ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿ.ಕೆ. ಶಿವಕುಮಾರ್

Tunnel Road Project: ಟನಲ್ ರಸ್ತೆ ವಿಚಾರವಾಗಿ ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಟನಲ್ ಯೋಜನೆಯನ್ನು ಅವರೂ ಗಮನಿಸಲಿ. ಅಶ್ವತ್ಥ ನಾರಾಯಣ್ ಸೇರಿ ಬೇರೆ ಯಾರ ಹೆಸರನ್ನು ಸೂಚಿಸಿದರು ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು.‌ ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ ಎಂದು ಅವರು ತಿಳಿಸಿದ್ದಾರೆ.

ಆರ್. ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ

-

Profile Siddalinga Swamy Nov 1, 2025 4:17 PM

ಬೆಂಗಳೂರು, ನ.1: ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದ‌ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಟನಲ್ ಯೋಜನೆಯನ್ನು (Tunnel Road Project) ಅವರೂ ಗಮನಿಸಲಿ. ಅಶ್ವತ್ಥ ನಾರಾಯಣ್ ಸೇರಿ ಬೇರೆ ಯಾರ ಹೆಸರನ್ನು ಸೂಚಿಸಿದರು ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು.‌ ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ ಎಂದು ತಿಳಿಸಿದರು.

ನಾನು ಶುಕ್ರವಾರ ರಾತ್ರಿ ಲಾಲ್ ಬಾಗ್ ಬಳಿ ತೆರಳಿ ಎಲ್ಲೆಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸಬಹುದು ಎಂದು ಪರಿಶೀಲನೆ ಮಾಡಿದ್ದೇನೆ. ಪರ್ಯಾಯ ಮಾರ್ಗಗಳ ಬಗ್ಗೆ ಆಲೋಚನೆ ನಡೆಸುತ್ತಿದ್ದೇನೆ. ಯಾವುದೇ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಮಿಕ್ಕ ಯಾರ ಮಾತಿಗೂ ಕಿಮ್ಮತ್ತಿಲ್ಲ

ನವೆಂಬರ್ ಕ್ರಾಂತಿಯ ಬಗ್ಗೆ ಕೇಳಿದಾಗ, ʼನಾನು ಹಾಗೂ ಮುಖ್ಯಮಂತ್ರಿಯವರು ಏನು ಮಾತನಾಡಿದ್ದೇವೆಯೋ ಅದು ಮಾತ್ರ ಮಾತು. ಮಿಕ್ಕ ಯಾರ ಮಾತಿಗೂ ಕಿಮ್ಮತ್ತು ಇಲ್ಲʼ ಎಂದು ತಿಳಿಸಿದರು. ನೀವು ಒಮ್ಮತದಲ್ಲಿ ಇದ್ದೀರಾ ಎಂದು ಕೇಳಿದಾಗ, ʼಒಮ್ಮತದಲ್ಲಿ ಇರುವ ಕಾರಣಕ್ಕೇ 136 ಕ್ಷೇತ್ರ ಗೆದ್ದು 140ಕ್ಕೆ ನಮ್ಮ ಬಲ‌ ಹೆಚ್ಚಿರುವುದುʼ ಎಂದು ಹೇಳಿದರು. ಮುಂದೆ ರಾಜ್ಯೋತ್ಸವದ ಧ್ವಜಾರೋಹಣವನ್ನು ನೀವು ಮಾಡುವ ಸನ್ನಿವೇಶ ಬರಲಿದೆಯೇ ಎಂದು ಕೇಳಿದಾಗ,‌ ʼಈಗ ಸ್ಟೇಡಿಯಂನಲ್ಲಿ ಮಾಡಿದ್ದು ಏನನ್ನು?ʼ ಎಂದು ಅವರು ಮರು ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ | DCM DK Shivakumar: ಎಲ್ಲೆಂದರಲ್ಲಿ ಕಸ ಹಾಕೋ ಸಮಸ್ಯೆ ನಿವಾರಣೆಗೆ ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕರ್ನಾಟಕದಲ್ಲಿ ಇರಬೇಕು ಎಂದರೆ ಕನ್ನಡಿಗರಾಗಿ ಇರಬೇಕು

ಬೆಳಗಾವಿಯಲ್ಲಿ ಎಂಇಎಸ್‌ನವರ ಜತೆ ಪೊಲೀಸರು ಸೆಲ್ಫಿ ತೆಗೆದುಕೊಂಡಿರುವುದು ಹಾಗೂ ಪ್ರತಿಭಟನೆಗೆ ರಕ್ಷಣೆ ‌ನೀಡಿರುವುದರ ಬಗ್ಗೆ ಕೇಳಿದಾಗ, ʼಎಂಇಎಸ್‌ನವರನ್ನು ಪರಿವರ್ತಿಸುವ ಕೆಲಸ ನಾವು ಮಾಡೋಣ. ಕರ್ನಾಟಕದಲ್ಲಿ ಒಂದು ಪಕ್ಷ, ಗುಂಪಾಗಿ‌ ಅದು ಕೆಲಸ‌ ಮಾಡುತ್ತಿದೆ. ಅವರೂ ಸಹ ಕನ್ನಡಿಗರೇ. ಅವರೂ ಸಹ ಕರ್ನಾಟಕ ವಿಧಾನಸಭೆಗೆ ಪ್ರವೇಶ ಮಾಡಿದ್ದಾರೆ. ಕರ್ನಾಟಕದಲ್ಲಿ ಇರಬೇಕು ಎಂದರೆ ಕನ್ನಡಿಗರಾಗಿ ಇರಬೇಕು. ಕರ್ನಾಟಕದಲ್ಲಿ ಇರುವವರು ಕಡ್ಡಾಯವಾಗಿ ಕನ್ನಡ ಕಲಿಯಬೇಕು, ಮಾತನಾಡಬೇಕು. ಈ ನಾಡಿನಲ್ಲಿ ಬದುಕುವವರು ಕನ್ನಡದ ಬೆಳವಣಿಗೆಗೆ ಸಹಕಾರ ನೀಡಬೇಕು. ಇತರೇ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಗೃಹಸಚಿವರಿಗೆ ಇರುತ್ತದೆ. ಅವರು ಮಾಹಿತಿ ನೀಡುತ್ತಾರೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.