ಬೆಂಗಳೂರು: ಬಿಹಾರ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹೀಗಿರುವಾಗ ರಾಜ್ಯದಲ್ಲಿರುವ ಬಿಹಾರ ಮೂಲದ ಮತದಾರರಿಗೆ(DK Shivakumar) ಮತದಾನಕ್ಕಾಗಿ ಮೂರು ದಿನಗಳ ರಜೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಬ್ಯಾಟರಾಯನಪುರದ ಕಾಫಿ ಬೋರ್ಡ್ ಲೇಔಟ್ ನಲ್ಲಿ ಬಿಹಾರ ಮೂಲದ ಬೆಂಗಳೂರು ನಿವಾಸಿಗಳ ಸಂಘದ ಸದಸ್ಯರನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು, ಬಿಹಾರದ ಅಭಿವೃದ್ಧಿಗಾಗಿ ಮಹಾಘಟಬಂಧನ್ ಗೆ ಮತ ನೀಡಿ ಹಾಗೂ ನಿಮ್ಮ ಸಂಬಂಧಿಕರಿಗೂ ನಮಗೆ ಮತ ನೀಡುವಂತೆ ತಿಳಿಸಿ. ನಿಮ್ಮ ರಾಜ್ಯದ ಅಭಿವೃದ್ಧಿಗಾಗಿ ಮತ ಚಲಾವಣೆ ಮಾಡಬೇಕು. ಮತವನ್ನು ವ್ಯರ್ಥ ಮಾಡಬಾರದು ಎಂದು ಮನವಿ ಮಾಡಿದರು.
ನನಗೆ ದೊಡ್ಡ ಸ್ಥಾನ ಬೇಕು ಎಂದು ನೀವೆಲ್ಲರೂ ಹೇಳಿದ್ದೀರಿ. ನನಗೆ ಅದು ಮುಖ್ಯವಲ್ಲ. ಬಿಹಾರದಲ್ಲಿ ಮಹಾಘಟ ಬಂಧನ ಅಧಿಕಾರಕ್ಕೆ ತಂದರೆ ನನಗೆ ಎಲ್ಲಾ ಸ್ಥಾನವನ್ನು ನೀವು ಕೊಟ್ಟಂತೆ. ನಿಮ್ಮ ಒಂದೊಂದು ಮತವೂ ಮಹಾಘಟಬಂದನ್ ಅಧಿಕಾರಕ್ಕೆ ಬರಲು ಮುಖ್ಯವಾದುದು. ಈ ಮೊದಲಿನಂತೆ ನಿತೀಶ್ ಕುಮಾರ್ ಅವರ ಕೈಯಲ್ಲಿ ಬಿಹಾರವಿಲ್ಲ. ಅವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಬಿಹಾರದ ಅಭಿವೃದ್ಧಿಗೆ ಲಾಲುಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ರಾಹುಲ್ ಗಾಂಧಿಯವರು ಘೋಷಣೆ ಮಾಡಿದ್ದಾರೆ. ರಾಹುಲ್ ಗಾಂಧಿಯವರನ್ನು ಈ ದೇಶದ ಪ್ರಧಾನಿಯಾಗಿ ಮಾಡಬೇಕು. ನೆಹರು ಅವರ ಕುಟುಂಬ ಈ ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿದೆ. ಈ ಕಾರಣಕ್ಕೆ ಅವರಿಗೆ ನೀವು ಶಕ್ತಿ ನೀಡಬೇಕು. ತೇಜಸ್ವಿ ಯಾದವ್ ಅವರನ್ನ ಬೆಂಬಲಿಸಬೇಕು ಎಂದರು.
ಈ ಸುದ್ದಿಯನ್ನೂ ಓದಿ: Kannada Rajyotsava: ಈ ತಿಂಗಳು ಪೂರ್ತಿ ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಧ್ವಜ ಹಾರಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ: ಡಿಕೆಶಿ
ಮತದಾನಕ್ಕೆ ತೆರಳುವವರಿಗೆ ಮೂರು ದಿನ ರಜೆ
ಬಿಹಾರದಲ್ಲಿ ಲಕ್ಷಾಂತರ ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಕಿತ್ತು ಹಾಕಲಾಗಿದೆ. ನಿಮ್ಮ ಊರಿನಲ್ಲಿರುವವರ ಬದುಕನ್ನು ಉಳಿಸಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ನೀವುಗಳು ಇಲ್ಲಿ ಬದುಕು ಕಟ್ಟಿಕೊಂಡಿರಬಹುದು. ಆದರೆ ನಿಮ್ಮ ಮತಗಳು ಅಲ್ಲಿರಬಹುದು. ಅಥವಾ ನಿಮ್ಮ ಸಂಬಂಧಿಕರು ಅಲ್ಲಿರಬಹುದು. ಅವರಿಗೆ ಮತದಾನ ಮಾಡಲು ನೀವು ತಿಳಿಸಿ. ನೀವುಗಳು ಸಹ ಮತದಾನ ಮಾಡಲು ಊರಿಗೆ ತೆರಳಿ. ನಿಮಗೆಲ್ಲರಿಗು ಮೂರು ದಿನ ರಜೆ ನೀಡುವಂತೆ ನೀವುಗಳು ಕೆಲಸ ನಿರ್ವಹಿಸುವ ಸಂಸ್ಥೆಗಳು, ಗುತ್ತಿಗೆದಾರರಿಗೆ ಹಾಗೂ ಕ್ರೆಡಾಯ್ ಸಂಸ್ಥೆಗೆ ಸೂಚಿಸುತ್ತೇನೆ” ಎಂದರು.
ನಾವು ಬಿಹಾರಿಗಳಲ್ಲ, ಕನ್ನಡದ ಬಿಹಾರಿಗಳು ಎಂದ ಸಭಿಕರು
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕನ್ನಡದಲ್ಲಿ ಮಾಡಿದ ಭಾಷಣವನ್ನು ಬಿಹಾರಿ ಭಾಷೆಗೆ ತರ್ಜುಮೆ ಮಾಡಲು ಹೋದಾಗ ನಾವು ಬಿಹಾರಿಗಳಲ್ಲ, ಕನ್ನಡದ ಬಿಹಾರಿಗಳು ಎಂದು ಸಭಿಕರು ಹೇಳಿದರು. 1 ನೇ ತಾರೀಕು ರಾಜ್ಯೋತ್ಸವ ಆಚರಿಸಿದ್ದೇವೆ. ನೀವು ಕನ್ನಡ ಕಲಿತಿರುವುದು ನೋಡಿದರೆ ಸಂತಸವಾಗುತ್ತಿದೆ ಎಂದು ಶಿವಕುಮಾರ್ ಅವರು ಹೇಳಿದರು.
ಬಿಹಾರದವರು ಇಲ್ಲದಿದ್ದರೆ ಬೆಂಗಳೂರಿನಲ್ಲಿ ಅತ್ಯುತ್ತಮ ಕಟ್ಟಡಗಳನ್ನು ನಿರ್ಮಾಣ ಮಾಡಲು ಸಾಧ್ಯವಿರುತ್ತಿರಲಿಲ್ಲ. ನೀವು ಶ್ರಮಜೀವಿಗಳು. ಮರಗೆಲಸ, ಎಲೆಕ್ಟ್ರಿಕಲ್ ಕೆಲಸಗಳು, ವಿನ್ಯಾಸದ ಕೆಲಸಗಳು ಸೇರಿದಂತೆ ಯಾವುದೇ ಕೆಲಸ ನೀಡಿದರು ಅತ್ಯಂತ ಶ್ರದ್ಧೆಯಿಂದ ನಿರ್ವಹಣೆ ಮಾಡುವವರು. ನಿಮ್ಮ ಸಂಘದ ಸಮುದಾಯ ಭವನಕ್ಕೆ ನಿವೇಶನ ನೀಡಲಾಗುವುದು ಎಂದು ತಿಳಿಸಿದರು.