Hema Malini: ಕುಂಭಮೇಳ ಕಾಲ್ತುಳಿತ ಪ್ರಕರಣ ದೊಡ್ಡ ಸಂಗತಿಯೇನಲ್ಲ; ಮಾತಿನ ಭರದಲ್ಲಿ ಹೇಮಾ ಮಾಲಿನಿ ಎಡವಟ್ಟು!
ಜನವರಿ 29ರ ಮೌನಿ ಅಮಾವಾಸ್ಯೆಯಂದು ಮಹಾ ಕುಂಭಮೇಳದಲ್ಲಿ ಸಂಭವಿಸಿದ್ದ ಭೀಕರ ಕಾಲ್ತುಳಿತದಲ್ಲಿ 30 ಮಂದಿ ದಾರುಣವಾಗಿ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರವು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಈ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿರುವ ನಡುವೆಯೇ ಬಿಜೆಪಿ ಸಂಸದೆ ಹೇಮಾ ಮಾಲಿನಿ ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಅವರು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ನವದೆಹಲಿ: ಜನವರಿ 29ರ ಮೌನಿ ಅಮಾವಾಸ್ಯೆಯಂದು (Mauni Amavasya) ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ(Mahakumbh) ಸಂಭವಿಸಿದ್ದ ಭೀಕರ ಕಾಲ್ತುಳಿತದಲ್ಲಿ(Stampede) 30 ಮಂದಿ ದಾರುಣವಾಗಿ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ(Uttar Pradesh) ಸರ್ಕಾರವು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಈ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿರುವ ನಡುವೆಯೇ ಬಿಜೆಪಿ ಸಂಸದೆ ಹೇಮಾ ಮಾಲಿನಿ(Hema Malini) ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಅವರು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕಾಲ್ತುಳಿತ ಪ್ರಕರಣದ ಕುರಿತಾಗಿ ಮಾತನಾಡಿರುವ ಸಂಸದೆ ಹೇಮಾ ಮಾಲಿನಿ, ʼʼನಾವು ಕೂಡ ಕುಂಭಮೇಳಕ್ಕೆ ಹೋಗಿ ಪವಿತ್ರಾಸ್ನಾನ ಮಾಡಿ ಬಂದಿದ್ದೇವೆ. ಉತ್ತರ ಪ್ರದೇಶ ಸರ್ಕಾರವು ಎಲ್ಲವನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದೆ. ಕಾಲ್ತುಳಿತ ನಡೆದಿರುವುದು ನಿಜ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಅದು ಬಹುದೊಡ್ಡ ಘಟನೆಯಲ್ಲ. ವಿಪಕ್ಷಗಳು ಅದನ್ನು ದೊಡ್ಡದಾಗಿ ಬಿಂಬಿಸುತ್ತಿವೆʼʼ ಎಂಬ ಹೇಳಿಕೆಯನ್ನು ನೀಡುವ ಮೂಲಕ ಭಾರೀ ಟೀಕೆಗೆ ಒಳಗಾಗಿದ್ದಾರೆ. ವಿಪಕ್ಷಗಳು ಹೇಮಾ ಮಾಲಿನ ಅವರ ಮೇಲೆ ಮುಗಿಬಿದ್ದಿವೆ.
BJP सरकार के नाकारेपन की वजह से कुंभ में बड़ी संख्या में लोगों को जान गंवानी पड़ी।
— Congress (@INCIndia) February 4, 2025
इस बेहद दुखद घटना पर BJP सांसद हेमा मालिनी का कहना है-
'ये इतनी भी बड़ी घटना नहीं थी, इसको बढ़ा-चढ़ाकर बताया जा रहा है'
ये बयान शर्मनाक है, संवेदनहीनता की इंतेहा है।
पहले दिन से ही BJP की… pic.twitter.com/byFOAWY8m3
ʼʼಕುಂಭಮೇಳವನ್ನು ಬಹಳ ವ್ಯವಸ್ಥಿತವಾಗಿ ನಿರ್ವಹಿಸಲಾಗುತ್ತಿದೆ. ಎಲ್ಲವೂ ಚೆನ್ನಾಗಿ ನಡೆಯುತ್ತಿದೆ. ಕೋಟ್ಯಂತರ ಭಕ್ತರು ಅಲ್ಲಿ ಸೇರುತ್ತಿದ್ದಾರೆ. ನಿರ್ವಹಣೆಯು ಕಷ್ಟವಾದರೂ ನಮ್ಮಿಂದ ಸಾಧ್ಯವಾದಷ್ಟು ಮಾಡಲಾಗುತ್ತಿದೆ. ಇದು ವಿಪಕ್ಷಗಳ ಕೆಲಸ. ಅವರಿಗೆ ತೋಚಿದ್ದನ್ನು ಹೇಳುತ್ತಲೇ ಇರುತ್ತಾರೆʼʼ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಈ ಸುದ್ದಿಯನ್ನೂ ಓದಿ:Jaya Bachchan: ಕಾಲ್ತುಳಿತದಲ್ಲಿ ಸತ್ತವರ ಶವಗಳನ್ನು ನದಿಗೆ ಎಸೆಯಲಾಗಿದೆ; ಜಯಾ ಬಚ್ಚನ್ ಕಿಡಿ!
ಹೇಮಾ ಮಾಲಿನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ತಾರಿಕ್ ಅನ್ವರ್, ʼʼಕಾಲ್ತುಳಿತದ ಬಗ್ಗೆ ಹೇಳಿಕೆ ನೀಡಿರುವ ಸಂಸದೆ ಹೇಮಾ ಮಾಲಿನಿ ಅವರಿಗೆ ಅಲ್ಲಿ ಏನು ನಡೆದಿದೆ ಎಂದು ನಿಜವಾಗಿಯೂ ತಿಳಿದಿಲ್ಲ. ಕುಂಭಮೇಳ ಶುರುವಾದಾಗಿನಿಂದಲೂ ಸರ್ಕಾರ ಅದರ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪೊಲೀಸರು ವಿಐಪಿಗಳಿಗೆ ಭದ್ರತೆ ನೀಡುವಲ್ಲಿ ಬ್ಯುಸಿಯಾಗಿದ್ದರು. ಸಾಮಾನ್ಯ ಜನರ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲʼʼ ಎಂದು ಕಿಡಿಕಾರಿದ್ದಾರೆ. ಸದ್ಯ ಹೇಮಾ ಮಾಲಿನಿ ಅವರ ಹೇಳಿಕೆಯಿಂದ ಕೋಲಾಹಲ ಉಂಟಾಗಿದೆ.