ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಟಾರ್ಗೆಟ್‌ ಮಾಡಿದೆ ಎಂದ ಸಿಎಂ

CM Siddaramaiah: ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಕಾಂಗ್ರೆಸ್. ಅದನ್ನು ರಾಜ್ಯಸಭೆಯಲ್ಲಿ ಕೆಡವಿದವರು ಎನ್.ಡಿ. ಎ ಈಗ ರಾಜಕೀಯಕ್ಕಾಗಿ ಕ್ಷೇತ್ರ ಮರು ವಿಂಗಡಣೆ ಸೇರಿಸಿ ಮಸೂದೆ ಮಂಡಿಸಿದ್ದಾರೆ. ನಮ್ಮದು ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಚಾಮರಾಜನಗರ, ಏ.21: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಶಾಸಕ ಹ್ಯಾರೀಸ್ ಅವರ ಪುತ್ರ ನಲಪಾಡ್ ಮನೆ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ ಚಾಮರಾಜನಗರ ಗುಂಡ್ಲುಪೇಟೆಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಸಿಎಂ ಪ್ರತಿಕ್ರಿಯೆ ನೀಡಿದರು.

ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಬಾರಿ ಭೇಟಿ ನೀಡುತ್ತಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂದು ಪ್ರಾಸಂಗಿಕವಾಗಿ ಹೇಳಿದ್ದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಗ್ಯಾರಂಟಿಗಳು ಬಡವರ ಕಾರ್ಯಕ್ರಮಗಳೆಂದು ಗೊತ್ತಾಗಿದೆ

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದವರೇ ಅದನ್ನು ಘೋಷಣೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವಿರೋಧಿಸುತ್ತಿದ್ದವರಿಗೆ ಗ್ಯಾರಂಟಿಗಳು ಬಡವರ ಕಾರ್ಯಕ್ರಮಗಳೆಂದು ಗೊತ್ತಾಗಿದೆ ಎಂದರು.

ಎಲ್ಲರಿಗೂ ಪರಿಹಾರ ಕೊಡುತ್ತೇವೆ

ಸಿಎಂ ತಮ್ಮ ಕ್ಷೇತ್ರದಲ್ಲಿ ಮೃತಪಟ್ಟವರಿಗೆ ಮಾತ್ರ ಪರಿಹಾರ ನೀಡುತ್ತಿರುವ ಬಗ್ಗೆ ಜೆಡಿಎಸ್ ಶಾಸಕ ಶರಣಗೌಡ ಚಂದಾಪುರ ಪತ್ರ ಬರೆದಿರುವ ಬಗ್ಗೆ ಮಾತನಾಡಿ, ಎಲ್ಲರಿಗೂ ನೀಡಲಾಗುತ್ತಿದೆ, ನಮ್ಮ ಗಮನಕ್ಕೆ ಬಂದರೆ ಪರಿಹಾರ ನೀಡುತ್ತೇವೆ. ಶಾಸಕರು ಕೇಳಿದರೂ ಖಂಡಿತ ಕೊಡುತ್ತೇವೆ ಎಂದರು.

ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ

ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಕಾಂಗ್ರೆಸ್. ಅದನ್ನು ರಾಜ್ಯಸಭೆಯಲ್ಲಿ ಕೆಡವಿದವರು ಎನ್.ಡಿ. ಎ ಈಗ ರಾಜಕೀಯಕ್ಕಾಗಿ ಕ್ಷೇತ್ರ ಮರು ವಿಂಗಡಣೆ ಸೇರಿಸಿ ಮಸೂದೆ ಮಂಡಿಸಿದ್ದಾರೆ. ನಮ್ಮದು ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ ಎಂದರು.

ತೃತೀಯ ಭಾಷೆಗೆ ಅಂಕ:‌ ಕೋರ್ಟ್‌ ನಿರ್ದೇಶನ ಪಾಲಿಸಲಾಗುವುದು

ತೃತೀಯ ಭಾಷೆಗೆ ಹಿಂದಿನ ವರ್ಷಗಳಂತೆಯೇ ಮೌಲ್ಯಮಾಪನ ಮಾಡಿ ಅಂಕಗಳನ್ನು ನೀಡಬೇಕೆಂದು ಉಚ್ಚ ನ್ಯಾಯಾಲಯ ಹೇಳಿದ್ದು, ಮುಂದಿನ ತೀರ್ಮಾನ ಮಾಡಲು ಸೂಚಿಸಿದ್ದು, ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಲಾಗುವುದು ಎಂದರು. ಆಮ್ಲಜನಕ ದುರಂತದಲ್ಲಿ ತಪ್ಪಿತಸ್ಥರ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಅಲ್ಪಸಂಖ್ಯಾತರ ನಾಯಕರ ಉಪಸ್ಥಿತಿಯಲ್ಲಿ ತೀರ್ಮಾನವಾಗಿತ್ತು

ಅಲ್ಪಸಂಖ್ಯಾತರನ್ನು ಕಡೆಗಣಿಸುತ್ತಿರುವ ಬಗ್ಗೆ ಅಲ್ಪಸಂಖ್ಯಾತರು ಹೈಕಮಾಂಡ್ ಅವರಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ, ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುವಾಗ ಅಲ್ಪಸಂಖ್ಯಾತರ ನಾಯಕರು ಉಪಸ್ಥಿತರಿದ್ದರು. ಅವರೆದುರೇ ತೀರ್ಮಾನವಾಗಿತ್ತು, ನಂತರ ಅವರು ವಿರೋಧ ಮಾಡಿದರು ಎಂದರು.

ಹೊಸ ಜನಗಣತಿಯ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಗೆಲ್ಲಲಿದೆ

ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.