ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆಶಾ ಕಾರ್ಯಕರ್ತೆಯರಿಗೆ ಗೌರವಧನ 1,500 ರೂ. ಹೆಚ್ಚಿಸಲು ಕೇಂದ್ರ ಸರ್ಕಾರ ಸಿದ್ಧತೆ: ಸಂಸದ ಡಾ.ಸಿ.ಎನ್‌. ಮಂಜುನಾಥ್

Asha Workers Protest: ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಕುರಿತು ಬೆಳಗ್ಗೆಯಷ್ಟೇ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರ ಜತೆ ಮಾತನಾಡಿ, ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಲು ಸಲಹೆ ನೀಡಿದ್ದೇನೆ. ಗೌರವಧನ ಹೆಚ್ಚಳಕ್ಕೆ ಕೇಂದ್ರ ಸರ್ಕಾರದಿಂದ ಪ್ರಸ್ತಾವ ಸಿದ್ದಪಡಿಸಲಾಗಿದೆ ಎಂದು ಸಂಸದ ಡಾ.ಸಿ.ಎನ್‌.ಮಂಜುನಾಥ್ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಗೌರವಧನ 1,500 ಹೆಚ್ಚಿಸಲು ಕೇಂದ್ರ ಸರ್ಕಾರ ಸಿದ್ಧತೆ

-

Prabhakara R
Prabhakara R Nov 25, 2026 6:11 PM

ರಾಮನಗರ: ಆಶಾ ಕಾರ್ಯಕರ್ತೆಯರ (ASHA workers honorarium) ಗೌರವಧನವನ್ನು 1,500ರೂ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ಅವರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಗೌರವಧನ ಹೆಚ್ಚಳ ಕುರಿತು ಬೆಳಗ್ಗೆಯಷ್ಟೇ ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರ ಜತೆ ಮಾತನಾಡಿ, ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಲು ಸಲಹೆ ನೀಡಿದ್ದೇನೆ. ದೇಶದಾದ್ಯಂತ ಇರುವ ಕಾರ್ಯಕರ್ತೆಯರಿಗೆ 1,500 ರೂ. ಗೌರವಧನ ಹೆಚ್ಚಳಕ್ಕೆ ಪ್ರಸ್ತಾವ ಸಿದ್ದಪಡಿಸಲಾಗಿದೆ. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಇದನ್ನು ಮಂಡಿಸಿ ಗೌರವಧನ ಹೆಚ್ಚಳ ಮಾಡಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡಲೇಬೇಕು ಎಂದು ಒತ್ತಾಯಿಸಿದರು.

ಇನ್ನು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರತ್ಯೇಕ ರಾಜ್ಯದ ಚರ್ಚೆ ವಿಚಾರ ಕುರಿತು ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅನುದಾನ ಕೊಟ್ಟರೆ ಸಾಲದು. ಅದನ್ನು ಸರಿಯಾಗಿ ಬಳಸಿಕೊಂಡು ಜನಪರ ಯೋಜನೆಗಳಿಗೆ ಅನುಷ್ಠಾನ ಮಾಡುವುದು ಮುಖ್ಯ. ಅದು ಬಿಟ್ಟು ಪ್ರತ್ಯೇಕ ರಾಜ್ಯದ ಬೇಡಿಕೆ ಸರಿಯಲ್ಲ. ಇಡೀ ರಾಜ್ಯದ ಶೇ.40ರಷ್ಟು ಆದಾಯ ಬರುವುದು ಬೆಂಗಳೂರಿನಿಂದ. ಬೆಂಗಳೂರು ಪ್ರತ್ಯೇಕವಾದರೆ ಅಭಿವೃದ್ಧಿಗೆ ಎಲ್ಲಿಂದ ಹಣ ಬರುತ್ತದೆ? ಅಧಿಕಾರ ಇದ್ದಾಗ ಕೆಲಸ ಮಾಡಿದರೆ ಪ್ರತ್ಯೇಕತಾ ಭಾವನೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.