Pralhad Joshi: ಕಾಂಗ್ರೆಸ್ ಪಕ್ಷದೊಳಗೇ ಮೊದಲು SIR ನಡೆಯಬೇಕಿದೆ: ಪ್ರಲ್ಹಾದ್ ಜೋಶಿ ಕಿಡಿ
ಕಾಂಗ್ರೆಸ್ ಪಕ್ಷದಲ್ಲಿ ರಾಜೀವ್ ಗಾಂಧಿ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹೀಗೆ ಬರೀ ನಕಲಿ ಗಾಂಧಿಗಳದ್ದೇ ಅಧಿಕಾರ ಮುಂಚೂಣಿಯಲ್ಲಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದೊಳಗೇ ಮೊದಲು SIR ನಡೆಯಬೇಕಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ಸಂಗ್ರಹ ಚಿತ್ರ) -
ನವದೆಹಲಿ, ಡಿ.10: ಕಾಂಗ್ರೆಸ್ ಪಕ್ಷದಲ್ಲೇ SIR (ವಿಶೇಷ ತೀವ್ರ ಪರಿಷ್ಕರಣೆ) ಅಗತ್ಯತೆ ಹೆಚ್ಚಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಸಂಸತ್ ಚಳಿಗಾಲದ ಅಧಿವೇಶನದ ಈ ಸಂದರ್ಭದಲ್ಲಿ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಚುನಾವಣಾ ಆಯೋಗಕ್ಕಿಂತ ಕಾಂಗ್ರೆಸ್ ಪಕ್ಷದಲ್ಲೇ SIR ತುಂಬಾ ಅವಶ್ಯಕತೆ ಇದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ರಾಜೀವ್ ಗಾಂಧಿ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹೀಗೆ ಬರೀ ನಕಲಿ ಗಾಂಧಿಗಳದ್ದೇ ಅಧಿಕಾರ ಮುಂಚೂಣಿಯಲ್ಲಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದೊಳಗೇ ಮೊದಲು SIR ನಡೆಯಬೇಕಿದೆ ಎಂದು ಜೋಶಿ ಅಭಿಪ್ರಾಯಿಸಿದ್ದಾರೆ.
ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರ ಭಾರತ: ಪ್ರಲ್ಹಾದ್ ಜೋಶಿ
ಅಧಿವೇಶನ ಇದ್ದಾಗಲೆಲ್ಲ ರಾಹುಲ್ ವಿದೇಶದಲ್ಲೇ ಹೆಚ್ಚಿರ್ತಾರೆ; ಜೋಶಿ ಟೀಕೆ
ನವದೆಹಲಿ: ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ ಅಧಿವೇಶನ ಇದ್ದಾಗಲೆಲ್ಲ ಹೆಚ್ಚು ಕಾಲ ವಿದೇಶದಲ್ಲೇ ಇರುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ಮೋದಿ ವಿದೇಶ ಪ್ರವಾಸ ಬಗ್ಗೆ ತಗಾದೆ ತೆಗೆಯುತ್ತಿರುವ ಕಾಂಗ್ರೆಸ್ ನಾಯಕರ ಆರೋಪಕ್ಕೆ ತುಸು ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ ಜೋಶಿ, ರಾಹುಲ್ ಗಾಂಧಿ ಸಂಸತ್ ಅಧಿವೇಶನ ನಡೆಯುತ್ತಿರುವಾಗಲೇ ಏಕೆ ಹೆಚ್ಚು ಸಮಯ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ? ಎಂದು ತರಾಟೆಗೆ ತೆಗೆದುಕೊಂಡರು.
ಸಂಸತ್ ಅಧಿವೇಶನ ನಡೆಯುತ್ತಿರುವಾಗ ರಾಹುಲ್ ಗಾಂಧಿ ಹೆಚ್ಚಾಗಿ ವಿದೇಶದಲ್ಲಿಯೇ ಇರುತ್ತಾರೆ. ಬಳಿಕ ʼಸಂಸತ್ತಿನಲ್ಲಿ ತಮಗೆ ಮಾತನಾಡಲು ಅವಕಾಶವೇ ಸಿಗಲಿಲ್ಲʼ ಎಂಬ ವೃಥಾ ಆರೋಪ ಮಾಡುತ್ತಾರೆ ಎಂದು ಅವರು ಟೀಕಿಸಿದರು.
ವಾಸ್ತವದಲ್ಲಿ ರಾಹುಲ್ ಗಾಂಧಿ ಸಂಸತ್ ಅಧಿವೇಶನಕ್ಕೆ ಆಗಾಗ್ಗೆ ಗೈರಾಗುತ್ತಲೇ ಇರುತ್ತಾರೆ. ಅವರೊಬ್ಬ ಅರೆಕಾಲಿಕ ಮತ್ತು ಬೇಜವಾಬ್ದಾರಿ ರಾಜಕೀಯ ನಾಯಕರು. ವಿಪಕ್ಷ ನಾಯಕನ ಸ್ಥಾನದಲ್ಲಿದ್ದು ಸ್ವಲ್ಪವೂ ಗಂಭೀರತೆಯೇ ಇಲ್ಲದ ರಾಜಕಾರಣಿ ಎಂದು ಆರೋಪಿಸಿದರು.
ಸಂಸತ್ತಿನ ಚಳಿಗಾಲದ ಅಧಿವೇಶನ ಮಧ್ಯೆ ರಾಹುಲ್ ಗಾಂಧಿ ಜರ್ಮನಿ ಭೇಟಿ ಕೈಗೊಳ್ಳುತ್ತಾರೆ. ಬಿಹಾರ ಚುನಾವಣೆ ವೇಳೆಯೂ ವಿದೇಶದಲ್ಲಿದ್ದರು. ಇದೀಗ ಬಿಜೆಪಿ - ಚುನಾವಣಾ ಆಯೋಗ ಒಪ್ಪಂದ ಮಾಡಿಕೊಂಡಿದೆ ಎಂಬ ವೃಥಾ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್, ಸೋತಾಗಲೆಲ್ಲ ಇವಿಎಂ ಮತ್ತು ಚುನಾವಣಾ ಆಯೋಗವನ್ನು ದೂಷಿಸುವ ಅಭ್ಯಾಸ ಬೆಳೆಸಿಕೊಂಡು ಬಿಟ್ಟಿದೆ ಎಂದು ಸಚಿವ ಜೋಶಿ ದೂರಿದರು.
ಮಂಡ್ಯ ಜಿಲ್ಲೆಯಲ್ಲಿ 200 ರೈತರ ಆತ್ಮಹತ್ಯೆ ನಿಮ್ಮ ಕೊಡುಗೆ; ಸಿಎಂ ವಿರುದ್ಧ ಕುಮಾರಸ್ವಾಮಿ ಕಿಡಿ
ಕರ್ನಾಟಕದಲ್ಲಿ ಗೆದ್ದಾಗ ಏನಂದಿದ್ರಿ?
ಜಾರ್ಖಂಡ್‌ನಲ್ಲಿ INDI ಮೈತ್ರಿಕೂಟ ಗೆದ್ದಾಗ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಾಗ ಏನು ಹೇಳಿದ್ದೀರಿ? ಬಿಹಾರದಲ್ಲಿ ಸೋತಾಗ, ಕರ್ನಾಟಕದ ಕೆಲ ಕ್ಷೇತ್ರಗಳಲ್ಲಿ ಸೋತಾಗ ಏನು ಹೇಳುತ್ತಿದ್ದೀರಿ? ಸ್ವಲ್ಪ ಪರಿಜ್ಞಾನ ಉಳ್ಳವರಾಗಿ ಮಾತನಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಜೋಶಿ ಚಾಟಿ ಬೀಸಿದರು. ಕಾಂಗ್ರೆಸ್ ಸೋತಾಗ ಇವಿಎಂ ಮತ್ತು ಚುನಾವಣಾ ಆಯೋಗವನ್ನು ದೂಷಿಸುತ್ತದೆ. ಗೆಲುವಾದಾಗ ಬೇರೆಯದ್ದೇ ಪ್ರತಿಕ್ರಿಯೆ ನೀಡುತ್ತದೆ. ಹೀಗೆ ಸೋತಾಗೊಂದು, ಗೆದ್ದಾಗೊಂದು ಭಿನ್ನ ವಿಭಿನ್ನ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದಿದ್ದಾರೆ.