ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

SSLC exam: ಹಿಂದಿ ಭಾಷೆ ಕಲಿಕೆಗೆ ವಿರೋಧವಿಲ್ಲ, ಆದರೆ ಪರೀಕ್ಷೆ ಕಡ್ಡಾಯ ಆಗಬಾರದು ಎಂದ ಸಿಎಂ

Third Language In SSLC Exam: ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ತೃತೀಯ ಭಾಷೆ ಹಿಂದಿ ವಿಷಯವನ್ನು ಕಡ್ಡಾಯ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ. ಈ ನಿಯಮ ಈ ವರ್ಷದಿಂದಲೇ ಜಾರಿಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹಿಂದಿ ಕಲಿಕೆಗೆ ವಿರೋಧವಿಲ್ಲ, ಆದರೆ ಪರೀಕ್ಷೆ ಕಡ್ಡಾಯ ಆಗಬಾರದು: ಸಿಎಂ

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -

Prabhakara R
Prabhakara R Mar 28, 2026 7:46 PM

ಮೈಸೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯದ ಅಂಕಗಳು ಪರಿಗಣಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಹಿಂದಿ ಭಾಷೆ ಕಲಿಕೆಗೆ ನಮ್ಮ ವಿರೋಧವಿಲ್ಲ, ಆದರೆ ಪರೀಕ್ಷೆ ಕಡ್ಡಾಯವಾಗಬಾರದು ಎಂಬುವುದು ನಮ್ಮ ಅಭಿಪ್ರಾಯ. ಹೀಗಾಗಿ ತೃತೀಯ ಭಾಷೆ ಹಿಂದಿ ವಿಷಯವನ್ನು ಕಡ್ಡಾಯ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ ಎಂದು ತಿಳಿಸಿದ್ದಾರೆ.

ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತೃತೀಯ ಭಾಷೆ ಹಿಂದಿ ವಿಷಯವನ್ನು ಕಡ್ಡಾಯ ಮಾಡಬಾರದು ಎಂದು ತೀರ್ಮಾನಿಸಿದ್ದೇವೆ. ಈ ನಿಯಮ ಈ ವರ್ಷದಿಂದಲೇ ಜಾರಿಯಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಸರ್ಕಾರ ತೀರ್ಮಾನವನ್ನು ವಿರೋಧ ಮಾಡುವವರೂ ಇರುತ್ತಾರೆ. ಬೆಂಬಲ ಮಾಡುವರೂ ಇರುತ್ತಾರೆ. ಹಿಂದಿ ಭಾಷೆ ಕಲಿಕೆಗೆ ನಮ್ಮ ವಿರೋಧವಿಲ್ಲ, ಆದರೆ ಪರೀಕ್ಷೆ ಕಡ್ಡಾಯವಾಗಬಾರದು ಎಂಬುವುದು ನಮ್ಮ ಅಭಿಪ್ರಾಯ. ನಮ್ಮ ಕಾಲದಲ್ಲೂ ಹಿಂದಿ ಕಡ್ಡಾಯ ಇರಲಿಲ್ಲ. ಹೀಗಾಗಿ ನಾವು ಓದಕ್ಕೇ ಹೋಗಲಿಲ್ಲ ಎಂದು ತಿಳಿಸಿದ್ದಾರೆ.

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಈ ವರ್ಷದಿಂದ ಹಿಂದಿ ಭಾಷೆ ಅಂಕಗಳಿಗೆ ಕೊಕ್‌!

ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕರವೇ ನಾರಾಯಣಗೌಡ ಅಭಿನಂದನೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಅಂಕಗಳನ್ನು ಪರಿಗಣಿಸದಿರಲು ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶ್ರೀ ಟಿ.ಎ. ನಾರಾಯಣಗೌಡರು ಅಭಿನಂದನೆ ಸಲ್ಲಿಸಿದ್ದಾರೆ.

​ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೃತೀಯ ಭಾಷೆಯಾದ ಹಿಂದಿ ಸೇರಿದಂತೆ ಉಳಿದೆಲ್ಲ ಭಾಷೆಗಳನ್ನು ಕೇವಲ ಗ್ರೇಡಿಂಗ್ (Grading) ವ್ಯವಸ್ಥೆಗೆ ಒಳಪಡಿಸುವ ನಮ್ಮ ಸರ್ಕಾರದ ಐತಿಹಾಸಿಕ ತೀರ್ಮಾನಕ್ಕೆ ನಾಡಿನಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರು ಹಾಗೂ ಅವರ ನಿಯೋಗವು ತಮ್ಮನ್ನು ಭೇಟಿ ಮಾಡಿ, ಈ ನಿರ್ಧಾರವನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಕನ್ನಡದ ಅಸ್ಮಿತೆ ಮತ್ತು ವಿದ್ಯಾರ್ಥಿಗಳ ಹಿತರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.