ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ; ಯೋಜನೆ-ಸಾಂಖ್ಯಿಕ ಇಲಾಖೆ ಹೊಣೆ ಕೆ.ವೆಂಕಟೇಶ್‌ ಹೆಗಲಿಗೆ, ಸಿಎಂ ಬಳಿ ಪ್ರಮುಖ ಖಾತೆಗಳು

Karnataka cabinet reshuffle: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಅವರು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಹೀಗಾಗಿ ಈ ಇಲಾಖೆಯ ಹೊಣೆಯನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್‌ ಅವರಿಗೆ ವಹಿಸಲಾಗಿದೆ. ಇನ್ನುಳಿದ ಪ್ರಮುಖ ಖಾತೆಗಳು ಸಿಎಂ ಸಿದ್ದರಾಮಯ್ಯ ಅವರ ಬಳಿಯೇ ಉಳಿದಿವೆ.

ಸಚಿವ ಸಂಪುಟ; ಯೋಜನೆ-ಸಾಂಖ್ಯಿಕ ಇಲಾಖೆ ಹೊಣೆ ಕೆ.ವೆಂಕಟೇಶ್‌ ಹೆಗಲಿಗೆ

ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ.ವೆಂಕಟೇಶ್‌. -

Prabhakara R
Prabhakara R May 25, 2026 5:34 PM

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ (cabinet reshuffle) ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಹೈಕಮಾಂಡ್‌ ಬುಲಾವ್‌ ಮೇರೆಗೆ ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ಈ ನಡುವೆ ಸಚಿವರ ಖಾತೆಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದ್ದು, ಈ ಬಗ್ಗೆ ರಾಜಭವನದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್‌ ಅವರು ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾಗಿದ್ದರು. ಹೀಗಾಗಿ ಈ ಇಲಾಖೆಯ ಹೊಣೆಯನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್‌ (K Venkatesh) ಅವರಿಗೆ ವಹಿಸಲಾಗಿದೆ.

ಇನ್ನು ಕೆ.ಎನ್‌.ರಾಜಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಮತ್ತು ಬಿ.ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಯುವ ಜನ ಕ್ರೀಡೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಖಾತೆಯನ್ನು ಸಿಎಂ ಸಿದ್ದರಾಮಯ್ಯ ಅವರು ಯಾರಿಗೂ ಹಂಚಿಕೆ ಮಾಡದೆ, ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

CM Siddaramaiah's Delhi visit: ಇಂದು ಸಂಜೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ; ಹೈಕಮಾಂಡ್‌ ಬುಲಾವ್ ಬಗ್ಗೆ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತುತ ಹಣಕಾಸು, ಸಂಸದೀಯ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಗುಪ್ತಚರ ಇಲಾಖೆ, ವಾರ್ತಾ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಸಹಕಾರ ಖಾತೆ (ಕೃಷಿ ಮಾರುಕಟ್ಟೆ ಹೊರತುಪಡಿಸಿ) ಅನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಇಲಾಖೆ ಹಂಚಿಕೆಯಾಗದ ಉಳಿದೆಲ್ಲಾ ಖಾತೆಗಳ ಜವಾಬ್ದಾರಿಯೂ ಸಿಎಂ ಅವರ ಬಳಿಯೇ ಮುಂದುವರಿಯಲಿದೆ.