ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಉಕ್ಕು ವಲಯದ ಬೆಳವಣಿಗೆ, ಹೊಸ ಹೂಡಿಕೆಗಳ ಬಗ್ಗೆ ವಿತ್ತ ಸಚಿವೆಯೊಂದಿಗೆ ಎಚ್‌.ಡಿ. ಕುಮಾರಸ್ವಾಮಿ ಚರ್ಚೆ

HD Kumaraswamy: ಉಕ್ಕು ಸಚಿವಾಲಯದ ಹೊಸ ಹೂಡಿಕೆಗಳು ಮತ್ತು ಈಗಾಗಲೇ ನಡೆಯುತ್ತಿರುವ ಯೋಜನೆಗಳ ಬಗ್ಗೆ ಹಾಗೂ ಉಕ್ಕು ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಉಕ್ಕು ವಲಯದ ಬೆಳವಣಿಗೆ ಬಗ್ಗೆ ವಿತ್ತ ಸಚಿವೆ ಜತೆ ಕುಮಾರಸ್ವಾಮಿ ಚರ್ಚೆ

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ ಎಚ್‌.ಡಿ. ಕುಮಾರಸ್ವಾಮಿ. -

Profile
Siddalinga Swamy Feb 4, 2026 8:09 PM

ನವದೆಹಲಿ, ಜ.4: ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು. ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಂಸತ್ತಿನಲ್ಲಿ ಕೇಂದ್ರದ ಹಣಕಾಸು ಸಚಿವರ ಕಚೇರಿಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಎಚ್‌.ಡಿ. ಕುಮಾರಸ್ವಾಮಿ ಅವರು, ಪ್ರಮುಖ ಅಭಿವೃದ್ಧಿ ಆದ್ಯತೆಗಳ ಕುರಿತು ವಿವರವಾದ ಚರ್ಚೆಗಳನ್ನು ನಡೆಸಿದರು.

ಉಕ್ಕು ಸಚಿವಾಲಯದ ಹೊಸ ಹೂಡಿಕೆಗಳು ಮತ್ತು ಈಗಾಗಲೇ ನಡೆಯುತ್ತಿರುವ ಯೋಜನೆಗಳ ಬಗ್ಗೆ ಹಾಗೂ ಉಕ್ಕು ವಲಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಚಿವರ ಜತೆ ಸಮಾಲೋಚನೆ ನಡೆಸಲಾಯಿತು ಎಂದು ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸುವ ಮತ್ತು ವಿಕಸಿತ ಭಾರತ-2047 ದೃಷ್ಟಿಕೋನವನ್ನು ಮುನ್ನಡೆಸುವ ಭವಿಷ್ಯತ್ತಿನ ಕೇಂದ್ರದ ಆಯವ್ಯಯವನ್ನು ಮಂಡಿಸಿದ್ದಕ್ಕಾಗಿ ಹಣಕಾಸು ಸಚಿವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ತಂಬಾಕು ಮೇಲಿನ ಶೇ.18 ಅಬಕಾರಿ ಸುಂಕ ಹಿಂದಕ್ಕೆ; ಎಚ್.ಡಿ. ಕುಮಾರಸ್ವಾಮಿ ಮನವಿಗೆ ವಿತ್ತ ಸಚಿವೆ ಸ್ಪಂದನೆ

ನವದೆಹಲಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ (HD Kumaraswamy) ಪ್ರಯತ್ನದ ಫಲವಾಗಿ ಎಫ್‌ಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ದೂರವೇ ಉಳಿದಿದ್ದರು. ಇದರಿಂದ ಬೆಳೆದ ಬೆಳೆ ಮಾರಾಟವಾಗದೆ ರಾಜ್ಯದ ಹುಣಸೂರು, ಪಿರಿಯಾಪಟ್ಟಣ, ಎಚ್.ಡಿ. ಕೋಟೆ, ಅರಕಲಗೂಡು ಸೇರಿದಂತೆ ವಿವಿಧ ಭಾಗಗಳಲ್ಲಿನ ತಂಬಾಕು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು.

ಬೆಳೆಗಾರರು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ಸಂಕಷ್ಟ ತೋಡಿಕೊಂಡಿದ್ದರು. ಈ ಸಂಬಂಧ ಸಚಿವರು ಬೆಂಗಳೂರಿನ ತಂಬಾಕು ಮಂಡಳಿ ವ್ಯವಸ್ಥಾಪಕ ನಿರ್ದೇಶಕರು ಮತ್ತು ವಿಶಾಖಪಟ್ಟಣ ವಿಭಾಗದ ಕೇಂದ್ರೀಯ ಅಬಕಾರಿ ಮತ್ತು ಜಿಎಸ್ಟಿ ಮುಖ್ಯ ಆಯುಕ್ತರ ಜತೆ ನಡೆಸಲಾಗಿದ್ದ ಪತ್ರ ವ್ಯವಹಾರಗಳ ಕುರಿತ ಎಲ್ಲಾ ಮಾಹಿತಿಯನ್ನೂ ಪಡೆದುಕೊಂಡಿದ್ದರು.

ನಂತರ ಸಚಿವರು ಈ ವಿಷಯವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಗಮನಕ್ಕೆ ತಂದು, ತಂಬಾಕು ಮೇಲಿನ ಅಬಕಾರಿ ಸುಂಕವನ್ನು ರದ್ದು ಮಾಡಬೇಕು ಎಂದು ವಿನಂತಿಸಿದ್ದರು. ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿರುವ ವಿತ್ತ ಸಚಿವರು, ತಂಬಾಕು ಮೇಲಿನ ಅಬಕಾರಿ ಸುಂಕ ವಿನಾಯಿತಿ ನಿರ್ಧಾರವನ್ನು ಕೈಗೊಂಡಿದ್ದಾರೆ.

ಈ ಸಂಬಂಧ ಫೆಬ್ರವರಿ 1ರಂದು ಆದೇಶ ಹೊರಡಿಸಿರುವ ತಂಬಾಕು ಮಂಡಳಿಯು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಬಕಾರಿ ಸುಂಕವನ್ನು ಹಿಂಪಡೆಯಲಾಗಿದೆ ಹಾಗೂ ಫೆಬ್ರವರಿ 5ರಿಂದಲೇ ಹರಾಜು ಪ್ರಕ್ರಿಯೆ ಆರಂಭ ಮಾಡುವಂತೆ ನಿರ್ದೇಶನ ನೀಡಿದೆ.

ಏನಿದರ ಹಿನ್ನೆಲೆ?

ತಂಬಾಕು ಮೇಲೆ ಅಬಕಾರಿ ಸುಂಕ ಮತ್ತು ಜಿಎಸ್‌ಟಿ ದರ ಏರಿಕೆ ವಿರೋಧಿಸಿ ತಂಬಾಕು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರಲು ಖರೀದಿ ಕಂಪನಿಗಳು ನಿರ್ಧರಿಸಿದ್ದವು. ಇದರಿಂದ ಹರಾಜು ಪ್ರಕ್ರಿಯೆ ಸ್ಥಗಿತಗೊಂಡು ಮಾರುಕಟ್ಟೆ ಬಂದ್ ಆಗಿದ್ದವು. ರೈತರು ತೀವ್ರ ಸಂಕಷ್ಟಕ್ಕೆ ತುತ್ತಾಗಿದ್ದರು.

ಖರೀದಿ ಕಂಪನಿಗಳು ತಮ್ಮ ಮೇಲೆ ವಿಧಿಸಿರುವ ಅನುತ್ಪಾದಕ ತಂಬಾಕಿಗೆ ಅಬಕಾರಿ ಸುಂಕ ಹಾಗೂ ತಂಬಾಕು ಉತ್ಪನ್ನಗಳಿಗೆ ಜಿಎಸ್‌ಟಿ ಏರಿಕೆಯ ಹಿನ್ನಲೆಯಲ್ಲಿ ತಂಬಾಕು ಖರೀದಿ ಕಂಪನಿಗಳು ತಾತ್ಕಾಲಿಕವಾಗಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿವೆ. ಇದರಿಂದಾಗಿ ಮಾರುಕಟ್ಟೆ ಬಂದ್ ಆಗಿದ್ದು, ರೈತರು ಕಷ್ಟಪಟ್ಟು ಬೆಳೆದ ತಂಬಾಕು ಒಣಗುತ್ತಿದೆ. ದಿನದಿನಕ್ಕೂ ಬೆಲೆ ಇಳಿಮುಖವಾಗುತ್ತದೆ. ಈ ನಡುವೆ ಹರಾಜು ಪ್ರಕ್ರಿಯೆಯಲ್ಲಿ ತಾತ್ಕಾಲಿಕವಾಗಿ ಭಾಗವಹಿಸುವುದಿಲ್ಲವೆಂದು ಖರೀದಿದಾರರು ಘೋಷಿಸಿದ್ದರು. ಬೆಳೆಗಾರರು ತೊಂದರೆ ಅನುಭವಿಸಬಾರದು ಎನ್ನುವ ಕಾರಣಕ್ಕೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮಧ್ಯ ಪ್ರವೇಶಿದರು.

ಅಬಕಾರಿ ಸಚಿವರ ರಾಜೀನಾಮೆ ಪಡೆದು ಭ್ರಷ್ಟಾಚಾರದ ತನಿಖೆ ನಡೆಸಿ: ವಿಜಯೇಂದ್ರ ಒತ್ತಾಯ

image

ನನ್ನ ಮನವಿಗೆ ಸ್ಪಂದಿಸಿದ ವಿತ್ತ ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಹರಾಜು ಪ್ರಕ್ರಿಯೆ ಆರಂಭವಾಗಿ ತಂಬಾಕು ಬೆಳೆಗಾರರಿಗೆ ಅನುಕೂಲ ಆಗುತ್ತಿರುವುದು ಸಂತೋಷದ ಸಂಗತಿ. ನರೇಂದ್ರ ಮೋದಿ ಅವರ ಸರ್ಕಾರ ಸದಾ ರೈತಪರ ಎನ್ನುವುದಕ್ಕೆ ಈ ಕ್ರಮವು ಉತ್ತಮ ಉದಾಹರಣೆ ಆಗಿದೆ.

ಎಚ್.ಡಿ. ಕುಮಾರಸ್ವಾಮಿ, ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು