ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Hindi Imposition: ಕೇಂದ್ರ ವರ್ಸಸ್‌ ತಮಿಳುನಾಡು ಸರ್ಕಾರ- ಹಿಂದಿ ಹೇರಿಕೆ ಎಂದ ಸ್ಟ್ಯಾಲಿನ್‌ಗೆ ಪ್ರಧಾನ್‌ ಟಾಂಗ್‌

ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ ವ್ಯಕ್ತಪಡಿಸುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕಿಡಿಕಾರಿದ್ದಾರೆ. ತಮಿಳುನಾಡಿನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಈ ನೀತಿ ನೀಡುವ ಅಪಾರ ಅವಕಾಶಗಳು ಮತ್ತು ಸಂಪನ್ಮೂಲಗಳಿಂದ ವಂಚಿತವಾಗುತ್ತವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಹಿಂದಿ ಹೇರಿಕೆ ಆರೋಪ-ಸಿಎಂ ಸ್ಟಾಲಿನ್‌ಗೆ ಕೇಂದ್ರ ಸಚಿವ ಪ್ರಧಾನ್‌ ಪತ್ರ

ಧರ್ಮೇಂದ್ರ ಪ್ರಧಾನ್‌

Profile Vishakha Bhat Feb 21, 2025 4:34 PM

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ (NEP-2020)ಗೆ ವಿರೋಧ ವ್ಯಕ್ತಪಡಿಸುವ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಕಿಡಿ ಕಾರಿದ್ದಾರೆ. ತಮಿಳುನಾಡು ಸರ್ಕಾರ ಎನ್‌ಇಪಿ-2020ನ್ನು ವೀರೋಧಿಸುತ್ತಿದೆ. ರಾಜಕೀಯವಾಗಿ ನೋಡುವುದನ್ನು ಬಿಟ್ಟು ಸರ್ಕಾರ ಯೋಜನೆಯ ಪ್ರಗತಿಶೀಲ ಸುಧಾರಣೆಗಳನ್ನು ವಿಶಾಲ ಮನೋಭಾವದಿಂದ ಕಾಣಬೇಕೆಂದು ಅವರು ಒತ್ತಾಯಿಸಿದ್ದಾರೆ(Hindi Imposition). ವಿರೋಧ ಇರುವುದರಿಂದ ತಮಿಳುನಾಡಿನ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಈ ನೀತಿ ನೀಡುವ ಅಪಾರ ಅವಕಾಶಗಳು ಮತ್ತು ಸಂಪನ್ಮೂಲಗಳಿಂದ ವಂಚಿತವಾಗುತ್ತವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಈ ಬಗ್ಗೆ ಸ್ಟಾಲಿನ್‌ ಅವರಿಗೆ ಪತ್ರ ಬರೆದಿರುವ ಧರ್ಮೇಂದ್ರ ಪ್ರಧಾನ್‌ ಯಾವುದೇ ರಾಜ್ಯ ಅಥವಾ ಸಮುದಾಯದ ಮೇಲೆ ಯಾವುದೇ ಭಾಷೆಯನ್ನು ಹೇರುವ ಪ್ರಶ್ನೆಯೇ ಇಲ್ಲಎಂದು ಸ್ಪಷ್ಟವಾಗಿ ಹೇಳಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಅನೇಕ ಬಿಜೆಪಿಯೇತರ ರಾಜ್ಯಗಳು NEP ಯ ಪ್ರಗತಿಪರ ನೀತಿಗಳನ್ನು ಜಾರಿಗೆ ತಂದಿವೆ. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಸಮಗ್ರ ಶಿಕ್ಷಣದಂತಹ ಕೇಂದ್ರೀಕೃತ ಬೆಂಬಲಿತ ಕಾರ್ಯಕ್ರಮಗಳು NEP 2020 ನೊಂದಿಗೆ ಹೊಂದಿಕೆಯಾಗುತ್ತವೆ ಮತ್ತು ಪಿಎಂ ಶ್ರೀ ಶಾಲೆಗಳನ್ನು NEP ಮಾದರಿ ಶಾಲೆಗಳೆಂದು ಕಲ್ಪಿಸಲಾಗಿದೆ ಎಂದು ಒತ್ತಿ ಹೇಳಿದ್ದಾರೆ.



ನಿನ್ನೆ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಅದರಲ್ಲಿ ಕೇಂದ್ರ ಪ್ರಾಯೋಜಿತ ಎರಡು ಉಪಕ್ರಮಗಳಾದ ಸಮಗ್ರ ಶಿಕ್ಷಾ ಅಭಿಯಾನ (SSA) ಮತ್ತು ಪಿಎಂಶ್ರೀ ಶಾಲೆಗಳನ್ನು ರಾಷ್ಟ್ರೀಯ ಶಿಕ್ಷಣ ನೀತಿಯೊಂದಿಗೆ ಜೋಡಿಸಲು ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮೂಲಭೂತವಾಗಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದರು.

ಈ ಸುದ್ದಿಯನ್ನೂ ಓದಿ: Physical Assault: ಅಣ್ಣಾ ವಿವಿ ಅತ್ಯಾಚಾರ ಪ್ರಕರಣ; ಉದಯ್‌ ನಿಧಿ ಸ್ಟಾಲಿನ್‌ ಜತೆ ಆರೋಪಿ ಫೋಟೊ! ಬಿಜೆಪಿ ಕಿಡಿ

ಈ ಬಗ್ಗೆ ಪ್ರತಕ್ರಿಯೆ ನೀಡಿರುವ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಕೇಂದ್ರ ಶಿಕ್ಷಣ ಸಚಿವರ ವಿರುದ್ಧ ವಾಗ್ದಾಳಿ ನಡೆಸಿ, ರಾಜ್ಯವು ದ್ವಿಭಾಷಾ ನೀತಿಯನ್ನು ಮಾತ್ರ ಅನುಸರಿಸುತ್ತದೆ ಎಂದು ಹೇಳಿದ್ದಾರೆ. ನಾವು ನಮ್ಮ ಪಾಲಿನ ಹಣವನ್ನು ಸುಮಾರು 2150 ಕೋಟಿ ರೂಪಾಯಿಗಳನ್ನು ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರ ಎನ್‌ಇಪಿ ಮತ್ತು ತ್ರಿಭಾಷಾ ನೀತಿಯನ್ನು ಒಪ್ಪಿಕೊಳ್ಳಬೇಕೆಂದು ಬಯಸುತ್ತದೆ. ತಮಿಳುನಾಡು ಯಾವಾಗಲೂ ತ್ರಿಭಾಷಾ ನೀತಿಯನ್ನು ವಿರೋಧಿಸುತ್ತಿದೆ, ಇದರಲ್ಲಿ ರಾಜಕೀಯ ಮಾಡಲು ಏನಿದೆ ಎಂದು ತಿರುಗೇಟು ನೀಡಿದ್ದರು.