಗಳೂರಿನ ರಸ್ತೆಗಳ ಗುಂಡಿ ಮುಚ್ಚುವ ಬಗ್ಗೆ ಇದ್ದಿದರೆ ಸ್ವಲ್ಪ ಮರ್ಯಾದೆಯಾದರು ಉಳಿಯುತಿತ್ತು. ಉಡಾಫೆ ಬಿಟ್ಟು ರಾಜ್ಯದ ಅಭಿವೃದ್ಧಿಯ ಬಗ್ಗೆ ಗಮನ ಹರಿಸಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Utthana Katha Spardhe 2025: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ