ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HM Ramesh Gowda: ಆಯ್ಕೆಗೊಂಡ ಪಿಎಸ್‌ಐ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ: ಎಚ್.ಎಂ. ರಮೇಶ್‌ ಗೌಡ ಆಗ್ರಹ

ರಾಜ್ಯ ಸರ್ಕಾರವು 2021ರಲ್ಲಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 4 ವರ್ಷಗಳ ನಂತರ ಪರೀಕ್ಷೆ ನಡೆಸಿತ್ತು. 2024 ಡಿಸೆಂಬರ್‌ 26ರಂದು ಫಲಿತಾಂಶವನ್ನೂ ಪ್ರಕಟಿಸಿತ್ತು. ಅದಾದ ಮೇಲೆ ಪರೀಕ್ಷೆಯಲ್ಲಿ ಅರ್ಹರಾದ ಎಲ್ಲಾ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ನಡೆದು 7 ತಿಂಗಳು ಕಳೆದರೂ ಇನ್ನೂ ನೇಮಕಾತಿ ಆದೇಶ ನೀಡದಿರುವುದು ಸರಿಯಲ್ಲ. ಕೂಡಲೇ ನೇಮಕಾತಿ ಆದೇಶ ಪತ್ರಗಳನ್ನು ನೀಡಬೇಕು ಎಂದು ಜೆಡಿಎಸ್‌ ಪಕ್ಷದ ನಗರ ಘಟಕದ ಅಧ್ಯಕ್ಷ ಎಚ್‌.ಎಂ. ರಮೇಶ್‌ ಗೌಡ ಒತ್ತಾಯಿಸಿದ್ದಾರೆ.

ಆಯ್ಕೆಗೊಂಡ ಪಿಎಸ್‌ಐ ಅಭ್ಯರ್ಥಿಗಳ ಪ್ರತಿಭಟನೆ: ಜೆಡಿಎಸ್‌ ಬೆಂಬಲ

Profile Siddalinga Swamy Jul 17, 2025 7:48 PM

ಬೆಂಗಳೂರು: ಪಿಎಸ್‌ಐ ಪರೀಕ್ಷೆ ಬರೆದು ನ್ಯಾಯಬದ್ಧವಾಗಿ ಉತ್ತೀರ್ಣರಾಗಿ, ದಾಖಲಾತಿ ಪರಿಶೀಲನೆ ಮುಗಿದ ನಂತರವೂ ಏಳು ತಿಂಗಳಾದರೂ ನೇಮಕಾತಿ ಆದೇಶ ಪತ್ರ ಸಿಗದ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಜೆಡಿಎಸ್‌ (JDS) ಬೆಂಬಲ ವ್ಯಕ್ತಪಡಿಸಿದೆ. ಪಕ್ಷದ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್‌ ಗೌಡ ಅವರು ಗುರುವಾರ ನಗರದ ಫ್ರೀಡಂ ಪಾರ್ಕ್‌ ಬಳಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿ , ಅವರಿಗೆ ಪಕ್ಷದ ಪರವಾಗಿ ಬೆಂಬಲ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವು 2021ರಲ್ಲಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 4 ವರ್ಷಗಳ ನಂತರ ಪರೀಕ್ಷೆ ನಡೆಸಿತ್ತು. 2024 ಡಿಸೆಂಬರ್‌ 26ರಂದು ಫಲಿತಾಂಶವನ್ನೂ ಪ್ರಕಟಿಸಿತ್ತು. ಅದಾದ ಮೇಲೆ ಪರೀಕ್ಷೆಯಲ್ಲಿ ಅರ್ಹರಾದ ಎಲ್ಲಾ ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ನಡೆದು 7 ತಿಂಗಳು ಕಳೆದರೂ ಇನ್ನೂ ನೇಮಕಾತಿ ಆದೇಶ ನೀಡದಿರುವುದು ಸರಿಯಲ್ಲ. ಕೂಡಲೇ ನೇಮಕಾತಿ ಆದೇಶ ಪತ್ರಗಳನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು.

ಗೃಹ ಸಚಿವ ಪರಮೇಶ್ವರ್‌ ಅವರು ಕಳೆದ 3 ತಿಂಗಳಿಂದ ಆದೇಶ ಪತ್ರಗಳನ್ನು ಇಗೋ ಕೊಟ್ಟೆವು, ಅಗೋ ಕೊಟ್ಟೆವು ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಅಭ್ಯರ್ಥಿಗಳು ಹಗಲಿರುಳು ವ್ಯಾಸಂಗ ಮಾಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿದ ಬಡ ಅಭ್ಯರ್ಥಿಗಳಿಗೆ ಸರ್ಕಾರ ಅನ್ಯಾಯ ಮಾಡಬಾರದು ಎಂದು ಆಗ್ರಹಿಸಿದರು.

ಈ ಸುದ್ದಿಯನ್ನೂ ಓದಿ | Cleanest City: ದೇಶದ ಸ್ವಚ್ಛ ನಗರಗಳ ಪಟ್ಟಿ ಪ್ರಕಟ; 8 ನೇ ಬಾರಿಗೂ ಪ್ರಶಸ್ತಿ ತನ್ನದಾಗಿಸಿಕೊಂಡ ಇಂದೋರ್‌

ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿ ಈಗಾಗಲೇ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೀಗ ಮತ್ತೆ ನಗರದಲ್ಲಿ ಧರಣಿಗೆ ಮುಂದಾಗಿದ್ದಾರೆ. ಸರ್ಕಾರ ಈಗಲಾದರೂ ಅವರಿಗೆ ನೇಮಕಾತಿ ಪತ್ರಗಳನ್ನು ಕೊಟ್ಟು ಹುದ್ದೆಗಳಿಗೆ ನಿಯೋಜಿಸಬೇಕು ಎಂದು ಜೆಡಿಎಸ್‌ ಪಕ್ಷದ ನಗರ ಘಟಕದ ಅಧ್ಯಕ್ಷ ಎಚ್‌.ಎಂ. ರಮೇಶ್‌ ಗೌಡ ಒತ್ತಾಯಿಸಿದರು.