ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜೀನಾಮೆಗೆ ವಿಪಕ್ಷಗಳ ಪಟ್ಟು; ದಲಿತ ದಾಳ ಉರುಳಿಸುವ ಮೂಲಕ ಸಚಿವ ನಾಗೇಂದ್ರ ತಿರುಗೇಟು

ನಾನು ದಲಿತ, ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎನ್ನುವ ಕಾರಣಕ್ಕೆ ವಿಪಕ್ಷಗಳು ನನ್ನನ್ನು ಗುರಿ ಮಾಡಿವೆ. ದೇಶಾದ್ಯಂತ 126 ಬಿಜೆಪಿ ಸಚಿವರ ವಿರುದ್ಧ ಗಂಭೀರ ಆರೋಪಗಳಿವೆ. ಅವರ ರಾಜೀನಾಮೆಯನ್ನು ಯಾರೂ ಕೇಳುತ್ತಿಲ್ಲ ಎಂದು ಸಚಿವ ಬಿ. ನಾಗೇಂದ್ರ ಅವರು ಬೇಸರ ವ್ಯಕ್ತಪಡಿಸಿದರು. ಬಿಜೆಪಿ ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವುದಕ್ಕೆ ಅವರು ಬಿಜೆಪಿ ನಾಯಕರ ಮೇಲೆ ವಾಗ್ದಾಳಿ ನಡೆಸಿದರು.

ದಲಿತನೆನ್ನುವ ಕಾರಣಕ್ಕೆ ನನ್ನನ್ನು ಗುರಿ ಮಾಡಲಾಗಿದೆ: ಸಚಿವ ನಾಗೇಂದ್ರ ಬೇಸರ

ಸಂಗ್ರಹ ಚಿತ್ರ -

ಬೆಂಗಳೂರು: ನಾನು ದಲಿತ (Dalit) ಮತ್ತು ಕಾಂಗ್ರೆಸ್ (congress) ಪಕ್ಷಕ್ಕೆ ಸೇರಿದವನು ಎಂಬ ಕಾರಣಕ್ಕೆ ಎಲ್ಲರೂ ನನ್ನನ್ನೇ ಗುರಿ ಮಾಡಿದ್ದಾರೆ. 326 ಬಿಜೆಪಿ (BJP) ಸಚಿವರಲ್ಲಿ 126 ಸಚಿವರ ವಿರುದ್ಧ ಗಂಭೀರ ಪ್ರಕರಣಗಳಿವೆ. ಅವರ ರಾಜೀನಾಮೆಯನ್ನು ಯಾರು ಕೇಳುತ್ತಿಲ್ಲ ಎಂದು ಸಚಿವ ಬಿ. ನಾಗೇಂದ್ರ (Minister B. Nagendra) ಅವರು ಹೇಳಿದರು. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ನಡೆಸಿರುವ ಎಸ್‌ಐಟಿ (SIT) ತನಿಖೆಯಲ್ಲಿ ಕ್ಲೀನ್ ಚಿಟ್ ದೊರೆತಿದ್ದರೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವುದಾಗಿ ಅವರು ಹೇಳಿದರು.

ಎನ್‌ಡಿಎ ಮಿತ್ರಪಕ್ಷಗಳು ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವುದಕ್ಕೆ ಪ್ರತಿಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದ ಅವರು, ದೇಶದಾದ್ಯಂತ 126 ಬಿಜೆಪಿ ಸಚಿವರ ವಿರುದ್ಧ ಅಪಹರಣ, ಅತ್ಯಾಚಾರ, ಕೊಲೆ ಯತ್ನ ಮತ್ತು ಲೈಂಗಿಕ ದೌರ್ಜನ್ಯದಂತಹ ಕ್ರಿಮಿನಲ್ ಪ್ರಕರಣಗಳಿವೆ. ಅವರ ರಾಜೀನಾಮೆಗೆ ಏಕೆ ಆಗ್ರಹಿಸುತ್ತಿಲ್ಲ. ಅವರ ವಿರುದ್ಧ ಅಪಹರಣ, ಕೊಲೆ, ಅತ್ಯಾಚಾರ ಸೇರಿದಂತೆ ಘೋರ ಅಪರಾಧಗಳ ಆರೋಪಗಳಿವೆ. ಇದರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕೂಡ ಸೇರಿದ್ದಾರೆ ಎಂದರು.

ಲೋಕ ಭವನದ ಬಳಿ ಪ್ರಜ್ಞೆ ತಪ್ಪಿದ ವ್ಯಕ್ತಿಯ ಸಹಾಯಕ್ಕೆ ಧಾವಿಸಿದ ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೆಕರ್‌

ನಾನು ಕಾಂಗ್ರೆಸ್‌ನವನು ಮತ್ತು ದಲಿತನಾಗಿರುವುದರಿಂದ ತಮ್ಮ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡಿರುವ ಬಿಜೆಪಿ ಇದನ್ನು ಸಾಬೀತು ಪಡಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ನಾಗೇಂದ್ರ ಅವರು, ನನ್ನ ರಾಜೀನಾಮೆಗೂ ಮೊದಲು ಹಲವು ಗಂಭೀರ ಆರೋಪಗಳನ್ನು ಹೊಂದಿರುವ ಬಿಜೆಪಿ ನಾಯಕರಾದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ರಾಜೀನಾಮೆ ನೀಡಲಿ ಎಂದರು.



ಎನ್‌ಡಿಎ ಸರ್ಕಾರದ 78 ಕೇಂದ್ರ ಸಚಿವರಲ್ಲಿ 26 ಸಚಿವರ ವಿರುದ್ಧವೂ ಪ್ರಕರಣಗಳಿವೆ ಎಂದ ಅವರು, ನ್ಯಾಯಾಲಯವು ಒಂದು ವೇಳೆ ನಾನು ತಪ್ಪಿತಸ್ಥ ಎಂದು ತೀರ್ಪು ನೀಡಿದರೆ ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ನನ್ನ ವಿರುದ್ಧ ಮಾಡಲಾಗುತ್ತಿರುವ ರಾಜಕೀಯ ಪ್ರೇರಿತ ಆರೋಪಗಳಿಂದ ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಲಾಗುತ್ತಿದೆ ಎಂದರು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು 2024ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸಂಪುಟದಿಂದ ಕೈಬಿಡಲಾಗಿತ್ತು. ಬಳಿಕ ನಡೆದ ಎಸ್‌ಐಟಿ ತನಿಖೆಯಲ್ಲಿ ಅವರಿಗೆ ಕ್ಲೀನ್‌ಚಿಟ್ ದೊರೆತಿದ್ದು, ಇದೀಗ ಇಡಿ ಮತ್ತು ಸಿಬಿಐ ಆರೋಪ ಪಟ್ಟಿ ಸಲ್ಲಿಸಿದೆ. ಸದ್ಯ ಅವರಿಗೆ ಜಾಮೀನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ.

ಇದನ್ನು ವಿರೋಧಿಸಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವವರೆಗೆ ವಿಧಾನ ಸಭೆಯ ಮುಂಗಾರು ಅಧಿವೇಶನದ ಸಾಮಾನ್ಯ ಕಾರ್ಯಕಲಾಪಗಳಿಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿವೆ.

ಏನಿದು ಪ್ರಕರಣ ?

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಸುಮಾರು 187 ಕೋಟಿ ರೂ. ಗಳಿಗೂ ಅಧಿಕ ಹಣದ ಅವ್ಯವಹಾರ ಆರೋಪ ಕೇಳಿ ಬಂದಿತ್ತು. ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಆತ್ಮಹತ್ಯೆ ಬಳಿಕ ಅವರ ಡೆತ್ ನೋಟ್ ಆಧಾರದ ಮೇಲೆ ಈ ಕುರಿತು ಪ್ರಕರಣ ದಾಖಲಿಸಲಾಗಿತ್ತು.

ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್‌ ಪೌಡರ್‌ ಬಳಕೆ; ಅಡುಗೆ ಸಿಬ್ಬಂದಿ ಯಡವಟ್ಟಿನಿಂದ 36 ವಿದ್ಯಾರ್ಥಿಗಳು ಅಸ್ವಸ್ಥ

ಸರ್ಕಾರದ ಕೋಟ್ಯಂತರ ರೂ. ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಆಗಿನ ಸಚಿವ ಬಿ. ನಾಗೇಂದ್ರ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ಕುರಿತು ನಡೆದ ಎಸ್‌ಐಟಿ ತನಿಖೆಯಲ್ಲಿ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ನೀಡಲಾಗಿದ್ದು, ಜಾರಿ ನಿರ್ದೇಶನಾಲಯ ಮತ್ತು ವಿಶೇಷ ತನಿಖಾ ತಂಡ ತನಿಖೆಯನ್ನು ಮುಂದುವರಿಸಿದೆ.