ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BY Vijayendra: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ: ವಿಜಯೇಂದ್ರ

BY Vijayendra: ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ರಾಜ್ಯ ಸರ್ಕಾರ ತನ್ನ ನಿಲುವನ್ನು ಮೊದಲು ಸ್ಪಷ್ಟಪಡಿಸಲಿ: ವಿಜಯೇಂದ್ರ ಟೀಕೆ

Profile Siddalinga Swamy Apr 14, 2025 7:25 PM

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಯುಪಿಎ ಸರ್ಕಾರವು 2004ರಿಂದ 2014ರವರೆಗೆ ಅಧಿಕಾರದಲ್ಲಿದ್ದಾಗ 10 ವರ್ಷದಲ್ಲಿ ಪೆಟ್ರೋಲ್ ದರ ಶೇ. 90ರಷ್ಟು ಏರಿಕೆ ಕಂಡಿತ್ತು. ಅದೇ ರೀತಿ ಡೀಸೆಲ್ ಬೆಲೆಯು ಶೇ. 96ರಷ್ಟು ಬೆಲೆ ಏರಿಕೆ ಆಗಿತ್ತು ಎಂದು ಟೀಕಿಸಿದರು. ಆದರೆ, ನರೇಂದ್ರ ಮೋದಿಜೀ ಅವರ ನೇತೃತ್ವದ ಎನ್‍ಡಿಎ ಸರ್ಕಾರದಲ್ಲಿ 2014ರಿಂದ 2024ರ ನಡುವೆ ಪೆಟ್ರೋಲ್ ದರ 72 ರೂಪಾಯಿಯಿಂದ 100 ರೂ.ಗೆ ಏರಿದೆ. ಶೇ.38 ಹೆಚ್ಚಳವಾಗಿದೆ. ಡೀಸೆಲ್ ದರ 55 ರೂ. ಇದ್ದುದು 90 ರೂ. ಆಗಿದೆ. ಶೇ. 63ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದರು.

ಜನಾಕ್ರೋಶ ಯಾತ್ರೆ 1,115 ಕಿಮೀನಷ್ಟು ಪ್ರವಾಸ

ಜನಾಕ್ರೋಶ ಯಾತ್ರೆಯು 9 ಜಿಲ್ಲೆಗಳಿಗೆ ಹೋಗಿದೆ. 1,115 ಕಿಮೀನಷ್ಟು ಪ್ರವಾಸ ಮಾಡಿದ್ದೇವೆ. ಈ ಯಾತ್ರೆಯು ರಾಜ್ಯದ ಪಕ್ಷದ ಎಲ್ಲ ಮುಖಂಡರು ಭಾಗವಹಿಸಿದ್ದರು. ಮೈಸೂರಿನಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಮಂಡ್ಯದಲ್ಲಿ 4 ಸಾವಿರಕ್ಕೂ ಹೆಚ್ಚು, ಹಾಸನ- 5ರಿಂದ 6 ಸಾವಿರ ಜನರು, ಕೊಡಗು- 3.5ರಿಂದ 4 ಸಾವಿರ ಜನರು ಬಂದಿದ್ದರು. ಮಂಗಳೂರಿನಲ್ಲಿ ಮಳೆಯ ವಾತಾವರಣವಿದ್ದರೂ 9 ರಿಂದ 10 ಸಾವಿರ ಜನರು ಪಾಲ್ಗೊಂಡಿದ್ದರು. ಉಡುಪಿ ಜಿಲ್ಲೆಯಲ್ಲಿ 5.5ರಿಂದ 6 ಸಾವಿರ, ಚಿಕ್ಕಮಗಳೂರಿನಲ್ಲಿ 4ರಿಂದ 5 ಸಾವಿರ ಜನರು, ಯಲ್ಲಾಪುರದಲ್ಲಿ 4 ಸಾವಿರಕ್ಕೂ ಹೆಚ್ಚು ಜನರು ಹೋರಾಟದಲ್ಲಿ ಭಾಗವಹಿಸಿದ್ದಾರೆ. ಶಿವಮೊಗ್ಗದಲ್ಲಿ 6ರಿಂದ 7 ಸಾವಿರ ಜನರು ಭಾಗವಹಿಸಿದ್ದರು. ಒಟ್ಟಾರೆಯಾಗಿ ನಮ್ಮ ಮೊದಲ ಹಂತದ ಜನಾಕ್ರೋಶ ಯಾತ್ರೆಯಲ್ಲಿ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು ಎಂದು ವಿವರಿಸಿದರು.

ಆಡಳಿತ ಪಕ್ಷದಲ್ಲಿ ಗಾಬರಿ, ಆತಂಕ

ಸಾಮಾಜಿಕ ಜಾಲತಾಣದಲ್ಲಿ ಈ ಯಾತ್ರೆಯನ್ನು 3.50 ಕೋಟಿ ಜನರು ವೀಕ್ಷಿಸಿದ್ದಾರೆ. ಈ ಯಾತ್ರೆಯು ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಿದೆ. ನಮ್ಮ ಹೋರಾಟದ ಪರಿಣಾಮವಾಗಿ ಆಡಳಿತ ಪಕ್ಷದವರು ಆತಂಕಗೊಂಡಿದ್ದಾರೆ. ಗಾಬರಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದವರೂ ಸಹ ಏ. 17ರಂದು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ. ಇದೊಂದು ಕಪಟ ನಾಟಕವಷ್ಟೇ. ರಾಜ್ಯದ ಮುಖ್ಯಮಂತ್ರಿಗಳಿಗೆ ಜ್ಞಾನೋದಯವಾಗುತ್ತಿದೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬರಬೇಕಾಗಿದೆ. ಗ್ಯಾರಂಟಿಯಿಂದ ಜನರು ರಾಜ್ಯದಲ್ಲಿ ಸಂತೋಷದಲ್ಲಿದ್ದಾರೆ ಎಂಬ ಭ್ರಮೆಯಲ್ಲಿದ್ದರು. ಅದು ವಾಸ್ತವಿಕ ಸತ್ಯವಲ್ಲ ಎಂಬುದು ನಮ್ಮ ಹೋರಾಟದ ಪರಿಣಾಮವಾಗಿ ಅವರಿಗೆ ಅರ್ಥ ಆಗುತ್ತಿದೆ ಎಂದು ತಿಳಿಸಿದರು.

ಆಡಳಿತ ಪಕ್ಷದಲ್ಲೇ ಗೊಂದಲ ಇದೆ

ಜಾತಿ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದು 10 ವರ್ಷ ಕಳೆದ ಹಳೆಯ ವರದಿ. ಮುಖ್ಯಮಂತ್ರಿಗಳು ನೀವೇ ಇದ್ದೀರಿ. ನಿಮ್ಮದೇ ಸರ್ಕಾರ ಇದೆ. ಮತ್ತೊಮ್ಮೆ ಸರ್ವೇ ಮಾಡಿ ಎಂದು ಆಗ್ರಹಿಸಿದರು. ಮರು ಸಮೀಕ್ಷೆ ಮಾಡಿ, ವೈಜ್ಞಾನಿಕವಾಗಿ ಅದನ್ನು ಮಾಡಿ. ಎಲ್ಲರ ಸಭೆ ಕರೆದು ಜಾರಿಗೊಳಿಸಿ ಎಂದರು. ಅವೈಜ್ಞಾನಿಕ ಮತ್ತು ಹಳೆಯ ವರದಿ ಇದು. ಅದನ್ನು ಕಸದ ಬುಟ್ಟಿಗೆ ಹಾಕಬೇಕಿದೆ. ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು ತನ್ನ ನಿಲುವನ್ನು ಮೊದಲು ಸ್ಪಷ್ಟಪಡಿಸಲಿ. ಮುಖ್ಯಮಂತ್ರಿ ಒಂದು ಹೇಳಿದರೆ, ಉಪ ಮುಖ್ಯಮಂತ್ರಿ ಇನ್ನೊಂದು ಹೇಳುತ್ತಾರೆ. ಎಂ.ಬಿ.ಪಾಟೀಲ್, ಪರಮೇಶ್ವರ್ ಬೇರೆ ಬೇರೆ ರೀತಿಯ ಹೇಳಿಕೆ ಕೊಡುತ್ತಾರೆ. ಆಡಳಿತ ಪಕ್ಷದಲ್ಲೇ ಗೊಂದಲ ಇದೆ ಎಂದು ತಿಳಿಸಿದರು. ನಿಜವಾದ ಕಳಕಳಿ ಇದ್ದರೆ ಮುಖ್ಯಮಂತ್ರಿಗಳು ವರದಿಯ ಒಳಿತು- ಕೆಡುಕುಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಿ ಎಂದು ತಿಳಿಸಿದರು.‌

ಈ ಸುದ್ದಿಯನ್ನೂ ಓದಿ | Pralhad Joshi: ವಾಜಪೇಯಿ, ನರೇಂದ್ರ ಮೋದಿ ಕಾಲಘಟ್ಟದಲ್ಲಿ ಡಾ.ಅಂಬೇಡ್ಕರ್‌ ಅವರಿಗೆ ಅತ್ಯುನ್ನತ ಗೌರವ ಅರ್ಪಿಸಲಾಗಿದೆ: ಜೋಶಿ

ಈ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭಾಗವಹಿಸಿದ್ದರು.