ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Metro Pink Line: ನ.13ರಂದು ಪ್ರಧಾನಿ ಮೋದಿಯಿಂದ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟನೆ

Bengaluru Metro Pink Line: ಮೆಟ್ರೋ ಗುಲಾಬಿ ಮಾರ್ಗದ ಅಧಿಕೃತ ಉದ್ಘಾಟನೆ ದಿನಾಂಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂಸದ ಮಾಹಿತಿ ನೀಡಿದ್ದಾರೆ. ಬೆಂಗಳೂರಿಗೆ ಇದೊಂದು ಐತಿಹಾಸಿಕ ಮೈಲುಗಲ್ಲು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 13 ರಂದು ನಮ್ಮ ಮೆಟ್ರೋದ ಪಿಂಕ್ ಲೈನ್ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ 13 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋ ಗುಲಾಬಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಈ ಕುರಿತು ಸಂಸದ ತೇಜಸ್ವಿ ಸೂರ್ಯ ಅವರು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮೆಟ್ರೋ ಗುಲಾಬಿ ಮಾರ್ಗದ ಅಧಿಕೃತ ಉದ್ಘಾಟನೆ ದಿನಾಂಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂಸದ ಮಾಹಿತಿ ನೀಡಿದ್ದಾರೆ. ಬೆಂಗಳೂರಿಗೆ ಇದೊಂದು ಐತಿಹಾಸಿಕ ಮೈಲುಗಲ್ಲು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 13 ರಂದು ನಮ್ಮ ಮೆಟ್ರೋದ ಪಿಂಕ್ ಲೈನ್ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅವರು ತಾವರೆಕೆರೆಯಿಂದ ಐಐಎಂಬಿ-ಬಿಳೇಕಹಳ್ಳಿ ನಿಲ್ದಾಣದವರೆಗೆ ಪ್ರಯಾಣಿಸಿ ಈ ಸೇವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.



ಇದರೊಂದಿಗೆ, ಬೆಂಗಳೂರು ಮೆಟ್ರೋ 100 ಕಿ.ಮೀ. ಮೈಲುಗಲ್ಲನ್ನು ದಾಟಿ, 103.6 ಕಿಮೀ ತಲುಪಲಿದೆ ಮತ್ತು ದೆಹಲಿಯ ನಂತರ ಭಾರತದ ಎರಡನೇ ಅತಿ ದೊಡ್ಡ ಮೆಟ್ರೋ ಜಾಲವಾಗಿ ಹೊರಹೊಮ್ಮಲಿದೆ. 2014ರಲ್ಲಿ ಬೆಂಗಳೂರಿನಲ್ಲಿ ಕೇವಲ 7 ಕಿ.ಮೀ. ಕಾರ್ಯಾಚರಣೆಯ ಮೆಟ್ರೋ ಜಾಲ ಮಾತ್ರ ಇತ್ತು. ಇಂದು ಆ ಜಾಲವು ಸುಮಾರು 15 ಪಟ್ಟು ಬೆಳೆದು, 2014ರಿಂದ ಈಚೆಗೆ 96 ಕಿ.ಮೀ.ಗೂ ಅಧಿಕ ಮಾರ್ಗ ಸೇರ್ಪಡೆಗೊಂಡಿದೆ.

Bengaluru Metro Pink Line: ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ನ.13ಕ್ಕೆ ಗುಲಾಬಿ ಮಾರ್ಗ ಉದ್ಘಾಟನೆ

ಪ್ರಧಾನಮಂತ್ರಿ ಮೋದಿ ಅವರು ಯಾವಾಗಲೂ ಬೆಂಗಳೂರಿನ ಮೂಲಭೂತ ಸೌಕರ್ಯ ಮತ್ತು ಸಂಪರ್ಕಕ್ಕೆ ಆದ್ಯತೆ ನೀಡುತ್ತಾ ಬಂದಿದ್ದು, ಈ ಅದ್ಭುತ ಬದಲಾವಣೆ ಸಾಧ್ಯವಾಗುವಂತೆ ಮಾಡಿದ್ದಾರೆ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಜೀವನದ ಗುಣಮಟ್ಟವನ್ನು ಸುಧಾರಿಸಲು ಮತ್ತು ಸಾರ್ವಜನಿಕ ಸಾರಿಗೆಗೆ ಮೊದಲ ಆದ್ಯತೆ ನೀಡುವ ಬೆಂಗಳೂರನ್ನು ನಿರ್ಮಿಸಲು ಇದು ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.