ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮುಂದಿನ ವರ್ಷದಿಂದ ಬಸ್ ವ್ಯವಸ್ಥೆ ಜತೆಗೆ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ: ಸಚಿವ ಮಧು ಬಂಗಾರಪ್ಪ

Madhu Bangarappa: ವಿಜಯಪುರ ನಗರದ ಗಾಂಧಿ ಚೌಕ್ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದ್ದಾರೆ. ರಾಜ್ಯದಲ್ಲಿ ಶಾಲೆಗಳ ಸುಧಾರಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ವಿವರಿಸಿದ್ದಾರೆ.

ಮುಂದಿನ ವರ್ಷದಿಂದ ಬಸ್ ವ್ಯವಸ್ಥೆ ಜತೆಗೆ LKGಯಿಂದ 12ನೇ ತರಗತಿವರೆಗೆ ಶಿಕ್ಷಣ

-

Profile
Siddalinga Swamy Nov 14, 2026 7:56 PM

ವಿಜಯಪುರ, ನ.14: ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಶಿಕ್ಷಣ ಒದಗಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು. ಇದಕ್ಕಾಗಿ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಭರವಸೆ ನೀಡಿದರು. ನಗರದ ಗಾಂಧಿ ಚೌಕ್ ಸಮೀಪದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‌

ಬಂಗಾರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಜಾರಿಗೆ ತಂದ ಗ್ರಾಮೀಣ ಕೃಪಾಂಕದ ಮೂಲಕ ಅದೆಷ್ಟೋ ಯುವಕರಿಗೆ ಉದ್ಯೋಗಾವಕಾಶಗಳು ದೊರೆತಿವೆ. ಮೆಗಾ ಪೋಷಕರ-ಶಿಕ್ಷಕರ ಸಭೆ (Mega PTM) ಮೂಲಕ 42 ಸಾವಿರ ಶಾಲೆಗಳನ್ನು ಆನ್‌ಲೈನ್ ವ್ಯವಸ್ಥೆಗೆ ತರಲಾಗಿದೆ. ಪೋಷಕರ ಸಭೆಗಳ ಮೂಲಕ ಶಾಲೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Minister Madhu Bangarappa

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ದೊರೆಯುವ ಪ್ರಾಥಮಿಕ ಶಿಕ್ಷಣ ಅವರ ಭವಿಷ್ಯದ ಬದುಕಿಗೆ ಭದ್ರ ಬುನಾದಿಯಾಗಿದೆ. ಮಕ್ಕಳಿಗೆ ಸೂಕ್ತ ಅವಕಾಶಗಳು ದೊರೆತಾಗ ಅವರಲ್ಲಿನ ಜ್ಞಾನ, ಪ್ರತಿಭೆ ಮತ್ತು ಸಾಮರ್ಥ್ಯ ಅನಾವರಣಗೊಳ್ಳಲು ಸಾಧ್ಯ. ಇದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಶಿಕ್ಷಕರು ಶಾಲೆಯ ಹೃದಯವಿದ್ದಂತೆ. ಉತ್ತಮ ಶಿಕ್ಷಕರಿಂದಲೇ ಶಾಲೆಗೆ ಶೋಭೆ. ಶಿಕ್ಷಕ-ಶಿಕ್ಷಕಿಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರ ನೀಡಿದರೆ, ಅದು ಅವರ ಭವಿಷ್ಯವನ್ನು ರೂಪಿಸುವುದರ ಜತೆಗೆ ಸಮಾಜದ ಒಳಿತಿಗೂ ಕಾರಣವಾಗುತ್ತದೆ ಎಂದು ತಿಳಿಸಿದರು.

ಒಂದೆರಡು ದಿನಗಳಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕದ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ.ಕೆ. ಶಿವಕುಮಾರ್

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಆನಂದ್, ವಿಡಿಎ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ಅನಿಸಾ ಮುಜಾವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.