ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

R Ashok: ದೇಶದಲ್ಲಿ ಅತಿ ಹೆಚ್ಚು ಅಪಹಾಸ್ಯಕ್ಕೆ ಒಳಗಾದ ವ್ಯಕ್ತಿ ರಾಹುಲ್ ಗಾಂಧಿ- ಆರ್.ಅಶೋಕ್

R Ashok: ರಾಹುಲ್ ಅವರು ಯಾರೋ ಬರೆದುಕೊಟ್ಟಿದ್ದನ್ನು ಪದೇ ಪದೇ ಹೇಳಿ ಕಳೆದ 4-5 ವರ್ಷಗಳಿಂದ ದೇಶದಲ್ಲಿ ಅತಿ ಹೆಚ್ಚು ಅಪಹಾಸ್ಯಕ್ಕೆ ಒಳಗಾದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ- ಆರ್.ಅಶೋಕ್

-

Profile
Siddalinga Swamy Sep 18, 2025 6:15 PM

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಅವರು ಮಾತನಾಡಿದರು. 2023ರಲ್ಲಿ ಆಳಂದ ವಿಧಾನಸಭಾ ಚುನಾವಣೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮತದಾರರ ಹೆಸರನ್ನು ತೆಗೆದುಹಾಕುವ ಪ್ರಯತ್ನ ನಡೆದಿತ್ತು ಎಂಬ ರಾಹುಲ್ ಗಾಂಧಿ ಅವರ ಆರೋಪ ಕುರಿತು ಪ್ರಶ್ನೆಗೆ ಅವರು ಉತ್ತರ ನೀಡಿದರು. ರಾಹುಲ್ ಅವರು ಯಾರೋ ಬರೆದುಕೊಟ್ಟಿದ್ದನ್ನು ಪದೇ ಪದೇ ಹೇಳಿ ಕಳೆದ 4-5 ವರ್ಷಗಳಿಂದ ದೇಶದಲ್ಲಿ ಅತಿ ಹೆಚ್ಚು ಅಪಹಾಸ್ಯಕ್ಕೆ ಒಳಗಾದ ವ್ಯಕ್ತಿ ಎಂದು ಟೀಕಿಸಿದರು.

ಆಳಂದ ಬಹಳ ದೂರ ಇದೆ. ಬೆಂಗಳೂರು ಪಕ್ಕದ ಮಾಲೂರಿನಲ್ಲಿ ಮತಗಳ್ಳತನ ಎಂದು ಕೋರ್ಟ್ ಆದೇಶ ಮಾಡಿದೆ. ಅಲ್ಲಿನ ಜಿಲ್ಲಾಧಿಕಾರಿ, ಕೋರ್ಟ್ ಆದೇಶವಿದ್ದರೂ ಸಿಸಿ ಟಿವಿ ಮಾಹಿತಿಯನ್ನು ಕೇಳಿದ್ದರೂ ಕೊಟ್ಟಿಲ್ಲ. ಅಲ್ಲಿ ಗೆದ್ದ ಕಾಂಗ್ರೆಸ್ ಶಾಸಕರ ಸದಸ್ಯತ್ವ ವಜಾ ಆಗಿದೆ. ಇದಕ್ಕಿಂತ ಸಾಕ್ಷಿ ಬೇಕೇ ಎಂದು ಕೇಳಿದರು.

ಈ ಸುದ್ದಿಯನ್ನೂ ಓದಿ | Pralhad Joshi: ಹೊಸ ಜಿಎಸ್‌ಟಿ; ₹2-3 ಸಾವಿರ ಕೋಟಿ ವಿದ್ಯುತ್‌ ಖರೀದಿ ವೆಚ್ಚ ಉಳಿಕೆ- ಪ್ರಲ್ಹಾದ್‌ ಜೋಶಿ

ಅಫಿಡವಿಟ್ ಕೊಡಿ ಎಂದು ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ಕೇಳಿದ್ದರೂ ಕೊಟ್ಟಿಲ್ಲ; ಮಾಲೂರಿನಲ್ಲಿ ನಮ್ಮ ಅಭ್ಯರ್ಥಿ ಅಫಿಡವಿಟ್ ಕೊಟ್ಟು, ತನಿಖೆಗೆ ಹೈಕೋರ್ಟಿಗೆ ವಿನಂತಿಸಿದ್ದರು. ಹೈಕೋರ್ಟ್, ಡಿಸಿ ತಪ್ಪು ಮಾಡಿದ್ದಾಗಿ ತಿಳಿಸಿ ಕ್ರಮ ಕೈಗೊಳ್ಳಲು ಆದೇಶ ಮಾಡಿದೆ. ರಾಹುಲ್ ಗಾಂಧಿಯವರಿಗೆ ಇದರ ಜ್ಞಾನ ಇಲ್ಲವೇ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನಿಸಿದರು.