ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Vande Mataram: ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣ ಮಾತ್ರ ಹಾಡಲು ಆದೇಶ

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ "ವಂದೇ ಮಾತರಂ" ರಾಷ್ಟ್ರೀಯ ಗೀತೆಯ ವಾದನ, ಗಾಯನಕ್ಕೆ ಸಂಬಂಧಿಸಿ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರ ಕಾಯ್ದುಕೊಳ್ಳುವ ಅಗತ್ಯವನ್ನು ರಾಜ್ಯ ಸರ್ಕಾರವು ಪರಿಗಣಿಸಿ ಈ ನಿರ್ಧಾರವನ್ನು ಕೈಗೊಂಡಿದೆ.

ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ 2 ಚರಣ ಮಾತ್ರ ಹಾಡಲು ಆದೇಶ

ಸಾಂದರ್ಭಿಕ ಚಿತ್ರ. -

Prabhakara R
Prabhakara R Sep 10, 2026 3:11 PM

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸುವ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಗೀತೆಯ (Vande Mataram) ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಕಾರ್ಯಕ್ರಮಗಳ ಸ್ವರೂಪಕ್ಕೆ ತಕ್ಕಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಈ ಕ್ರಮ ಜರುಗಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ತಿಳಿಸಿದೆ.

ಸಚಿವ ಸಂಪುಟದ ತೀರ್ಮಾನದಂತೆ ಈ ನಿರ್ಧಾರ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ವಿಶೇಷ ಮತ್ತು ಉನ್ನತ ಮಟ್ಟದ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಉಳಿದಂತೆ ರಾಜ್ಯ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಭಾರತದ ರಾಷ್ಟ್ರೀಯ ಚಳವಳಿ ಸಂದರ್ಭದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಮೂಡಿಸುವಲ್ಲಿ "ವಂದೇ ಮಾತರಂ" ಗೀತೆಯು ಮಹತ್ವದ ಪಾತ್ರವನ್ನು ವಹಿಸಿರುತ್ತದೆ.

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು 'ವಂದೇ ಮಾತರಂ" ರಾಷ್ಟ್ರೀಯ ಗೀತೆಯ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದಂತೆ ಸಂದರ್ಭಾನುಸಾರ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಭಾರತ ಸರ್ಕಾರದ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ (Playing) ಮತ್ತು ಸಾಮೂಹಿಕ ಗಾಯನಕ್ಕೆ (Mass Singing)ಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.

ವಂದೇ ಮಾತರಂ ಗೀತೆಗೆ ಎದ್ದು ನಿಂತು ಗೌರವ ಸಲ್ಲಿಸಿದ ಫಾರೂಕ್-ಒಮರ್‌ ಅಬ್ದುಲ್ಲಾ: ಕಾಂಗ್ರೆಸ್‌ನಿಂದ ತೀವ್ರ ಅಸಮಾಧಾನ, ಇಂಡಿಯಾ ಕೂಟದಲ್ಲಿ ಮತ್ತೆ ಶುರುವಾಯಿತು ಬಿರುಕು

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ "ವಂದೇ ಮಾತರಂ" ರಾಷ್ಟ್ರೀಯ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರ್ಕಾರವು ಪರಿಗಣಿಸಿ, ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.