ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mylara Lingeshwara Karnika: ಶಾಸಕರ ಮನಸ್ಸು ಕದಲಿದರೆ ಸಿಎಂ ಬದಲಾವಣೆ ಖಚಿತ; ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ!

Mylara Lingeshwara Karnika: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ ಹೊರಬಿದ್ದಿದೆ. ಡಿ.ಕೆ. ಶಿವಕುಮಾರ್‌ಗೆ ಸಿಎಂ ಆಗುವ ಯೋಗ ಇದೆ ಎಂದು ಶ್ರೀ ವೆಂಕಪ್ಪಯ್ಯ ಮೈಲಾರದ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ; ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ!

Profile Prabhakara R Jul 12, 2025 4:05 PM

ವಿಜಯನಗರ: ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಸುದ್ದಿಗಳು ಹರಿದಾಡುತ್ತಿದೆ. ಈ ನಡುವೆ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ (Mylara Lingeshwara Karnika) ಹೊರಬಿದ್ದಿದ್ದು, ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ಗೊವಯ್ಯ ಕಾರ್ಣಿಕ ನುಡಿದಿದ್ದಾರೆ.

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ ಹೊರಬಿದ್ದಿದೆ. ಡಿ.ಕೆ. ಶಿವಕುಮಾರ್‌ಗೆ ಸಿಎಂ ಆಗುವ ಯೋಗ ಇದೆ ಎಂದು ಶ್ರೀ ವೆಂಕಪ್ಪಯ್ಯ ಮೈಲಾರದ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ.

2025ರ ಪ್ರಸಕ್ತ ವರ್ಷದ ದೈವವಾಣಿ ತುಂಬಿದ ಕೊಡ ತುಳಿಕಿತಲೇ ಪರಾಕ್ ಎಂಬುದಾಗಿದೆ. ರಾಜ್ಯದಲ್ಲಿ ತುಂಬಿದ ಕೊಡಪಾನದಂತೆ ಈಗ ಸರ್ಕಾರ ಇದೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದರೇ ಯಾವುದೇ ತೊಂದರೆ ಆಗಲ್ಲ. ಮನಸ್ಸು ಕದಲಿದರೇ ಸರ್ಕಾರಕ್ಕೆ ಅಪಾಯವಿದೆ ಎಂಬುದಾಗಿ ಕಾರ್ಣಿಕ ಭವಿಷ್ಯವನ್ನು ವಿಶ್ಲೇಷಿಸಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವೆಂಕಪ್ಪಯ್ಯ ಒಡೆಯ‌ರ್ ತಿಳಿಸಿದ್ದಾರೆ.

2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲೇ ವಿಧಾನಸಭೆ ಚುನಾವಣೆ: ಸತೀಶ್ ಜಾರಕಿಹೊಳಿ

Satish Jarkiholi

ಬೆಂಗಳೂರು : 2028ಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆ (2028 elections) ನಡೆಯಲಿದೆ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಹೇಳಿಕೆ ನೀಡಿದ್ದಾರೆ. ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, ನಾನೇ ಐದು ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿ ಆಗಿರುತ್ತೇನೆ. ಅಲ್ಲದೆ 2028ರಲ್ಲಿ ವಿಧಾನಸಭೆ ಚುನಾವಣೆಯೂ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದಿದ್ದರು. ಇದೀಗ ಸತೀಶ್ ಜಾರಕಿಹೊಳಿ ಕೂಡ 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಂದಿನ ಬಾರಿಯೂ ಅವರೇ ಸಿಎಂ ಆಗುತ್ತಾರೆ ಅಂತ ನಾನು ಹೇಳಲ್ಲ. ಆದರೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ. 2028ರ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಮುಗೀತು, ಆ ಕುರಿತು ಮತ್ತೆ ಚರ್ಚೆ ಮಾಡುವಂತಿಲ್ಲ ಎಂದು ಹೇಳಿದರು.

ನಾಯತ್ವ ಬದಲಾವಣೆ ಬಗ್ಗೆ ಹೆಚ್ಚು ಮಂದಿ ಮಾತನಾಡಿಲ್ಲ. ಶೇ.10 ರಷ್ಟು ಜನ ಮಾತನಾಡಿದ್ದಾರೆ. ಸುರ್ಜೇವಾಲಾ ಅವರೊಂದಿಗೂ ಯಾರೂ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಎಲ್ಲರೂ ಅನುದಾನ, ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ಶೇ.10ರಷ್ಟು ಮಂದಿ ಅಭಿಪ್ರಾಯ ವ್ಯಕ್ತಪಡಿಸಿರಬಹುದು. ಅವರೆಲ್ಲರಿಗೂ ಸಿದ್ದರಾಮಯ್ಯ ಹೇಳಿಕೆಯಿಂದ ಕ್ಲಿಯರ್‌ ಸಂದೇಶ ನೀಡಿದಂತಾಗಿದೆ. ಸಿದ್ದರಾಮಯ್ಯ ಸಂದೇಶದಿಂದ ಮ್ಯಾಚ್ ಕ್ಲೋಸ್‌ ಎಂದರ್ಥ ಎಂದು ಹೇಳಿದರು.

ಇದನ್ನೂ ಓದಿ: CM Siddaramaiah: ʼʼಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ; ಡಿಕೆಶಿ ಕೂಡ ಇದನ್ನೇ ಹೇಳಿದ್ದಾರೆʼʼ: ಸಿದ್ದರಾಮಯ್ಯ ಸ್ಪಷ್ಟನೆ