ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

PC Exam Dress code: ನಾಳೆ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಧಾರ್ಮಿಕ ಉಡುಪುಗಳಿಗೆ ನಿರ್ಬಂಧವಿಲ್ಲ ಎಂದು ಗೃಹಸಚಿವ ಸ್ಪಷ್ಟನೆ

Priyank Kharge: ಪರೀಕ್ಷಾ ಕೇಂದ್ರಕ್ಕೆ ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಸಂಪೂರ್ಣ ಪಟ್ಟಿಯನ್ನು ಈಗಾಗಲೇ ಅಭ್ಯರ್ಥಿಗಳ ಹಾಲ್ ಟಿಕೆಟ್‌ನಲ್ಲಿ ವಿವರವಾಗಿ ನೀಡಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸಲು ಕೋರಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಧಾರ್ಮಿಕ ಉಡುಪುಗಳಿಗೆ ನಿರ್ಬಂಧವಿಲ್ಲ

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ. -

Prabhakara R
Prabhakara R Aug 1, 2026 4:05 PM

ಬೆಂಗಳೂರು: ರಾಜ್ಯದಲ್ಲಿ ನಾಳೆ (ಆ.2) ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಧಾರ್ಮಿಕ ವಸ್ತ್ರಕ್ಕೆ ನಿರ್ಬಂಧವಿಲ್ಲಾ ಎಂದು ಗೃಹ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಪಾರದರ್ಶಕತೆಯೇ ನಮ್ಮ ಬದ್ಧತೆಯಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಧಾರ್ಮಿಕ ವಸ್ತ್ರಕ್ಕೆ ನಿರ್ಬಂಧ ಇಲ್ಲ. ವಿದ್ಯಾರ್ಥಿಗಳ ಭವಿಷ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ, ಈ ಬಾರಿಯ ಪರೀಕ್ಷಾ ಆಯೋಜನೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಮರೋಪಾದಿಯಲ್ಲಿ ಸಿದ್ಧತೆ ನಡೆಸಿದೆ ಎಂದು ತಿಳಿಸಿದ್ದಾರೆ.



ಪರೀಕ್ಷಾ ಕೇಂದ್ರಕ್ಕೆ ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಸಂಪೂರ್ಣ ಪಟ್ಟಿಯನ್ನು ಈಗಾಗಲೇ ಅಭ್ಯರ್ಥಿಗಳ ಹಾಲ್ ಟಿಕೆಟ್‌ನಲ್ಲಿ ವಿವರವಾಗಿ ನೀಡಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸಿಲು ಕೋರಿದೆ.

ಧಾರ್ಮಿಕ ಉಡುಪು ಧರಿಸಿ ಪರೀಕ್ಷೆ ಬರೆಯಲು ಅಪೇಕ್ಷಿಸುವವರು, ಪರೀಕ್ಷೆ ಆರಂಭಕ್ಕೆ 2:30 ಗಂಟೆ ಮೊದಲು ಕೇಂದ್ರದಲ್ಲಿ ಹಾಜರಿದ್ದು ತಪಾಸಣೆಗೆ ಒಳಪಟ್ಟು ಪರೀಕ್ಷೆ ಬರಯಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ಗೊಂದಲಕ್ಕೆ ಒಳಗಾಗದೇ, ಆತ್ಮವಿಶ್ವಾಸದಿಂದ ಉದ್ಯೋಗಾಕಾಂಕ್ಷಿಗಳು ಯಶಸ್ವಿಯಾಗಿ ಪರೀಕ್ಷೆಯನ್ನು ಎದುರಿಸುವಂತೆ ಕೋರುತ್ತೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ವಸ್ತ್ರ ಸಂಹಿತೆ

ಪರೀಕ್ಷಾರ್ಥಿಗಳು ಧರಿಸಲು ಅನುಮತಿ ಇರುವ ವಸ್ತುಗಳು

ಜನಿವಾರ, ಶಿವಧಾರ / ಲಿಂಗ, ಸೊಂಟದ ದಾರ, ತಾಯತ, ರುದ್ರಾಕ್ಷಿ, ಮಾಂಗಲ್ಯ ಸರ, ಕೈಬಳೆಗಳು, ಮೂಗುತಿ, ಕಾಲುಂಗುರ, ಕಾಲುಗೆಜ್ಜೆ, ಕುಂಕುಮ / ಹಣೆಬೊಟ್ಟು, ಉಂಗುರ, ಕೈಗೆ ಕಟ್ಟುವ ಧಾರ್ಮಿಕ ಕ್ಷೇತ್ರದ ದಾರಗಳು ಹೊಂದಲು ಅವಕಾಶವಿದೆ.

ಧಾರ್ಮಿಕ ಉಡುಪು ಧರಿಸಿ ಪರೀಕ್ಷೆ ಬರೆಯಲು ಬಯಸಿದರೆ, ಪರೀಕ್ಷೆ ಆರಂಭವಾಗುವ 2:30 ಗಂಟೆಗಳ ಮೊದಲು ಪರೀಕ್ಷಾ ಕೇಂದ್ರದ ವಸ್ತ್ರ ಸಂಹಿತೆ ಅಧಿಕಾರಿಯ ಮುಂದೆ ಹಾಜರಾಗಬೇಕು.

ಪರೀಕ್ಷಾ ಕೇಂದ್ರದೊಳಗೆ ಅನುಮತಿ ಇಲ್ಲದ ವಸ್ತುಗಳು

ಎಲೆಕ್ಟ್ರಾನಿಕ್ ವಸ್ತುಗಳು: ಮೊಬೈಲ್ ಫೋನ್, ಇಯರ್‌ಫೋನ್‌ಗಳು/ಮೈಕ್ರೋಫೋನ್, ಪೇಜರ್,ಮೈಕ್ರೋಚಿಪ್, ಕ್ಯಾಮೆರಾ, ಪೆನ್ ಡ್ರೈವ್, ಎಲೆಕ್ಟ್ರಾನಿಕ್ ಪೆನ್, ಸ್ಕ್ಯಾನ‌ರ್, ಕೈಗಡಿಯಾರ/ಸ್ಮಾರ್ಟ್ ವಾಚ್.

ಪಠ್ಯ ಸಾಮಗ್ರಿಗಳು: ಬರೆದಿರುವ ಅಥವಾ ಮುದ್ರಿತ ಚೀಟಿಗಳು ಪುಸ್ತಕಗಳು, ಜ್ಯಾಮಿಟ್ರಿ ಬಾಕ್ಸ್/ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್/ಸ್ಕೇಲ್‌, LOG TABLE, ಎರೇಸರ್, ಆಹಾರ, ನೀರು, ಪಾನೀಯ ಬಾಟಲ್‌ಗಳು. ಶೂಗಳು, ಬೂಟುಗಳು, ಕ್ಯಾಪ್/ ಮುಖವನ್ನು ಮುಚ್ಚುವ ಯಾವುದೇ ಉಡುಪು, ಬ್ಯಾಗ್/ ಪರ್ಸ್ /ಹೆಚ್ಚು ಪಾಕೆಟ್‌ಗಳಿರುವ ಜೀನ್ಸ್ ಪ್ಯಾಂಟ್.