Pralhad Joshi: ರಾಜ್ಯದಲ್ಲಿ ಜನನ-ಮರಣ ಪ್ರಮಾಣ ಪತ್ರ ಶುಲ್ಕ ಹತ್ತುಪಟ್ಟು ಹೆಚ್ಚಳ; ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಇದು ಕೈಗನ್ನಡಿ: ಜೋಶಿ ಆರೋಪ
Pralhad Joshi: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.10 ರಷ್ಟು ತೆರಿಗೆ ಹಂಚಿಕೆ ಪಾಲು ಅಧಿಕಗೊಳಿಸಿ ಅನುದಾನ ಒದಗಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರದ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
![Pralhad Joshi](https://cdn-vishwavani-prod.hindverse.com/media/images/Pralhad_Joshi.max-1280x720.jpg)
![Profile](https://vishwavani.news/static/img/user.png)
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಜನನ-ಮರಣ ಪ್ರಮಾಣ ಪತ್ರಕ್ಕೂ ಹತ್ತುಪಟ್ಟು ಶುಲ್ಕ ಹೆಚ್ಚಿಸಿ ಜನರನ್ನು ಲೂಟಿ ಮಾಡುವ ತನ್ನ ನಿಜ ಸ್ವರೂಪ ತೋರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ತಮ್ಮ ʼಎಕ್ಸ್ʼ ಖಾತೆಯಲ್ಲಿ ತೀವ್ರವಾಗಿ ಖಂಡಿಸಿರುವ ಸಚಿವರು, ಕಾಂಗ್ರೆಸ್ ಸರ್ಕಾರದ ಬೆಲೆ ಹೆಚ್ಚಳ ಪಟ್ಟಿಯಲ್ಲಿ ಇದೊಂದು ಬಾಕಿ ಇತ್ತೇನೋ? ಎಂದು ಹರಿಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇದೀಗ ಜನನ ಮತ್ತು ಮರಣ ಪ್ರಮಾಣ ಪತ್ರದ ಶುಲ್ಕವನ್ನು 5 ರಿಂದ 50 ರೂಪಾಯಿಗೆ ಹೆಚ್ಚಿಸಿ ಶ್ರೀಸಾಮಾನ್ಯರು ಹುಟ್ಟು - ಸಾವಿಗೂ ದಂಡ ತೆರುವಂತೆ ಮಾಡಿದೆ ಎಂದು ಜೋಶಿ ಕಿಡಿಕಾರಿದ್ದಾರೆ.
ಜನಸಾಮಾನ್ಯರ ಅಗತ್ಯತೆಗಳ ಬೆಲೆ ಏರಿಸಿ ಬರೆ ಎಳೆದಿದೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ನೀರಿನ ಕರ, ನಂದಿನಿ ಹಾಲು, ಪಹಣಿ ಶುಲ್ಕ, ಪೆಟ್ರೋಲ್, ಡಿಸೇಲ್, ಅಬಕಾರಿ ಸುಂಕ, ವಿದ್ಯುತ್ ಬಿಲ್ ಹೀಗೆ ಜನಸಾಮಾನ್ಯರ ಅಗತ್ಯತೆಗಳ ಬೆಲೆ ಏರಿಸಿ ಬರೆ ಎಳೆದಿದೆ. ಈಗ ಜನನ-ಮರಣ ಪ್ರಮಾಣ ಪತ್ರದ ಶುಲ್ಕವೂ ಸಾಲದಾಯಿತೇ? ಎಂದು ಸಚಿವರು ಪ್ರಶ್ನಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Employment News: 86 ಲಕ್ಷ ಭಾರತೀಯರಿಗೆ ಉದ್ಯೋಗ ಕೊಟ್ಟ ನೇರ ಮಾರುಕಟ್ಟೆ; 8 ರಾಜ್ಯಗಳಿಂದ 1854 ಕೋಟಿ ರೂ. ವಹಿವಾಟು
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.10 ರಷ್ಟು ತೆರಿಗೆ ಹಂಚಿಕೆ ಪಾಲು ಅಧಿಕಗೊಳಿಸಿ ಅನುದಾನ ಒದಗಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಜನನ-ಮರಣ ಪ್ರಮಾಣ ಪತ್ರದ ಶುಲ್ಕವನ್ನು ಹತ್ತುಪಟ್ಟು ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.