ಬೆಂಗಳೂರು, ಜೂ.19: ಗುರುವಾರ (ಜೂ.18) ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ (Legislative Council Election) ಅಡ್ಡ ಮತದಾನವಾಗಿದ್ದರ ಬಗ್ಗೆ ಪಕ್ಷ ಪರಿಶೀಲನೆ ಮಾಡಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಅವರು ಹೇಳಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಅಭಿನಂದಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಬಿಜೆಪಿಯ ಅಭ್ಯರ್ಥಿಗಳಾದ ರಘು ಕೌಟಿಲ್ಯ ಹಾಗೂ ಲಿಂಗರಾಜ ಪಾಟೀಲ್ ಅವರು, ಜಯಶೀಲರಾಗಿದ್ದು ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಲಿಂಗರಾಜ ಪಾಟೀಲ್ ಅವರ ಮೂರು ಮತಗಳು ಅಡ್ಡ ಮತದಾನ ಆಗಿದೆ. ರಘು ಅವರ ಮೂವತ್ತು ಮತಗಳಲ್ಲಿ ಒಂದು ಮತ ಅಸಿಂಧು ಆಗಿದೆ. ಇದನ್ನು ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಎಂಬುದನ್ನು ಮುಂದೆ ಪರಿಶೀಲನೆ ನಡೆಸಲಾಗುವುದು ಹಾಗೂ ಸೂಕ್ತ ತೀರ್ಮಾನವನ್ನು ಪಕ್ಷ ಕೈಗೊಳ್ಳಲಿದೆ ಎಂದು ಹೇಳಿದರು.
ಪಕ್ಷಕ್ಕೆ ದ್ರೋಹ ಬಗೆದವರು ಸಿಕ್ಕಿಹಾಕಿಕೊಳ್ತಾರೆ: ಆರ್. ಅಶೋಕ್
ಇನ್ನು ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಕೂಡ ಕಿಡಿಕಾರಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಮೂರು ಮತಗಳು ಅಡ್ಡಮತದಾನವಾಗಿದೆ. ಒಂದು ಮತ ಅಸಿಂಧುವಾಗಿದೆ. ಇದನ್ನು ಯಾರು ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ. ಪಕ್ಷಕ್ಕೆ ದ್ರೋಹ ಬಗೆದವರು ಸಿಕ್ಕಿಹಾಕಿಕೊಳ್ತಾರೆ ಎಂದು ಅವರು ಹೇಳಿದ್ದಾರೆ.
ಬಿಡದಿ ಟೌನ್‌ಶಿಪ್‌ಗೆ ಬಲವಂತವಾಗಿ ರೈತರ ಜಮೀನು ಸ್ವಾಧೀನ: ವಿಜಯೇಂದ್ರ ಆಕ್ರೋಶ
ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಲಿಂಗರಾಜ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರು ಜಯಶೀಲರಾಗಿದ್ದು ಸಂತೋಷ ತಂದಿದೆ. ಅಡ್ಡ ಮತದಾನ ಮಾಡಿದವರು ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ಪಕ್ಷದ ವೇದಿಕೆಯಲ್ಲಿ ಇದನ್ನು ಚರ್ಚೆ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಸಂಸದ ಎಸ್. ಮುನಿಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಉಪಸ್ಥಿತರಿದ್ದರು.