ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Karnataka SIR) ಪ್ರಕ್ರಿಯೆ ಅವಧಿಯನ್ನು ಚುನಾವಣಾ ಆಯೋಗ ಮತ್ತೊಮ್ಮೆ ವಿಸ್ತರಿಸಿದೆ. ಈ ಸಂಬಂಧ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮನೆ-ಮನೆ ಭೇಟಿ ಕಾರ್ಯವನ್ನು ಆಗಸ್ಟ್ 17ರ ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
ಆಯೋಗದ ಪರಿಷ್ಕೃತ ವೇಳಾಪಟ್ಟಿಯಂತೆ, ಮತಗಟ್ಟೆಗಳ ತಾರ್ಕಿಕ ಮರುಹೊಂದಾಣಿಕೆ ಕಾರ್ಯವು ಆಗಸ್ಟ್ 18 ರಿಂದ ಆರಂಭವಾಗಲಿದೆ. ಇನ್ನು ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಪ್ರಕಟಿಸಲಾಗುತ್ತದೆ. ಕರಡು ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಹಾಗೂ ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 24 ರಿಂದ ಸೆಪ್ಟೆಂಬರ್ 23ರವರೆಗೆ ಅವಕಾಶ ನೀಡಲಾಗಿದೆ.
ಸಲ್ಲಿಕೆಯಾಗುವ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಪ್ರಕ್ರಿಯೆ ಆಗಸ್ಟ್ 24 ರಿಂದ ಅಕ್ಟೋಬರ್ 22 ರ ವರೆಗೆ ನಡೆಯಲಿದೆ. ವೇಳಾಪಟ್ಟಿಯ ಪ್ರಕಾರ ಅಂತಿಮ ಮತದಾರರ ಪಟ್ಟಿಯನ್ನ ಅಕ್ಟೋಬರ್ 10ರಂದು ಪ್ರಕಟಿಸಲಾಗುತ್ತದೆ ಎಂದು ಎಂದು ಚುನಾವಣಾ ಆಯೋಗ ತಿಳಿಸಿದೆ.