ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಮಾರಕ- ಸಿದ್ದರಾಮಯ್ಯ

CM Siddaramaiah: ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಮಾರಕ- ಸಿದ್ದರಾಮಯ್ಯ

Profile Siddalinga Swamy Jul 1, 2025 3:32 PM

ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ‘ಪತ್ರಿಕಾ ದಿನಾಚರಣೆ-2025’ ಹಾಗೂ ‘ನಿಜ ಸುದ್ದಿಗಾಗಿ ಸಮರ’ ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

CM Siddaramaiah 1

ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್‌ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದು ಹೇಳಿದರು. ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಢ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ನಾನು ಇವತ್ತು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಆರೋಗ್ಯ ಸಂಜೀವಿನಿ ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇವೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಜಾರಿ ಮಾಡಿರುವುದಲ್ಲ. ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಿ ಎಂದು ಅವರು ಕರೆ ನೀಡಿದರು. ‌

ಈ ಸುದ್ದಿಯನ್ನೂ ಓದಿ | RRB Recruitment 2025: 10, 12ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್; ರೈಲ್ವೆ ನೇಮಕಾತಿ ಮಂಡಳಿಯಿಂದ 6,238 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು ಎಂದು ತಿಳಿಸಿದ ಅವರು, ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಜಾತಿ-ವರ್ಗ ರಹಿತ ಸಮಾಜ ಸೃಷ್ಟಿಯಾಗಬೇಕು ಎನ್ನುವುದು ಸಂವಿಧಾನದ ಮೌಲ್ಯ. ಇದನ್ನು ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.