ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Modi Birthday: ಪ್ರಧಾನಿ ಮೋದಿ ಬರ್ತ್‌ಡೇಗೆ ರಾಹುಲ್‌ ಗಾಂಧಿ ಸ್ಪೆಷಲ್‌ ವಿಶ್‌!

Rahul Gandhi Wishes to Modi ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ರಾಹುಲ್‌ ಗಾಂಧಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಮತ್ತು ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ ಎಂದು ಬರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಖರ್ಗೆ ಅವರು X ನಲ್ಲಿ ಪೋಸ್ಟ್‌ನಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದೇವರು ಕರುಣಿಸಲಿ ಎಂದು ಹಾರೈಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Modi Birthday) ಅವರಿಗೆ ಇಂದು 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಗಳು ಅಕ್ಟೋಬರ್ 2 ರವರೆಗೆ ದೇಶಾದ್ಯಂತ ಆರೋಗ್ಯ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಸಭೆ ಸಮಾರಂಭಗಳು, ದೇಶೀಯ ಉತ್ಪನ್ನಗಳನ್ನು ಉತ್ತೇಜಿಸಲು ಮೇಳ ಹಲವಾರು ಪ್ರಚಾರ, ಕಲ್ಯಾಣ, ಅಭಿವೃದ್ಧಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿವೆ. ಮತ್ತಂದೆಡೆ ನೆಚ್ಚಿನ ಪ್ರಧಾನಿಯ ಹುಟ್ಟುಹಬ್ಬಕ್ಕೆ ದೇಶ ವಿದೇಶಿ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿವೆ. ಈ ನಡುವೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿಯವರು(Rahul Gandhi) ಕೂಡ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.



ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ರಾಹುಲ್‌ ಗಾಂಧಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಮತ್ತು ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ ಎಂದು ಬರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಖರ್ಗೆ ಅವರು X ನಲ್ಲಿ ಪೋಸ್ಟ್‌ನಲ್ಲಿ, "ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದೇವರು ಕರುಣಿಸಲಿ ಎಂದು ಹಾರೈಸಿದ್ದಾರೆ.

ಇನ್ನು ವಿರೋಧ ಪಕ್ಷದ ಹಲವು ನಾಯಕರು ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. "ಮಾನ್ಯ ಪ್ರಧಾನಿ @narendramodi ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಹಾರೈಸುತ್ತೇನೆ" ಎಂದು ವಿಜಯನ್ X ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.



ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಎಕ್ಸ್‌ ಪೋಸ್ಟ್‌ನಲ್ಲಿ ಯಾದವ್ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ಹೃದಯಪೂರ್ವಕ ಹುಟ್ಟುಹಬ್ಬದ ಶುಭಾಶಯಗಳು, ಜೊತೆಗೆ ಆರೋಗ್ಯಕರ, ಅರ್ಥಪೂರ್ಣ, ಸಾಮರಸ್ಯ, ಎಲ್ಲರನ್ನೂ ಒಳಗೊಂಡ ಮತ್ತು ಸಕಾರಾತ್ಮಕ ಜೀವನಕ್ಕಾಗಿ ಶುಭಾಶಯಗಳು" ಎಂದು ಬರೆದಿದ್ದಾರೆ. ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ ಪ್ರಧಾನಿ ಮೋದಿ ಅವರಿಗೆ 75 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. "ಮಾನ್ಯ ಪ್ರಧಾನಿ @narendramodi ಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು" ಎಂದು ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.



ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ತಮ್ಮ 75 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಸೆಪ್ಟೆಂಬರ್ 17, 1950 ರಂದು ಉತ್ತರ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ವಡ್ನಗರ ಎಂಬ ಸಣ್ಣ ಗ್ರಾಮದಲ್ಲಿ ಜನಿಸಿದರು.