ವಿಬಿ ಜಿ ರಾಮ್ ಜಿ ಮಸೂದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
ಪ್ರತಿ ಪಕ್ಷಗಳ ವಿರೋಧದ ನಡುವೆಯೂ ಇತ್ತೀಚೆಗೆ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಬದಲಾಯಿಸಿತ್ತು. ಇದಕ್ಕೆ ಪ್ರತಿಯಾಗಿ ವಿಬಿ ಜಿ ರಾಮ್ ಜಿ ಮಸೂದೆ ಎಂದು ಮರು ನಾಮಕರಣ ಮಾಡಿತ್ತು. ಇದರ ವಿರುದ್ಧ ಇದೀಗ ತಮಿಳುನಾಡು ವಿಧಾನ ಸಭೆಯಲ್ಲಿ ನಿರ್ಣಯ ಮಂಡಿಸಲಾಗುವುದು ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಸಂಗ್ರಹ ಚಿತ್ರ -
ಚೆನ್ನೈ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ (Mahatma Gandhi National Rural Employment Guarantee Scheme) ಹೆಸರು ಬದಲಾಯಿಸಿ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ (Viksit Bharat—Guarantee for Rozgar and Ajeevika Mission) ಯೋಜನೆ ಎಂದು ಇತ್ತೀಚೆಗೆ ಕೇಂದ್ರ ಸರ್ಕಾರ ಅನುಮೋದಿಸಿದ್ದು, ಇದನ್ನು ವಿರೋಧಿಸಿ ಇದೀಗ ತಮಿಳುನಾಡು ಸರ್ಕಾರವು (Tamil Nadu Assembly) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಿದೆ. ಇದು ನರೇಗಾ ಯೋಜನೆಯಲ್ಲಿ (NREGA scheme) ಮಹಾತ್ಮ ಗಾಂಧಿಯವರ ಹೆಸರನ್ನು ಮತ್ತೆ ಸೇರಿಸಲು ಒತ್ತಾಯಿಸುತ್ತದೆ ನೆಡು ತಮಿಳುನಾಡು ಸರ್ಕಾರ ಹೇಳಿದೆ.
ರಾಜ್ಯ ವಿಧಾನ ಸಭೆಯಲ್ಲಿ ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರದ ವಿಬಿ–ಜಿರಾಮ್‌ಜಿ ಮಸೂದೆಯನ್ನು ವಿರೋಧಿಸಿ ನಿರ್ಣಯ ಮಂಡಿಸಲಿದೆ. ಇದರಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಮಾಡಿರುವ ಹೊಸ ಬದಲಾವಣೆಗಳ ಕುರಿತು ಕೇಂದ್ರದೊಂದಿಗಿನ ತನ್ನ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಲಿದೆ.
Bomb Threat: ರಾಜ್ಯಪಾಲರ ಕಚೇರಿಗೆ ಬಾಂಬ್ ಬೆದರಿಕೆ; ಆರ್ ಡಿಎಕ್ಸ್ ಬ್ಲಾಸ್ಟ್ ಮಾಡ್ತೇವೆಂದು ಇಮೇಲ್!
ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ದ್ರಾವಿಡ ಮುನ್ನೇತ್ರ ಕಳಗಂ (DMK) ಮೂಲಗಳು ತಿಳಿಸಿರುವ ಮಾಹಿತಿ ಪ್ರಕಾರ ವಿಬಿ–ಜಿರಾಮ್‌ಜಿ ಮಸೂದೆಯ ಶೀರ್ಷಿಕೆಯಲ್ಲಿ ಮಹಾತ್ಮ ಗಾಂಧಿಯವರ ಹೆಸರನ್ನು ಮತ್ತೆ ಉಲ್ಲೇಖಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ ಹೇರಲು ನಿರ್ಣಯ ಮಂಡಿಸಲಾಗುತ್ತಿದೆ. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಬದಲಾವಣೆಯಿಂದ ಅದರ ಪರಂಪರೆ ಮತ್ತು ಉದ್ದೇಶ ಎರಡನ್ನೂ ದುರ್ಬಲಗೊಳಿಸಲಾಗುತ್ತಿದೆ ಎಂದು ಹೇಳಿದೆ.
ಪರಿಷ್ಕೃತ ಮಸೂದೆಯಲ್ಲಿ ಪ್ರಸ್ತಾಪಿಸಲಾದ ಪರಿಷ್ಕೃತ ನಿಧಿಯ ಮಾದರಿಯು ಕೇಂದ್ರ ಮತ್ತು ರಾಜ್ಯ ವೆಚ್ಚ ಹಂಚಿಕೆಯನ್ನು 60:40 ಕ್ಕೆ ಹೆಚ್ಚಿಸಿದೆ. ಇದರಿಂದ ತಮಿಳುನಾಡು ಖಜಾನೆ ಮೇಲೆ ಭಾರಿ ಹೊರೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆಯಲ್ಲಿ ಈ ಕುರಿತು ನಿರ್ಣಯ ಮಂಡಿಸಲಾಗುತ್ತದೆ. ಈ ಮೂಲಕ ಕೇಂದ್ರ ಸರ್ಕಾರ ಮಾಡಿರುವ ಏಕಪಕ್ಷೀಯ ಬದಲಾವಣೆಗಳನ್ನು ವಿರೋಧಿಸಲು ತಮಿಳುನಾಡು ಸರ್ಕಾರ ಇತರ ರಾಜ್ಯಗಳ ಬೆಂಬಲವನ್ನು ಕೋರಲಿದೆ ಎನ್ನಲಾಗಿದೆ.
ದಳಪತಿ ವಿಜಯ್‌ಯ ಟಿವಿಕೆಗೆ ‘ಸೀಟಿ’, ಕಮಲ್ ಹಾಸನ್‌ನ ಎಂಎನ್‌ಎಂಗೆ ‘ಬ್ಯಾಟರಿ ಟಾರ್ಚ್’ ಚಿಹ್ನೆ ನೀಡಿದ ಚುನಾವಣಾ ಆಯೋಗ
ಕಳೆದ ಮಂಗಳವಾರ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಸರ್ಕಾರ ಸಿದ್ಧಪಡಿಸಿದ ಸಾಂಪ್ರದಾಯಿಕ ಭಾಷಣವನ್ನು ಓದಲು ನಿರಾಕರಿಸಿದ್ದು ಇದರಿಂದ ಉಂಟಾಗಿರುವ ರಾಜಕೀಯ ಉದ್ವಿಗ್ನತೆ ನಡುವೆಯೇ ತಮಿಳುನಾಡು ಸರ್ಕಾರ ಈ ನಿರ್ಣಯ ಕೈಗೊಂಡಿದೆ.
ವರ್ಷದ ಮೊದಲ ವಿಧಾನಸಭೆ ಅಧಿವೇಶನದ ಆರಂಭದ ದಿನವೇ ಸದನವು ರಾಷ್ಟ್ರಗೀತೆಗೆ ಅಗೌರವ ತೋರಿದೆ ಎಂದು ಆರೋಪಿಸಿರುವ ರಾಜ್ಯಪಾಲ ಆರ್.ಎನ್. ರವಿ ಅವರು ನಾಲ್ಕನೇ ಬಾರಿಗೆ ವಿಧಾನಸಭೆಯಿಂದ ಹೊರ ನಡೆದಿದ್ದಾರೆ. ವಿಧಾನಸಭೆಯ ಉದ್ಘಾಟನಾ ಸಮಾರಂಭದ ವೇಳೆ ಹೀಗೆ ರವಿ ಅವರು ಹೊರನಡೆದಿರುವುದು ಇದು ಸತತ ನಾಲ್ಕನೇ ವರ್ಷ. ಈ ಸಂದರ್ಭದಲ್ಲಿ ಅವರು ತಮ್ಮ ಮೈಕ್ರೊಫೋನ್ ಅನ್ನು ಸ್ವಿಚ್ ಆಫ್ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯಗೀತೆ ತಮಿಳು ತಾಯಿ ವಾಳ್ತು ನುಡಿಸಿದ ಕೆಲವು ನಿಮಿಷಗಳ ಅನಂತರ ಅವರು ವಿಧಾನಸಭೆಯಿಂದ ನಿರ್ಗಮಿಸಿದರು.