ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Cabinet expansion: ಮಂದಿನ ವಾರ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ.ಶಿವಕುಮಾರ್‌

ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಾತನಾಡಿದ್ದಾರೆ. ದೆಹಲಿಯಲ್ಲಿ ನಡೆದ ಕೆಲ ರಾಜಕೀಯ ಬೆಳವಣಿಗೆಗಳು ಹಾಗೂ ಪ್ರತಿಭಟನೆಗಳಿಂದಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗಿತ್ತು. ಹೀಗಾಗಿ ಮುಂದಿನ ವಾರದಲ್ಲಿ ಕ್ಯಾಬಿನೆಟ್‌ ವಿಸ್ತರಣೆ ಸಾಧ್ಯತೆ ಇದೆ.

ಚಿತ್ರದುರ್ಗ, ಜು.25: ಕಾಂಗ್ರೆಸ್‌ ಸರ್ಕಾರದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ (Cabinet expansion) ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸುಳಿವು ನೀಡಿದ್ದು, ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂಬ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸಿಎಂ ಮಾತನಾಡಿದ್ದಾರೆ.

“ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಮಂತ್ರಿಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ರಾಜ್ಯದ ಬರ ಪರಿಸ್ಥಿತಿ ಅವಲೋಕಿಸಬೇಕು. ರೈತರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿಗೆ 1 ಕೋಟಿವರೆಗೆ ಖರ್ಚು ಮಾಡಬಹುದು

ಜಿಲ್ಲಾಡಳಿತವು ಗ್ರಾಮೀಣ ಭಾಗದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಕೆಗೆ 1 ಕೋಟಿ ರೂ.ವರೆಗೆ ಖರ್ಚು ಮಾಡಬಹುದು ಎಂದು ಬೆಳಗಾವಿ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು. ಈ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದು ಸಿಎಂ ಎಚ್ಚರಿಸಿದರು.

ಸಭೆಯಲ್ಲಿ ಶಾಸಕರು ಮುಂದಿಟ್ಟ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿದರು. ಶೀಘ್ರ ಬಗೆಹರಿಸಬಹುದಾದ ಸಮಸ್ಯೆಗಳನ್ನು ದಾಖಲಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಶಾಸಕರು ಹೇಳಿದ ಎಲ್ಲ ‌ಅಂಶಗಳು ದಾಖಲಾಗಬೇಕು ಎಂದು ಸೂಚಿಸಿದರು.

ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ

ರಾಜ್ಯದಲ್ಲಿ ನೇಮಕಾತಿ ಪರ್ವ ನಡೆಯುತ್ತಿದೆ. ಸುಮಾರು 70 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೇಮಕಾತಿ ಪರೀಕ್ಷೆ ನಡೆಯುವ ಕಡೆ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಪ್ರಶ್ನೆ ಪತ್ರಿಕೆಗೆ ಹೆಚ್ಚಿನ ಭದ್ರತೆ ಒದಗಿಸಬೇಕು. ಪರೀಕ್ಷೆಯ, ಪ್ರಶ್ನೆ ಪತ್ರಿಕೆ ತಯಾರಿಕೆ, ಹಂಚಿಕೆ ಹೀಗೆ ಪ್ರತಿಯೊಂದು ಹಂತವೂ ದಾಖಲೆಯಾಗಬೇಕು. ನೀಟ್ ಹಗರಣ ಎಲ್ಲರ ಗಮನದಲ್ಲಿರಲಿ. ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಅಧಿಕಾರಿಗಳೇ ಹೊಣೆ" ಎಂದು ಎಚ್ಚರಿಸಿದರು.

"ಜನರ ಮನೆ ಬಾಗಿಲಿಗೆ ಸರ್ಕಾರ ಹೋಗಬೇಕು.‌ ಜನರು ಸರ್ಕಾರದ ಬಾಗಿಲಿಗೆ ಬರಬಾರದು. ಅಧಿಕಾರಿಗಳು ಸಮಸ್ಯೆಗಳಿಗೆ ಪರಿಹಾರ ಹುಡುಕಬೇಕು. ಸುಮ್ಮನೆ ತಕರಾರು ಮಾಡಿದರೆ ಕ್ರಮ ಕೈಗೊಳ್ಳುವೆ. ನಾನು ಕೊಟ್ಟ ಸ್ವಾತಂತ್ರ್ಯ ದುರುಪಯೋಗ ಮಾಡಿಕೊಂಡರೆ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಎಚ್ಚರಿಸಿದರು.

ಹೊಸ ಬೋರ್‌ವೆಲ್ ವಿಡಿಯೋ, ಫೋಟೊ, ಜಿಪಿಎಸ್ ಕಡ್ಡಾಯ

“ಹೊಸ ಬೋರ್‌ವೆಲ್ ಕೊರೆಯುವ ಮುಂಚಿನ ಹಾಗೂ ನಂತರದ ವಿಡಿಯೋ, ಫೋಟೋಗಳನ್ನು ದಾಖಲಿಸಬೇಕು. ಜಿಪಿಎಸ್ ಕೂಡ ನಮೂದಿಸಬೇಕು. ಬೋರ್ ವೆಲ್ ಆಳದ ಬಗ್ಗೆಯೂ ದಾಖಲಿಸಬೇಕು. 150 ಅಡಿ ಆಳ ಕೊರೆದು 500- 600 ಅಡಿ ಆಳ ಕೊರೆಯಲಾಗಿದೆ ಎಂದು ಅಕ್ರಮಕ್ಕೆ ಆಸ್ಪದ ನೀಡಬಾರದು" ಎಂದರು.

"ಹೊಸದಾಗಿ ಬೋರ್‌ವೆಲ್ ಕೊರೆದರೆ, ದುರಸ್ತಿಗೊಳಿಸಿದರೆ ಪ್ರತಿಯೊಂದರ ಮಾಹಿತಿ ದಾಖಲಿಸಬೇಕು. ಹೊಸ ಬೋರ್ ವೆಲ್ ಕೊರೆದರೆ ಜಿಪಿಎಸ್ ಮಾಹಿತಿ ದಾಖಲಿಸಬೇಕು. ವಿದ್ಯುತ್ ಸಂಪರ್ಕ ಸೇರಿದಂತೆ ಪ್ರತಿ ತೀರ್ಮಾನದ ಬಗ್ಗೆಯೂ ಮಾಹಿತಿಗಳು ಪಾರದರ್ಶಕವಾಗಿರಬೇಕು" ಎಂದರು.

"ಎಲ್‌ನಿನೋ ಪ್ರಭಾವದಿಂದಾಗಿ ರಾಜ್ಯದಲ್ಲಿ ಬಹುತೇಕ ಎಲ್ಲಾ ಅಣೆಕಟ್ಟುಗಳಲ್ಲಿ ನೀರಿನ ಶೇಖರಣೆ ಕಡಿಮೆಯಾಗಿದ್ದು, ಈ ಬಾರಿಯ ಬರ ಪರಿಸ್ಥಿತಿಯನ್ನು ನಾವೆಲ್ಲರೂ ‘ಟೀಮ್ ಕರ್ನಾಟಕ’ವಾಗಿ ಎದುರಿಸೋಣ”ಎಂದು ಕರೆ ನೀಡಿದರು.

ಬೆಳೆ ವಿಮೆ; ರೈತರಿಗೆ ನೆರವಾಗಿ

“ಬೆಳೆ ವಿಮೆ ಬಗ್ಗೆ ರೈತರಿಗೆ ಅಧಿಕಾರಿಗಳು ನೆರವಾಗಬೇಕು. ಅರಿವು ಮೂಡಿಸಬೇಕು. ರೈತರು ಯಾವುದೇ ಕಾರಣಕ್ಕೂ ಮುಂದಿನ ಮಳೆ, ಅಣೆಕಟ್ಟು ನೀರು ನೆಚ್ಚಿಕೊಂಡು ಬೆಳೆ ಹಾಕಬಾರದು. ನೀರಾವರಿ ಸಮಿತಿ, ಅಧಿಕಾರಿಗಳು ಹಾಗೂ ಸರ್ಕಾರದ ಮಾರ್ಗದರ್ಶನ ಆಧಾರದ ಮೇಲೆ ಬೆಳೆ ಹಾಕಿಕೊಳ್ಳಬೇಕು. ನಿಮ್ಮಷ್ಟಕ್ಕೆ ನೀವೆ ಬೆಳೆ ಹಾಕಿದರೆ ನಷ್ಟಕ್ಕೆ ನೀವೇ ಹೊಣೆಯಾಗಬೇಕಾಗುತ್ತದೆ. ನಮ್ಮಿಂದ ಸಹಕಾರ ನೀಡಲು ಆಗುವುದಿಲ್ಲ. ಆಲಮಟ್ಟಿ ಹೊರತಾಗಿ ಬೇರೆ ಯಾವ ಜಲಾಶಯದಲ್ಲೂ ನೀರಿನ ಪರಿಸ್ಥಿತಿ ಉತ್ತಮವಾಗಿಲ್ಲ" ಎಂದರು.

"1 ಕೋಟಿ ಕುಟುಂಬಗಳಿಗೆ 1 ವರ್ಷದಲ್ಲಿ ಇ ಖಾತಾ ಹಂಚಿಕೆ ಮಾಡಬೇಕು. ಪ್ರತಿ ತಾಲೂಕಿನಲ್ಲಿ ವಸತಿ ರಹಿತರಿಗೆ ನಿವೇಶನ ನೀಡಬೇಕು. ಜಿಲ್ಲಾಧಿಕಾರಿಗಳು ಭೂ ಬ್ಯಾಂಕ್ ರಚಿಸಬೇಕು. ಪ್ರತಿಯೊಬ್ಬರು ಸ್ವಂತ ಸೂರು ಹೊಂದಿರಬೇಕು. ತಕ್ಷಣವೇ ವಿಬಿಜಿ ರಾಮ್ ಜೀ ಕಾಮಗಾರಿಗಳನ್ನು ಬೇಗ ಕೈಗೆತ್ತಿಕೊಳ್ಳಬೇಕು" ಎಂದರು‌.

ಕೇಂದ್ರದ ಬಳಿ ಸರ್ವಪಕ್ಷ ನಿಯೋಗ, ದೆಹಲಿಯಲ್ಲಿ ಸಂಸದರ ಸಭೆ

"ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರದ ಬಳಿ ಚರ್ಚಿಸಲು ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲಾಗುವುದು. ದೆಹಲಿಯಲ್ಲಿ ಸೋಮವಾರ ಸಂಸದರ ಸಭೆ ನಡೆಸಲಾಗುವುದು"ಎಂದರು.

"ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲು ಸಾಧ್ಯವಿಲ್ಲ ಎಂದು ಕಾವೇರಿ ನೀರು ನಿರ್ವಾಹಣಾ ಸಮಿತಿ ಮುಂದೆ ಹೇಳಲಾಗಿದೆ. ಅವರಿಗೂ ಪರಿಸ್ಥಿತಿಯ ಬಗ್ಗೆ ಅರಿವಿದೆ. ಪ್ರಧಾನಿ ಮೋದಿ ಅವರು ಸಹ ಎಲ್ ನೀನೋ ಪರಿಣಾಮದ ಬಗ್ಗೆ ಮಾತನಾಡಿದ್ದಾರೆ. ಈ ಎಚ್ಚರಿಕೆಯನ್ನು ನಾವು ಕಡೆಗಣಿಸಬಾರದು. ನಾನು ಸಹ ಪ್ರಧಾನಿಯವರಿಗೆ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಡಿಸಿಎಂ ಅವರೂ ಸಹ ಬರದ ಬಗ್ಗೆ ವಸ್ತುಸ್ಥಿತಿ ತಿಳಿಸಲು ಪ್ರಧಾನಿಯವರ ಬಳಿಗೆ ಶೀಘ್ರ ನಿಯೋಗ ಕಳುಹಿಸಲಿದ್ದಾರೆ" ಎಂದರು.

"ಉಚಿತ ಬಸ್ ಪಾಸ್ ಗಳನ್ನು ಸರಿಯಾಗಿ ಹಂಚಿಕೆ ಮಾಡಲಾಗುತ್ತಿದೆಯೇ ಎಂದು ಶಾಸಕರು, ಜನಪ್ರತಿನಿಧಿಗಳು ಶಾಲೆಗಳಿಗೆ ತೆರಳಿ ಪರಿಶೀಲಿಸಬೇಕು‌. ಜನರ ಸಮಸ್ಯೆಗಳಿಗೆ ಎಐ ಆಧಾರಿತ ಏಕೀಕೃತ ಸಮಗ್ರ ದೂರು ಪರಿಹಾರ ವ್ಯವಸ್ಥೆ ಬಳಸಬೇಕು" ಎಂದರು.

ಪ್ರತಿ ಕ್ಷೇತ್ರದ ಬಿತ್ತನೆ ಬೀಜ, ಗೊಬ್ಬರ ದಾಸ್ತಾನು ಬಗ್ಗೆ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಿ

“ಅಧಿಕಾರಿಗಳು ಬರ ಪರಿಸ್ಥಿತಿ ಸೇರಿದಂತೆ ಇತರೇ ಅಂಕಿಅಂಶಗಳ ಬಗ್ಗೆ ಮಾಹಿತಿ ನೀಡಿದಾಗ ಅವರಿಗೆ ಸಿಎಂ ಅವರು ಖಡಕ್ ನಿರ್ದೇಶನಗಳನ್ನು ನೀಡಿದರು. ಈ ವಾರ ಮಳೆ ಇಲ್ಲದಿರಬಹುದು.‌ ಆದರೆ ಪ್ರಕೃತಿ ಕಣ್ಣು ಬಿಟ್ಟು ಮುಂದಿನ ದಿನಗಳಲ್ಲಿ ಮಳೆ ಬಂದರೆ ಆಗ ಯಾವುದೇ ತೊಂದರೆ ಆಗಬಾರದು. ಪ್ರತಿ ಕ್ಷೇತ್ರದ ಬಿತ್ತನೆ ಬೀಜ, ಗೊಬ್ಬರ ದಾಸ್ತಾನು ಬಗ್ಗೆ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಬೇಕು. ಏಕೆಂದರೆ ರೈತರು ಶಾಸಕರ ಮೇಲೆ ಗೊಬ್ಬರ, ಬಿತ್ತನೆ ಬೀಜಗಳಿಗೆ ಒತ್ತಡ ಹೇರುತ್ತಾ ಇರುತ್ತಾರೆ. ಇದರ ಬಗ್ಗೆ ಅವರಿಗೂ ಮಾಹಿತಿ ಇರಲೇಬೇಕು. ನಗರ ಪ್ರದೇಶದ ಶಾಸಕರು ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಅಲ್ಲಿ ವಿಶೇಷ ಗಮನಹರಿಸಲು ಸೂಚಿಸಿದ್ದು, ಇದಕ್ಕಾಗಿ ಜಿಲ್ಲಾಧಿಕಾರಿಗಳ ಬಳಿ ಹಣ ಇದೆ. ಅಗತ್ಯವಿದ್ದರೆ ಇನ್ನಷ್ಟು ಹಣ ನೀಡಲು ಸಿದ್ಧವಿದ್ದೇವೆ” ಎಂದು ಸೂಚಿಸಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ ಸಮರ್ಥನೆ

ಅರಣ್ಯ ಅಧಿಕಾರಿಗಳು ತೊಂದರೆ ನೀಡದಿರಿ

*ಕುಡಿಯುವ ನೀರಿನ ಪೈಪ್ ಅರಣ್ಯ ಪ್ರದೇಶದಲ್ಲಿ ಹೋಗುತ್ತಿದ್ದರೆ ಅದನ್ನು ಅಳವಡಿಸಲು ಯಾವುದೇ ಕಾರಣಕ್ಕೂ ತೊಂದರೆ ಕೊಡಬಾರದು. ಬರವಿದ್ದು ಈ ಸಮಯದಲ್ಲಿ ಸಹಕರಿಸಬೇಕು. ಈಗಾಗಲೇ ಇರುವ ಹಳೆಯ ರಸ್ತೆಗಳ ದುರಸ್ತಿಗೆ ತೊಡಕು ಉಂಟುಮಾಡಬಾರದು. ಬೋರ್ ವೆಲ್ ಕೊರೆಯುವುದಕ್ಕೂ ತೊಂದರೆ ಕೊಡಬಾರದು. ನಾನು ಹೇಳಿದ ಮೇಲೆ ಮುಗಿಯಿತು. ಎತ್ತಿನಹೊಳೆ ಸಮಯದಲ್ಲಿ ಅರಣ್ಯ ಇಲಾಖೆಯ ತೊಂದರೆಗಳನ್ನು ನಾನು ನೋಡಿದ್ದೇನೆ" ಎಂದು ಕಿಡಿಕಾರಿದರು.