#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Sonia Gandhi: ರಾಷ್ಟ್ರಪತಿಗಳನ್ನು ಟೀಕಿಸುವ ಭರದಲ್ಲಿ ಸೋನಿಯಾ ಗಾಂಧಿ ಎಡವಟ್ಟು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬಡ ಮಹಿಳೆ ಎಂದು ಹೇಳುವ ಮೂಲಕ ಸೋನಿಯಾ ಗಾಂಧಿ ಅವರು ವಿವಾದವನ್ನು ಹುಟ್ಟು ಹಾಕಿದ್ದಾರೆ. ಸೋನಿಯಾ ಗಾಂಧಿ ಅವರಿಂದ ಈ ಹೇಳಿಕೆ ಬರುತ್ತಿದ್ದಂತೆ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಕಾಂಗ್ರೆಸ್‌ ಬುಡಕಟ್ಟು ವಿರೋಧಿ ಪಕ್ಷ ಎಂದು ಬಿಜೆಪಿ ಹೇಳಿದೆ.

ರಾಷ್ಟ್ರಪತಿ ಮುರ್ಮುಗೆ ಸೋನಿಯಾ ಗಾಂಧಿ ಅವಮಾನ!

Sonia Gandhi

Profile Vishakha Bhat Jan 31, 2025 3:47 PM

ನವದೆಹಲಿ: ಸಂಸತ್‌ನಲ್ಲಿ ಶುಕ್ರವಾರ ಬಜೆಟ್‌ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನಕ್ಕೂ ಮುನ್ನ ಉಭಯ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಷಣ ಮಾಡಿದ್ದಾರೆ. ರಾಷ್ಟ್ರಪತಿಗಳ ಭಾಷಣವನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.



ಅಧಿವೇಶನ ಮುಗಿಸಿ ಹೊರ ಬಂದ ಸೋನಿಯಾ ಗಾಂಧಿ ಅವರು ಮಾಧ್ಯಮದ ಎದುರು ಬಡ ಮಹಿಳೆ ಪಾಪ ಭಾಷಣ ಮಾಡಿ ತುಂಬಾ ದಣಿದಿದ್ದಾರೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ರಾಷ್ಟ್ರಪತಿ ಅವರು ತಮ್ಮ ಭಾಷಣದುದ್ದಕ್ಕೂ ಸುಳ್ಳು ಭರವಸೆಗಳೇ ತುಂಬಿದ್ದವು ಎಂದು ಆರೋಪಿಸಿದ್ದಾರೆ. ಸೋನಿಯಾ ಜೊತೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಉಪಸ್ಥಿತರಿದ್ದರು.

ಸೋನಿಯಾ ಗಾಂಧಿ ಅವರಿಂದ ಈ ಹೇಳಿಕೆ ಬರುತ್ತಿದ್ದಂತೆ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕಾಂಗ್ರೆಸ್ ಅನ್ನು "ಬುಡಕಟ್ಟು ವಿರೋಧಿ" ಎಂದು ಕರೆದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ನಡ್ಡಾ ಗೌರವಾನ್ವಿತ ರಾಷ್ಟ್ರಪತಿ ಅವರಿಗೆ ಈ ರೀತಿ ಹೇಳಿರುವುದು ತಪ್ಪು. ಕಾಂಗ್ರೆಸ್‌ ಪಕ್ಷವು ಬಡವರು ಹಾಗೂ ಬುಡಕಟ್ಟು ಜನಾಂಗದವರ ವಿರೋಧಿ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷವು ಇಡೀ ಬುಡಕಟ್ಟು ಸಮುದಾಯಕ್ಕೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.





ಈ ಸುದ್ದಿಯನ್ನೂ ಓದಿ : Rahul Gandhi: ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ತಡೆಯಾಜ್ಞೆ!

ಕಾಂಗ್ರೆಸ್ ಅನ್ನು ರಾಷ್ಟ್ರೀಯ ಪಕ್ಷವೆಂದು ಪರಿಗಣಿಸಿದ ಸಮಯವಿತ್ತು. ರಾಹುಲ್ ಗಾಂಧಿ ಅಧಿಕಾರ ವಹಿಸಿಕೊಂಡಾಗಿನಿಂದ ಅದು ಬದಲಾಗಿದೆ. ಭಾರತದ ಪ್ರಥಮ ಪ್ರಜೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅವರು, ಅವರ ಭಾಷಣದ ಬಗ್ಗೆ ಈ ರೀತಿಯ ಹೇಳಿಕೆ ನೀಡಿರುವುದು ಸರಿ ಇಲ್ಲ ಎಂದು ಕೇಂದ್ರ ಸಚಿವ ಸುಕಾಂತ ಮಜುಂದಾರ್ ಹೇಳಿದ್ದಾರೆ.