ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HD Kumaraswamy: ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದ ಎಚ್.ಡಿ. ಕುಮಾರಸ್ವಾಮಿ

Karnataka Government: ಮಂಡ್ಯದ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ, ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಇನ್ನೂ ಸರ್ಕಾರ ನಮಗೆ ಜಾಗ ನೀಡಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಮಂಡ್ಯ, ಡಿ.6: ರಾಜ್ಯ ಸರ್ಕಾರದ (Karnataka Government) ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಕಳೆದ ಒಂದು ವರ್ಷದಿಂದ ಕೈಗಾರಿಕೆ ಸ್ಥಾಪನೆಗೆ ಜಾಗ ಹುಡುಕಲು ಜಿಲ್ಲಾಧಿಕಾರಿಗೆ ಹೇಳುತ್ತಿದ್ದೇನೆ. ಇನ್ನೂ ಜಾಗ ಸಿಕ್ಕಿಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಇಲ್ಲಿನ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಇನ್ನೂ ಸರ್ಕಾರ ನಮಗೆ ಜಾಗ ನೀಡಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ನನ್ನ ಇಲಾಖೆಯಿಂದ ಸಾಧ್ಯವಾಗುವ ಕೆಲಸಗಳನ್ನು ಮಾಡುತ್ತಿದ್ದೇನೆ. ಭದ್ರಾವತಿಯಲ್ಲಿರುವ ಸರ್‌. ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ ಚಿಂತನೆ ನಡೆಸಲಾಗಿದೆ. ಇತ್ತೀಚೆಗೆ ನಾನು ಆ ಕಾರ್ಖಾನೆಗೆ ಎರಡನೇ ಸಲ ಭೇಟಿ ನೀಡಿದ್ದೆ ಎಂದು ಅವರು ಹೇಳಿದರು.

ಕೃಷಿ ಮೇಳ ಅತ್ಯಂತ ಯಶಸ್ವಿಯಾಗಿದೆ. ಪ್ರತಿ ಗ್ರಾಮ ಗ್ರಾಮಕ್ಕೂ ಈ ಮೇಳದ ಉದ್ದೇಶ ತಲುಪಿದೆ. ಕೇಂದ್ರ ಸರ್ಕಾರವು ಕೃಷಿ ವಲಯಕ್ಕೆ 1.32 ಲಕ್ಷ ಕೋಟಿ ಅನುದಾನ ಹಂಚಿಕೆ ಮಾಡಿದೆ. ಮೆಕ್ಕೆಜೋಳ ಖರೀದಿಸುವಂತೆ ರೈತರು ಪ್ರತಿಭಟನೆ ಮಾಡ್ತಿದ್ದಾರೆ. ಖರೀದಿ ಕೇಂದ್ರ ತೆರೆದು MSP ದರದಲ್ಲಿ ರಾಜ್ಯ ಸರ್ಕಾರ ಖರೀದಿ ಮಾಡಬೇಕು. ಆದರೆ ಪಶು ಆಹಾರ ತಯಾರಕರ ಸಭೆ ನಡೆಸಿ, KMFಗೆ 50 ಸಾವಿರ ಕೆಜಿ ಮೆಕ್ಕೆಜೋಳ ಖರೀದಿಸುವಂತೆ ಹೇಳಿ ಸರ್ಕಾರ ಕೈ ತೊಳೆದುಕೊಂಡಿದೆ. ನಾನು ಸಿಎಂ ಆಗಿದ್ದಾಗ 2 ಅವಧಿಯಲ್ಲೂ ರೈತರು ತಮ್ಮ ಬೆಳೆ ಮಾರಾಟ ಮಾಡಲಾಗದೆ ಪ್ರತಿಭಟಿಸಲಿಲ್ಲ ಎಂದರು. ಆಧುನಿಕ ಉಪಕರಣಗಳನ್ನು ರೈತರು ಬಳಸಿದರೆ 50% ಹಣ ಉಳಿತಾಯ ಮಾಡಬಹುದು. ಕೃಷಿ ವಿಜ್ಞಾನಿಗಳ ಸಂಶೋಧನೆ ರೈತನ ಮನೆ ಮುಟ್ಟಬೇಕು ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.

ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಗ್ಯಾರಂಟಿ ಸ್ಕೀಮ್‌ಗಳ ಬಗ್ಗೆ ಚರ್ಚೆ ಮಾಡ್ತಾರೆ. ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗೋಡೌನ್, ಕೋಲ್ಡ್ ಸ್ಟೋರೇಜ್ ನಿರ್ಮಾಣವಾಗಬೇಕು. ರೈತ ಬೆಳೆದ ಬೆಳೆಗಳಿಗೆ 75% ಅಡ್ವಾನ್ಸ್ ಸರ್ಕಾರದಿಂದ ಕೊಡಬೇಕು. ಮಾರಾಟ ಮಾಡಿದ ಬಳಿಕ ರೈತ ಅಡ್ವಾನ್ಸ್ ಹಣ ಸರ್ಕಾರಕ್ಕೆ ಕಟ್ಟಬೇಕು. ಆಗ ಮಧ್ಯವರ್ತಿಗಳ ಹಾವಳಿ ತಪ್ಪುತ್ತದೆ. ಇದೆಲ್ಲಾ ನನ್ನ ಮುಂದಿರುವ ಕಾರ್ಯಕ್ರಮಗಳು. ಮುಂದಿನ ದಿನಗಳಲ್ಲಿ ನೀವೆಲ್ಲಾ ಬುದ್ದಿವಂತರಾದರೆ ನಾನು ಜಾರಿ ಮಾಡಬಹುದು. ಎಂತೆಂತಹ ಸರ್ಕಾರಗಳನ್ನು ನೋಡಿದ್ದೀರಾ, ಮಂಡ್ಯದಂತಹ ಜಿಲ್ಲೆಗಳು ಸೇರಿ 36 ಸೀಟುಗಳನ್ನು ನೀಡಿದ್ದಿರಿ. ಯಾವತ್ತೂ ಪೂರ್ಣ ಪ್ರಮಾಣದ ಸರ್ಕಾರ ನಡೆಯಲು ಅವಕಾಶ ಸಿಕ್ಕಿಲ್ಲ ಎಂದು ಸಚಿವರು ಹೇಳಿದರು.

ನನ್ನ ಮೇಲೆ ಅನುಮಾನ ಬೇಡ, ನಾನೆಲ್ಲೇ ಇದ್ದರೂ ನನ್ನ ಹೃದಯದಲ್ಲಿ ಮಂಡ್ಯಕ್ಕೆ ಮೊದಲ‌ ಸ್ಥಾನ. ಪ್ರತಿಭಟನಾನಿರತ ಅಂಗನವಾಡಿ ಕಾರ್ಯಕರ್ತೆಯರನ್ನು ನವದೆಹಲಿಗೆ ಕರೆಸಿ ಸಂಬಂಧಿಸಿದ ಸಚಿವರನ್ನ ಭೇಟಿ ಮಾಡಿಸಿದೆ. ಅವರ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಕನಿಷ್ಠ ಪರಿಹಾರವಾದರೂ ಸಿಗಲಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಮೈಶುಗರ್‌ ಶಾಲೆ ಶಿಕ್ಷಕರಿಗೆ ನೆರವಾದ ಎಚ್.ಡಿ. ಕುಮಾರಸ್ವಾಮಿ

ಮಂಡ್ಯ ಕೃಷಿ ಮೇಳದ ಊಟದ ವೆಚ್ಚ ಭರಿಸಿದ ಕೇಂದ್ರ ಸಚಿವರು

ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರು, ಮಕ್ಕಳಿಗೆ ಮೂರು ದಿನಗಳ ಕಾಲ ಊಟಕ್ಕೆ ಆಗುವ ವೆಚ್ಚವನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರಿಸಿದ್ದಾರೆ. ಕೃಷಿ ಮೇಳದಲ್ಲಿ ಶನಿವಾರ ಪಾಲ್ಗೊಂಡಿದ್ದ ಸಚಿವರು, ಮೇಳದಲ್ಲಿ ಭೋಜನಕ್ಕಾಗಿ ಜನರಿಂದ ಹಣ ಪಡೆದು ಊಟ ನೀಡುತ್ತಿದ್ದ ಸಂಘಟಕರು, ಮಕ್ಕಳ ಊಟಕ್ಕೆ 20 ರೂಪಾಯಿ, ಹಿರಿಯರ ಊಟಕ್ಕೆ 30 ರೂಪಾಯಿ ಚಾರ್ಜ್‌ ಮಾಡುತ್ತಿದ್ದರು. ಈ ವಿಷಯ ತಮ್ಮ ಗಮನಕ್ಕೆ ಬಂದ ಕೂಡಲೇ ಸ್ಪಂದಿಸಿದ ಸಚಿವರು; ಊಟಕ್ಕೆ ಹಣ ಪಡೆಯಬೇಡಿ. ಮೂರು ದಿನದ ಅಷ್ಟೂ ಊಟದ ವೆಚ್ಚ ಭರಿಸುವುದಾಗಿ ಭರವಸೆ ನೀಡಿದರಲ್ಲದೆ, ಸ್ಥಳದಲ್ಲಿಯೇ ಕೃಷಿ ಮೇಳ ಸಂಘಟಕರಿಗೆ ಹಣವನ್ನು ನೀಡಿದರು.