ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʼಎಲ್ ನಿನೋ' ಪರಿಣಾಮ ಎದುರಿಸಲು ಕೇಂದ್ರ ಸಜ್ಜು; ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಪ್ರಲ್ಹಾದ್‌ ಜೋಶಿ

Pralhad Joshi: ದೇಶಾದ್ಯಂತ ಕೃಷಿ, ಆಹಾರ ಲಭ್ಯತೆ ಮತ್ತು ಬೆಲೆ ಸ್ಥಿರತೆ ಮೇಲಾಗುವ ಎಲ್ ನಿನೊ ಸಂಭಾವ್ಯ ಪರಿಣಾಮದ ಕುರಿತು ಪರಿಶೀಲನೆ ನಡೆಸಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಅಧ್ಯಕ್ಷತೆಯಲ್ಲಿ ಆಹಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ಜರುಗಿತು.

ನವದೆಹಲಿ, ಜು.13: ದೇಶದಲ್ಲಿ ಕೃಷಿ, ಆಹಾರ ಧಾನ್ಯ ಮತ್ತು ಬೆಲೆ ಸ್ಥಿರತೆ ಮೇಲೆ ಎಲ್ ನಿನೋ ಪರಿಣಾಮ ಎದುರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೋಮವಾರ ಮಹತ್ವದ ಸಭೆ ನಡೆಸಿತು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರ ಅಧ್ಯಕ್ಷತೆಯಲ್ಲಿ ನಡೆದ ಆಹಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಎಲ್ ನಿನೋ ಪರಿಣಾಮ ಬಗ್ಗೆ ಗಂಭೀರ ಚರ್ಚೆ ನಡೆಸಲಾಯಿತು.

ದೇಶಾದ್ಯಂತ ಕೃಷಿ, ಆಹಾರ ಲಭ್ಯತೆ ಮತ್ತು ಬೆಲೆ ಸ್ಥಿರತೆ ಮೇಲಾಗುವ ಎಲ್ ನಿನೊ ಸಂಭಾವ್ಯ ಪರಿಣಾಮದ ಕುರಿತು ಪರಿಶೀಲನೆ ನಡೆಸಿದ ಸಚಿವ ಜೋಶಿ, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.

ದೇಶಾದ್ಯಂತ ಎಲ್ಲೂ ಆಹಾರ ಧಾನ್ಯ ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗಬಾರದು ಮತ್ತು ಹೆಚ್ಚಿನ ದಾಸ್ತಾನು ಸಂಗ್ರಹದ ಮೇಲೆ ನಿಗಾ ವಹಿಸಬೇಕು. ಬೆಲೆ ಸ್ಥಿರತೆ ಕಾಪಾಡಿಕೊಳ್ಳಬೇಕು. ಆಹಾರ ಧಾನ್ಯ ಖರೀದಿಯಲ್ಲಿ ಗ್ರಾಹಕರಿಗೆ ಯಾವುದೇ ರೀತಿಯ ತೊಂದರೆ - ತೊಡಕು ಎದುರಾಗದಂತೆ ಜಾಗೃತೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸಲಹೆ ನೀಡಿದರು.

ಬೆಳೆ ಮತ್ತು ಬೇಡಿಕೆಗೆ ಅನುಗುಣವಾಗಿ ಆಹಾರ ಧಾನ್ಯ, ಅಗತ್ಯ ಸರಕುಗಳ ಖರೀದಿ ಲಭ್ಯತೆ ಬಗ್ಗೆ ಮಾಹಿತಿ ಪಡೆದ ಸಚಿವರು, ದೇಶಾದ್ಯಂತ ಪ್ರಮುಖವಾಗಿ ಆಹಾರ ಭದ್ರತೆ ಕಾಪಾಡಲು, ಗ್ರಾಹಕರ ಹಿತಾಸಕ್ತಿ ರಕ್ಷಿಸಲು ಹಾಗೂ ಅಗತ್ಯ ವಸ್ತುಗಳ ಸಾಕಷ್ಟು ಲಭ್ಯತೆಗೆ ಒತ್ತು ನೀಡಬೇಕು ಎಂದು ಅವರು ಹೇಳಿದರು.

ರಾಹುಲ್‌ ಗಾಂಧಿ 40 ದಿನದಿಂದ ಕಾಣೆ; ಡಿಕೆಶಿ ಹುಡುಕುತ್ತಿದ್ದಾರೆ ಎಂದು ಪ್ರಲ್ಹಾದ್‌ ಜೋಶಿ ಲೇವಡಿ

ದೇಶಾದ್ಯಂತ ಅಗತ್ಯ ಸರಕುಗಳ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳೊಂದಿಗೆ ನಿಕಟ ಸಮನ್ವಯ ಸಾಧಿಸಬೇಕು. ಸಕಾಲಿಕವಾಗಿ ಮಧ್ಯಸ್ಥಿಕೆ ವಹಿಸುವುದು ಮತ್ತು ಪೂರ್ವಭಾವಿ ಯೋಜನೆ ಕೈಗೆತ್ತಿಕೊಳ್ಳುವ ಬಗ್ಗೆ ಸಹ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.