ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ರೆ ರಾಜ್ಯಾದ್ಯಂತ ಹೋರಾಟ: ಬೊಮ್ಮಾಯಿ ಎಚ್ಚರಿಕೆ

Basavaraj Bommai: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ದತೆ ಇದ್ದರೆ, ಸುಪ್ರೀಂ ಕೊರ್ಟ್ ನಿರ್ದೇಶನದಂತೆ ನ್ಯಾ.‌ ನಾಗಮೋಹನ್ ದಾಸ್ ವರದಿ ಆಧರಿಸಿ ಒಳಮೀಸಲಾತಿ ಜಾರಿ ಮಾಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಒಳ ಮೀಸಲಾತಿ ಜಾರಿ ಮಾಡದಿದ್ರೆ ರಾಜ್ಯಾದ್ಯಂತ ಹೋರಾಟ: ಬೊಮ್ಮಾಯಿ

ಸಂಸದ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ) -

Profile
Siddalinga Swamy Mar 13, 2026 4:44 PM

ಬೆಂಗಳೂರು, ಮಾ.13: ರಾಜ್ಯದಲ್ಲಿ ಎಸ್ಸಿ ಸಮುದಾಯದ ಒಳ ಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆ ಅಗತ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಬದ್ದತೆ ಇದ್ದರೆ, ಸುಪ್ರೀಂ ಕೊರ್ಟ್ ನಿರ್ದೇಶನದಂತೆ ನ್ಯಾ.‌ ನಾಗಮೋಹನ್ ದಾಸ್ ವರದಿ ಆಧರಿಸಿ ಒಳಮೀಸಲಾತಿ ಜಾರಿ ಮಾಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಎಚ್ಚರಿಸಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಸಿ, ಎಸ್ಟಿಗಳಿಗೆ ಸದಾ ಕಾಲ ಅನ್ಯಾಯ ಮಾಡುತ್ತಾ ಬಂದಿದೆ‌. ಅವರ ವಿಚಾರ ಬಂದಾಗ ಯಾವುದೇ ಸ್ಪಷ್ಡವಾಗಿರುವ ನಿಲುವು, ನಿರ್ಧಾರ ತೆಗೆದುಕೊಂಡಿಲ್ಲ ಹಿಂದೆ ಐದು ವರ್ಷ ಸಿದ್ದರಾಮಯ್ಯ ಸಿಎಂ ಆದಾಗ ಒಳ ಮೀಸಲಾತಿ ಹೋರಾಟ, ಎಸ್ಟಿ, ಎಸ್ಸಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಕೂಗು ಕೇಳಿತು. ಸ್ವಾಮೀಜಿಗಳು ಪಾದಯಾತ್ರೆ ಮಾಡಿದರು. ಹಿಂದುಳಿದ ವರ್ಗದ ಸ್ವಾಮೀಜಿಗಳು ಪಾದಯಾತ್ರೆ ಮಾಡಿದರು. ಅಹಿಂದ ನಾಯಕ ಅಂತ ಹೇಳುವ ಸಿಎಂ ಮುಸ್ಲೀಮರನ್ನು ಬಿಟ್ಟು ಅಹಿಂದ ವರ್ಗಕ್ಕೆ ಬದುಕಿನಲ್ಲಿ ಬದಲಾಗುವ ಯಾವುದೇ ಯೋಜನೆ ಮಾಡಿಲ್ಲ ಎಂದು ಆರೋಪಿಸಿದರು.

ಎಸ್ಸಿ, ಎಸ್ಟಿ ಹಣ ಬೇರೆಡೆ ಖರ್ಚು ‌

ಎಸ್ಸಿ ಎಸ್ಟಿ ಗೆ ಮೀಸಲಿಟ್ಟ ಅನುದಾನ ವರ್ಗಾಯಿಸಿ ಬೇರೆ ಕಡೆ ಖರ್ಚು ಮಾಡುತ್ತೀರಿ ಅದರ ಬಗ್ಗೆ ಏನೂ ಅನಿಸುವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ಸುಮಾರು 60 ಸಾವಿರ ಕೋಟಿ ಹಣ ಬೇರೆ ಕಡೆಗೆ ಖರ್ಚಾಗಿದೆ. ಬಜೆಟ್ ನಲ್ಲಿ ಒಬಿಸಿಗೆ 441ಕೋಟಿ ರೂ. ಇಟ್ಟಿದ್ದರು. ಅದನ್ನು ಜಾತಿ ಗಣತಿ ಮಾಡಲು ಇಟ್ಟರು. ಅದನ್ನು ರಾಜ್ಯದ ಬೊಕ್ಕಸದಿಂದ ಖರ್ಚು ಮಾಡಬೇಕಿತ್ತು. ನಿಗಮ ಮಂಡಳಿಗಳಲ್ಲಿ ಎಸ್ಸಿ ಎಸ್ಟಿ ಶಾಸಕರೆ ಗಂಗಾ ಕಲ್ಯಾಣಕ್ಕೆ ಹಣ ನಿಡಿಲ್ಲ ಅಂತ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಒಳ ಮೀಸಲಾತಿಯ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಆರೋಪಿಸಿದರು.

ರಾಜ್ಯಾದ್ಯಂತ ಹೋರಾಟ

ಮೀಸಲಾತಿಯ ಬಗ್ಗೆ ಸ್ಪಷ್ಟತೆ ಇಲ್ಲದೇ 56 ಸಾವಿರ ಪೋಸ್ಟ್ ತುಂಬಿಕೊಳ್ಳಲು ತೀರ್ಮಾನಿಸಿದ್ದಾರೆ‌‌. ಈಗಾಗಲೇ ಶೇ 56% ಮೀಸಲಾತಿ ಶಿಕ್ಷಣ ಕ್ಷೇತ್ರದಲ್ಲಿ ಜಾರಿಯಲ್ಲಿದೆ. ಇವರು ಗಟ್ಟಿಯಾಗಿ ಜಾರಿ ಮಾಡಿದರೆ ಸುಪ್ರೀಂ ಕೋರ್ಟ್ ಬಿಟ್ಟರೆ ಯಾರೂ ಅಡ್ಡಿ ಮಾಡುವುದಿಲ್ಲ. ಶೇ. 56% ಮೀಸಲಾತಿಗೆ ಯಾರೂ ತಡೆ ಕೊಟ್ಟಿಲ್ಲ. ಸುಪ್ರೀಂ ಕೊರ್ಟ್ ನಿರ್ದೇಶನದಂತೆ ನಾಗಮೋಹನ್ ದಾಸ್ ಅವರ ಸಮಿತಿ ನೀಡಿರುವ ವರದಿಯಂತೆ ಒಳ ಮಿಸಲಾತಿ ಜಾರಿ ಮಾಡಬೇಕು. ಅಲೆಮಾರಿಗಳು ಅತ್ಯಂತ ಸಂಕಷ್ಟದ ಸ್ಥಿತಿಯಲ್ಲಿ ಇದ್ದಾರೆ. ಅವರಿಗೆ ಮನೆ ಇಲ್ಲ. ಕಾಡಿನಲ್ಲಿದ್ದಾರೆ‌ ಅವರು ಸಂಘಟಿತ ಆಗಿಲ್ಲ ಎನ್ನುವ ಕಾರಣಕ್ಕೆ ಅವರನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ‌. ನಾವು ಈ ಬಗ್ಗೆ ಎಲ್ಲ ಜಿಲ್ಲೆಗಳಲ್ಲಿ ಹೋರಾಟ ಮಾಡುತ್ತೆವೆ. ಈಗಾಗಲೇ ಒಂದು ಹೋರಾಟ ಆಗಿದೆ. ಇದು ರಾಜ್ಯಾದ್ಯಂತ ಆಗುತ್ತದೆ. ಕೂಡಲೇ ಒಳ ಮೀಸಲಾತಿ ಜಾರಿ ಮಾಡಬೇಕು. ವಿಳಂಬ ಮಾಡುತ್ತಿರುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು.

BJP Karnataka: ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ

ಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ರಾಜುಗೌಡ, ಶಿವನಗೌಡ ನಾಯಕ್ ಹಾಗೂ ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು ಹಾಜರಿದ್ದರು.