#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Jaya Bachchan: ಕಾಲ್ತುಳಿತದಲ್ಲಿ ಸತ್ತವರ ಶವಗಳನ್ನು ನದಿಗೆ ಎಸೆಯಲಾಗಿದೆ; ಜಯಾ ಬಚ್ಚನ್‌ ಕಿಡಿ!

ಕುಂಭಮೇಳದ ಕಾಲ್ತುಳಿತ ಘಟನೆಯ ಬಗ್ಗೆ ಅಷ್ಟಾಗಿ ಯುಪಿ ಸರ್ಕಾರವು ತಲೆಕೆಡಿಸಿಕೊಂಡಿಲ್ಲ. ಕಣ್ಣೊರೆಸುವ ಕೆಲಸವನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಮಾಡುತ್ತಿದೆ. ಸತ್ಯಾಂಶವನ್ನು ಮರೆಮಾಚಲಾಗುತ್ತಿದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ನದಿಗೆ ಎಸೆಯಲಾಗಿದೆ. ಹೀಗಾಗಿ ಮಹಾ ಕುಂಭಮೇಳದ ನದಿ ಅತಿ ಹೆಚ್ಚು ಕಲುಷಿತ ಆಗಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಕಿಡಿಕಾರಿದ್ದಾರೆ.

ಕಾಲ್ತುಳಿತದಲ್ಲಿ ಮೃತಪಟ್ಟವರ ಹೆಣಗಳನ್ನು ನದಿಗೆ ಎಸೆಯಲಾಗಿದೆ; ಜಯಾ ಬಚ್ಚನ್ ಆರೋಪ!

Jaya Bachchan

Profile Deekshith Nair Feb 3, 2025 7:38 PM

ನವದೆಹಲಿ: ಕುಂಭಮೇಳದ(Mahakumbh) ಕಾಲ್ತುಳಿತ(Stampede) ಘಟನೆಯ ಬಗ್ಗೆ ಅಷ್ಟಾಗಿ ಯುಪಿ ಸರ್ಕಾರವು ತಲೆಕೆಡಿಸಿಕೊಂಡಿಲ್ಲ. ಕಣ್ಣೊರೆಸುವ ಕೆಲಸವನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಮಾಡುತ್ತಿದೆ. ಸತ್ಯಾಂಶವನ್ನು ಮರೆಮಾಚಲಾಗುತ್ತಿದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ನದಿಗೆ ಎಸೆಯಲಾಗಿದೆ. ಹೀಗಾಗಿ ಮಹಾ ಕುಂಭಮೇಳದ ನದಿ ಅತಿ ಹೆಚ್ಚು ಕಲುಷಿತವಾಗಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್(Jaya Bachchan) ಕಿಡಿಕಾರಿದ್ದಾರೆ.

ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಜಲ ಶಕ್ತಿ ಯೋಜನೆ ಬಗ್ಗೆ ಬಿಜೆಪಿ ಉದ್ದುದ್ದ ಭಾಷಣ ಮಾಡುತ್ತಿದೆ. ಆದರೆ ಕುಂಭಮೇಳದಲ್ಲಿ ಅತಿ ಗರಿಷ್ಠ ಪ್ರಮಾಣದಲ್ಲಿ ನೀರು ಕಲುಷಿತ ಆಗಿದೆ ಎಂದು ಅವರು ಹೇಳಿದರು. ಪ್ರಯಾಗ್‌ರಾಜ್‌ನಲ್ಲಿ ನಡೆದ ಕಾಲ್ತುಳಿತದಿಂದ ದುರಂತವಾಗಿ ಮೃತಪಟ್ಟವರ ಹೆಣಗಳನ್ನು ನದಿಗೆ ಎಸೆಯಲಾಗಿದೆ ಎಂದು ಜಯಾ ಬಚ್ಚನ್‌ ಆರೋಪ ಮಾಡಿದರು. ಉತ್ತರ ಪ್ರದೇಶದ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಮುಚ್ಚಿಹಾಕುತ್ತಿದೆ ಮತ್ತು ಸ್ಪಷ್ಟ ಉತ್ತರವನ್ನು ನೀಡುತ್ತಿಲ್ಲ ಎಂದು ಹೇಳಿದರು.



ಮಹಾ ಕುಂಭ ಮೇಳದಲ್ಲಿ ಸಾಮಾನ್ಯ ಜನರಿಗೆ ಮತ್ತು ಬಡವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ, ಆದರೆ ವಿಐಪಿಗಳಿಗೆ ವಿಶೇಷ ವ್ಯವಸ್ಥೆ ನೀಡಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು. "ಕುಂಭಕ್ಕೆ ಭೇಟಿ ನೀಡುವ ಸಾಮಾನ್ಯ ಜನರಿಗೆ ಯಾವುದೇ ವಿಶೇಷ ಸೌಲಭ್ಯ ಸಿಗುತ್ತಿಲ್ಲ, ಅವರಿಗೆ ಯಾವುದೇ ವ್ಯವಸ್ಥೆ ಇಲ್ಲ," ಎಂದು ಹೇಳಿದರು. ಮಹಾ ಕುಂಭಮೇಳದಲ್ಲಿ ಜನಸಂದಣಿಯನ್ನು ಪ್ರಶ್ನಿಸಿದ ಅವರು, "ಕೋಟ್ಯಂತರ ಜನರು ಈ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಅವರು ಸುಳ್ಳು ಹೇಳುತ್ತಿದ್ದಾರೆ. ಅಷ್ಟು ದೊಡ್ಡ ಸಂಖ್ಯೆಯ ಜನರು ಆ ಸ್ಥಳದಲ್ಲಿ ಹೇಗೆ ಸೇರಬಹುದು?" ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ: Rahul Gandhi: ಚೀನಾ ಅತಿಕ್ರಮಣಕ್ಕೆ ಮೇಕ್‌ ಇನ್ ಇಂಡಿಯಾ ಕಾರಣ; ಸಂಸತ್‌ ಭಾಷಣದಲ್ಲಿ ಮೋದಿಯನ್ನು ಕುಟುಕಿದ ರಾಹುಲ್‌ ಗಾಂಧಿ!

ಲೋಕಸಭೆಯಲ್ಲಿ ಇಂದು(ಫೆ.3) ಕುಂಭಮೇಳದ ಕಾಲ್ತುಳಿತ ಪ್ರಕರಣದ ಕುರಿತು ಭಾರೀ ಗದ್ದಲದ ಪ್ರತಿಭಟನೆಗಳು ನಡೆದವು. ಈ ವಿಷಯದ ಕುರಿತು ಚರ್ಚೆ ಮತ್ತು ಮೃತರ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದವು. ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ಕೆ.ಸಿ. ವೇಣುಗೋಪಾಲ್ ಅವರು ಪ್ರಶ್ನೋತ್ತರ ಅವಧಿಯನ್ನು ಮುಂದೂಡಬೇಕೆಂದು ಮತ್ತು ಕಾಲ್ತುಳಿತದ ಕುರಿತು ಚರ್ಚೆ ನಡೆಸಬೇಕೆಂದು ಸಭಾಪತಿಗಳಲ್ಲಿ ಆಗ್ರಹಿಸಿದರು.