ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ʼವಿಕಸಿತ್ ವೈಬ್ರಂಟ್‌ ವಿಲೇಜ್‌-2026ʼ; ಜು.26ರ ಸಂಜೆ 4.30ಕ್ಕೆ ಯುವ ಜನರೊಂದಿಗೆ ಪ್ರಧಾನಿ ಮೋದಿ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಜು.26ರಂದು "ವಿಕಸಿತ್ ವೈಬ್ರಂಟ್‌ ವಿಲೇಜ್‌-2026" ವಿಶಿಷ್ಠ ಕಾರ್ಯಕ್ರಮ ಮುಖೇನ ಯುವಜನರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ನವದೆಹಲಿ, ಜು.25: ʼಯುವಶಕ್ತಿ ಭಾರತದ ಪ್ರಬಲ ಶಕ್ತಿ, ಹಳ್ಳಿಗಳೇ ರಾಷ್ಟ್ರದ ಜೀವಾಳʼ ಎಂದೇ ನಂಬಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇದೇ ಜು.26ರಂದು "ವಿಕಸಿತ್ ವೈಬ್ರಂಟ್‌ ವಿಲೇಜ್‌-2026" (Viksit Vibrant Village 2026) ವಿಶಿಷ್ಠ ಕಾರ್ಯಕ್ರಮ ಮುಖೇನ ಯುವಜನರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವನ್ನು ಪ್ರತಿನಿಧಿಸುವ ಆಯ್ದ 400ಕ್ಕೂ ಹೆಚ್ಚು ಯುವ ಜನರು ಮಹತ್ತರ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ದೇಶಾದ್ಯಂತದಿಂದ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆ ನಡೆಸಿದ್ದು, ಇದರಲ್ಲಿ ಪಾಲ್ಗೊಂಡಿದ್ದ 3 ಲಕ್ಷಕ್ಕೂ ಅಧಿಕ ಯುವಜನರ ಪೈಕಿ ಅಂತಿಮವಾಗಿ 400 ಅರ್ಹ ವಿದ್ಯಾರ್ಥಿ-ಯುವಜನರನ್ನು ಆಯ್ಕೆ ಮಾಡಲಾಗಿದೆ ಎಂದು ಜೋಶಿ ಮಾಹಿತಿ ನೀಡಿದ್ದಾರೆ.

ಜೂನ್ 4ರಿಂದ ಜೂನ್ 30ರವರೆಗೆ ʼವಿಕಸಿತ್ ವೈಬ್ರಂಟ್ ವಿಲೇಜ್ ಪ್ರೋಗ್ರಾಂ-2026ʼ ಆಯೋಜಿಸಿ ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ 74 ವೈಬ್ರಂಟ್ ಗಡಿ ಗ್ರಾಮಗಳನ್ನು ಸಂಪರ್ಕಿಸುವ ಅರ್ಹ ಯುವಕರನ್ನು ಆಯ್ಕೆ ಮಾಡಲಾಗಿದೆ. ಭಾರತದ ಗಡಿ ಪ್ರದೇಶಗಳ ಸಾಮಾಜಿಕ-ಆರ್ಥಿಕ, ಭೂದೃಶ್ಯ, ಸಾಂಸ್ಕೃತಿಕ ಪರಂಪರೆ ಮತ್ತು ಅಭಿವೃದ್ಧಿ ಆಕಾಂಕ್ಷೆಗಳಿಗೆ ನೇರವಾಗಿ ಸ್ಪಂದಿಸುವ ದಿಸೆಯಲ್ಲಿ ಇದೊಂದು ವಿಶಿಷ್ಠ ಹೆಗ್ಗುರುತು ಎಂದಿದ್ದಾರೆ ಜೋಶಿ.

ಜು.26ರಂದು ಸಂಜೆ 4.30ಕ್ಕೆ ಪ್ರಧಾನಿ ವೀಡಿಯೋ ಕಾನ್ಫರೆನ್ಸ್‌

ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 26ರಂದು ಸಂಜೆ 4:30ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ʼವಿಕಸಿತ್ ವೈಬ್ರಂಟ್ ವಿಲೇಜ್-2026ʼ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮವು ಸಮುದಾಯದ ಭಾಗವಹಿಸುವಿಕೆ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯಂತೆ ರಾಷ್ಟ್ರೀಯ ಏಕೀಕರಣ, ಗಡಿ ಗ್ರಾಮಗಳ ಕಾರ್ಯತಂತ್ರದ ಪ್ರಾಮುಖ್ಯತೆಗೆ ನಿದರ್ಶನವಾಗಿದೆ.

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು; ‎1,264 ಕೋಟಿ ವೆಚ್ಚಕ್ಕೆ ಅನುಮೋದನೆ

ಗಡಿ ಗ್ರಾಮಗಳನ್ನು ರಾಷ್ಟ್ರದ ಮೊದಲ ಗ್ರಾಮಗಳಾಗಿ ಪರಿಗಣಿಸುವ ಮತ್ತು ವಿಕಸಿತ್ ಭಾರತದತ್ತ ಸಾಗುವ ಪ್ರಯಾಣದಲ್ಲಿ ಸಕ್ರಿಯವಾಗಿಸುವ ಪ್ರಧಾನಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ʼಮೈ ಭಾರತ್ʼ ಮೂಲಕ ಜಾರಿಗೆ ತರಲಾದ "ವಿಕಸಿತ್ ವೈಬ್ರಂಟ್ ವಿಲೇಜ್ʼ ಕಾರ್ಯಕ್ರಮ ವಿಶಿಷ್ಠವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.