ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬದರಿನಾಥದಲ್ಲಿನ ಸಾಂಸ್ಕೃತಿಕ ಉತ್ಸವಕ್ಕೆ ಆಕ್ಷೇಪ: ಬಿಜೆಪಿಗೆ ಮುಜುಗರ ಉಂಟು ಮಾಡಿದ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ಕಾಕ್ರೋಚ್ ಜನತಾ ಪಕ್ಷ ನಡೆಸಿದ ಪ್ರತಿಭಟನೆಯನ್ನು ಬೆಂಬಲಿಸಿ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ಇದೀಗ ಮತ್ತೊಮ್ಮೆ ಬದರಿನಾಥದಲ್ಲಿ ನಡೆದ ಸಾಂಸ್ಕೃತಿಕ ಉತ್ಸವಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧವೇ ಹರಿಹಾಯ್ದಿದ್ದಾರೆ.

ಸಂಗ್ರಹ ಚಿತ್ರ

ನವದೆಹಲಿ: ಚುನಾವಣಾ ಅಕ್ರಮದ (Electoral Malpractice) ಆರೋಪ ಕೇಳಿ ಬಂದಿರುವ ಹೊತ್ತಿನಲ್ಲಿ ಇದೀಗ ಹಿರಿಯ ನಾಯಕರೊಬ್ಬರು ಬಿಜೆಪಿಯನ್ನು (bjp) ಟೀಕಿಸಿ ಮುಜುಗರ ಉಂಟಾಗುವಂತೆ ಮಾಡಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (NEET paper leak) ಹಿನ್ನೆಲೆಯಲ್ಲಿ ಕಳೆದ ಜುಲೈ ತಿಂಗಳಲ್ಲಿ ಕಾಕ್ರೋಚ್ ಜನತಾ ಪಕ್ಷದ (Cockroach Janata Party) ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಬೆಂಬಲಿಸಿದ್ದ ಮಾಜಿ ಕೇಂದ್ರ ಸಚಿವ ಮತ್ತು ಪಕ್ಷದ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ (Murli Manohar Joshi) ಅವರು ಇದೀಗ ಮತ್ತೊಮ್ಮೆ ಬದರಿನಾಥದಲ್ಲಿ ನಡೆದ ಸಾಂಸ್ಕೃತಿಕ ಉತ್ಸವಕ್ಕೆ (Badrinath cultural festival) ಸಂಬಂಧಿಸಿ ಬಿಜೆಪಿ ಆಡಳಿತವನ್ನು ಟೀಕಿಸಿದ್ದಾರೆ.

ಈ ಕುರಿತು ಶುಕ್ರವಾರ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಾದ ಎಕ್ಸ್ ನಲ್ಲಿ ಬರೆದಿರುವ ಅವರು, ಪ್ರಮುಖ ಧಾರ್ಮಿಕ ಸ್ಥಳಗಳ ಸಮೀಪದಲ್ಲಿ ನಡೆಯುವ ಜೋರಾದ ಸಂಗೀತ ಕಾರ್ಯಕ್ರಮಗಳನ್ನು ಖಂಡಿಸಿದ್ದಾರೆ. ಕಳೆದ ಸೆಪ್ಟೆಂಬರ್ 19- 20 ರಂದು ನಡೆದ 'ದೇವಭೂಮಿ ಸಾಂಸ್ಕೃತಿಕ ಉತ್ಸವ'ದ ಭಾಗವಾಗಿ ಬದರಿನಾಥ ದೇವಾಲಯದ ಸಮೀಪದಲ್ಲಿ ಜೋರಾದ ಸಂಗೀತ ಕಾರ್ಯಕ್ರಮಗಳನ್ನು ನಡೆಸಲಾಗಿತ್ತು. ಇದಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ; ಬಿಜೆಪಿ ಕಾರ್ಯಕರ್ತನ ಗುಂಡಿಟ್ಟು ಹತ್ಯೆ

ಬದರಿನಾಥ ಧಾಮದಲ್ಲಿ ಸಂಗೀತ ಕಾರ್ಯಕ್ರಮಕ್ಕೆ ಅಧಿಕಾರಿಗಳು ಏಕೆ ಅನುಮತಿ ನೀಡಿದರು ಪ್ರಶ್ನಿಸಿರುವ ಅವರು, ಇದು ಸಾಂಸ್ಕೃತಿಕ ಮರ್ಯಾದೆಯ ಉಲ್ಲಂಘನೆಯಾಗಿದೆ. ದೇವಾಲಯದ ಪಾವಿತ್ರ್ಯತೆಯ ಮೇಲಿನ ಆಕ್ರಮಣ ಎಂದು ಹೇಳಿದ್ದಾರೆ.

ಶಾಂತಿ, ಭಕ್ತಿಗಾಗಿ ಆದಿ ಗುರು ಶಂಕರಾಚಾರ್ಯರು ಹಿಮಾಲಯ ಪರಿಸರದಲ್ಲಿ ಈ ಧಾಮವನ್ನು ಸ್ಥಾಪಿಸಿದ್ದರು. ಇಲ್ಲಿ ಶಂಖ ಊದುವುದನ್ನೂ ನಿಷೇಧಿಸಲಾಗಿದೆ. ಆದರೆ ಇವನ್ನು ಕಡೆಗಣಿಸಿ ಗದ್ದಲದ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿ ಭಾರತದ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಪರಿಸರ ಮೌಲ್ಯಗಳನ್ನು ನಿರ್ಲಕ್ಷಿಸಿದ್ದೇವೆ. ಇಷ್ಟು ಎತ್ತರದ ಪ್ರದೇಶದಲ್ಲಿ ಸಾವಿರಾರು ಜನರಿಗೆ ನೃತ್ಯ ಮಾಡಲು ಅವಕಾಶ ನೀಡಿ ಅವರ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ಜೋಶಿ ಅವರು ಕಳೆದ ಜುಲೈ ತಿಂಗಳಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬೆಂಬಲಿಸಿ ಮಾತನಾಡಿದ್ದರು. ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮವನ್ನು ಖಂಡಿಸಿದ್ದ ಅವರು ಅದು ಕ್ರೂರ ಬಲಪ್ರಯೋಗ. ವಿದ್ಯಾರ್ಥಿಗಳ ಆತಂಕಗಳು ನ್ಯಾಯಯುತ ಎಂದು ಪ್ರತಿಪಾದಿಸಿದ್ದರು.

ಸರ್ಕಾರದ ಧೋರಣೆ, ಬಲಪ್ರಯೋಗದ ಕ್ರಮವು ಭಾರತೀಯ ಸಮಾಜದ ದೊಡ್ಡ ವರ್ಗಗಳನ್ನು 'ವಿಕಸಿತ ಭಾರತ'ದ ರಾಷ್ಟ್ರೀಯ ಗುರಿಯಿಂದ ದೂರವಾಗಿಸುತ್ತದೆ ಎಂದು ಎಚ್ಚರಿಸಿದ್ದ ಅವರು, ದೇಶದ ವಿವಿಧ ಭಾಗಗಳಿಂದ ಬಂದ ಯುವ ವಿದ್ಯಾರ್ಥಿಗಳು ನವದೆಹಲಿಯ ಬೀದಿಗಳಲ್ಲಿ ದಿನಗಟ್ಟಲೆ ಜಮಾಯಿಸಿರುವುದನ್ನು ನೋಡುವುದು ನೋವಿನ ಸಂಗತಿಯಾಗಿದೆ ಎಂದು ಹೇಳಿದ್ದರು.

ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಶಾಂತಿಯುತವಾಗಿ ಚಳವಳಿಯನ್ನು ಕೊನೆಗೊಳಿಸಿದ್ದಕ್ಕೆ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಜೋಶಿ, ಬಳಿಕ ಸಂದರ್ಶನವೊಂದರಲ್ಲಿ ಸರ್ಕಾರದ ಶಿಕ್ಷಣ ನೀತಿಯನ್ನು ತೀವ್ರವಾಗಿ ಟೀಕಿಸಿದ್ದರು.

ಸತತ 10 ಗಂಟೆ ಕಾರ್ಯಾಚರಣೆ: ಕೊಳವೆ ಬಾವಿಗೆ ಬಿದ್ದ 3 ವರ್ಷದ ಬಾಲಕಿಯ ರಕ್ಷಣೆ

ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಜೋಶಿಯವರು ಪಠ್ಯಕ್ರಮ ಹಾಗೂ ಇತಿಹಾಸ ಪಠ್ಯಪುಸ್ತಕಗಳನ್ನು ಬದಲಾಯಿಸಿ ಟೀಕೆಗೊಳಗಾಗಿದ್ದರು. 2014 ರ ರಾಷ್ಟ್ರೀಯ ಚುನಾವಣೆ ವೇಳೆ ಪ್ರಧಾನ ಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧವೇ ಮಾತನಾಡಿ ಎಲ್ಲರ ಗಮನ ಸೆಳೆದಿದ್ದರು.

ವಿದ್ಯಾ ಇರ್ವತ್ತೂರು

View all posts by this author