ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

DK Shivakumar: ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರಲಿವೆ: ಡಿ.ಕೆ. ಶಿವಕುಮಾರ್ ವಿಶ್ವಾಸ

DK Shivakumar: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಮಗೆ 136 ಸೀಟುಗಳು ಬಂದಿದ್ದವು, ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿವೆ. ನನ್ನ ಈ ಮಾತನ್ನು ಬರೆದಿಟ್ಟುಕೊಳ್ಳಿ. ನನಗೆ ನಮ್ಮ ಶಾಸಕರಿಗೆ ಆತ್ಮವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರಲಿವೆ: ಡಿಕೆಶಿ

-

Profile
Siddalinga Swamy Feb 14, 2026 9:12 PM

ಹಾವೇರಿ, ಫೆ.14: ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಘೋಷಿಸಿದರು. ಹಾವೇರಿಯಲ್ಲಿ ಶನಿವಾರ ನಡೆದ ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾನು ಚುನಾವಣೆಗೆ ಬಂದಾಗ ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣಕ್ಕೆ ಪಂಚ ಗ್ಯಾರಂಟಿ ನೀಡಿ, ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ನೀಡುತ್ತಿದ್ದೇವೆ. ಭೂ ದಾಖಲೆ ಇಲ್ಲದ 1,11,111 ಜನರಿಗೆ ಪೋಡಿ ಮಾಡಿ, ಖಾತಾ ಮಾಡಿ ದಾಖಲೆ ನೀಡಲಾಗಿದೆ. ಆ ಮೂಲಕ ನಿಮ್ಮ ಮುಂದಿನ ಪೀಳಿಗೆಗೆ ಆಸ್ತಿ ದಾಖಲೆ ಕೊಟ್ಟ ಏಕೈಕ ಸರ್ಕಾರ ಈ ಕಾಂಗ್ರೆಸ್ ಸರ್ಕಾರ ಎಂದು ತಿಳಿಸಿದರು.

DCM DK Shivakumar

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ 35-40 ಲಕ್ಷ ಪರಿಹಾರ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಕಾವೇರಿ ನದಿಗೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಮ್ಮ ಮಾರ್ಗದರ್ಶನದಲ್ಲಿ ಕಾನೂನು ತಜ್ಞರ ತಂಡ ವಾದ ಮಂಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಈ ಯೋಜನೆ ಪರವಾಗಿ ತೀರ್ಪು ಬಂದಿದೆ. ಆ ಮೂಲಕ ತಮಿಳುನಾಡು ಹಾಕಿದ್ದ ಆಕ್ಷೇಪಣಾ ಅರ್ಜಿ ವಜಾಗೊಳಿಸಲಾಗಿದೆ. ಈಗ ಈ ಯೋಜನೆಗೆ ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ಮಹದಾಯಿ ವಿಚಾರದಲ್ಲಿ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡಿಲ್ಲ. ಇನ್ನು ಕುಡಿಯುವ ನೀರು ಪೂರೈಕೆ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ 3 ತಿಂಗಳಲ್ಲಿ ಅನುಮತಿ ಕೊಟ್ಟರೆ ಸಾಕು. ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಹರಿಸುವ ಕೆಲಸವನ್ನು ಈ ಸರ್ಕಾರ ಹಾಗೂ ಡಿ.ಕೆ. ಶಿವಕುಮಾರ್ ಮಾಡಲಿದ್ದಾರೆ ಎಂದರು. ‌

ಇಲ್ಲಿವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ: ಸಿಎಂ

ಕೃಷ್ಣಾ, ಕಾವೇರಿ, ಮಹದಾಯಿ ಯೋಜನೆಗಳ ಮೂಲಕ ರೈತರ ಬದುಕು ಹಸನ ಮಾಡಲು ನಮ್ಮ ಸರ್ಕಾರ 7ನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಿದೆ. ಪ್ರತಿಯೊಬ್ಬರಿಗೆ ಕುಡಿಯಲು ನೀರು, ವ್ಯವಸಾಯಕ್ಕೆ ನೀರು, ಕೆರೆ ತುಂಬಿಸಿ ಅಂತರ್ಜಲ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿದರು.

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರಲಿವೆ, ಬರೆದಿಟ್ಟುಕೊಳ್ಳಿ

ರೈತರ ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸಲು ಇಂಧನ ಇಲಾಖೆಯಿಂದ ವರ್ಷಕ್ಕೆ 20 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ. ಇಂತಹ ಐಸಿಹಾಸಿಕ ಕಾರ್ಯಕ್ರಮಗಳನ್ನು ನಾವು ನೀಡುತ್ತಿದ್ದೇವೆ. ಈ ಬಾರಿ ಚುನಾವಣೆಯಲ್ಲಿ ನಮಗೆ 136 ಸೀಟುಗಳು ಬಂದಿದ್ದವು, ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿವೆ. ನನ್ನ ಈ ಮಾತನ್ನು ಬರೆದಿಟ್ಟುಕೊಳ್ಳಿ. ನನಗೆ ನಮ್ಮ ಶಾಸಕರಿಗೆ ಆತ್ಮವಿಶ್ವಾಸವಿದೆ. 3 ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಎರಡು ಕಡೆ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ಆ ಕ್ಷೇತ್ರಗಳು ನಮ್ಮ ಬಳಿ ಇರಲಿಲ್ಲ. ಆ ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ನೀಡಿ ನಮ್ಮ ಸಂಖ್ಯಾಬಲವನ್ನು 139ಕ್ಕೆ ಏರಿಕೆ ಮಾಡಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದ. ನಿಮ್ಮ ಈ ಋಣ ತೀರಿಸಲು ಈ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿದ್ದೇವೆ ಎಂದು ತಿಳಿಸಿದರು.

ಬಿಜೆಪಿ, ದಳದ ಸರ್ಕಾರ ಇಂತಹ ಒಂದೇ ಒಂದು ಜನಪರ ಕಾರ್ಯಕ್ರಮ ನೀಡಿದೆಯೇ?

ಜನರು ನೆಮ್ಮದಿಯಿಂದ ಬದುಕುತ್ತಿರುವ ದಿನಗಳು, ಮಹಿಳೆಯರು ಸಂತೋಷದಿಂದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿರುವ ದಿನಗಳು, ಗೃಹಿಣಿಯರ ಬದುಕಿನಲ್ಲಿ ಬದಲಾವಣೆ ಕಂಡ ದಿನಗಳು, ಯುವಕರು ಉದ್ಯೋಗ ಸೃಷ್ಟಿಮಾಡಿಕೊಳ್ಳುತ್ತಿರುವ ದಿನಗಳನ್ನು ನಾವು ನೀವು ನೋಡುತ್ತಿದ್ದೇವೆ. ಯಡಿಯೂರಪ್ಪನವರೇ, ಮಿಸ್ಟರ್ ಕುಮಾರಸ್ವಾಮಿ, ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನಿಮ್ಮ ಆಡಳಿತ ಅವಧಿಯಲ್ಲಿ ಇಂತಹ ಒಂದು ಕೆಲಸವನ್ನು ನೀವು ಮಾಡಿದ್ದರೆ, ಜನರಿಗಾಗಿ ಒಂದೇ ಒಂದು ಕಾರ್ಯಕ್ರಮವನ್ನು ಬಿಜೆಪಿ ಹಾಗೂ ಜನತಾ ದಳದವರು ಕೊಟ್ಟಿದ್ದರೆ, ರಾಜಕೀಯದಲ್ಲಿ ನಿಮಗೆ ಮಾತನಾಡುವ ಶಕ್ತಿ ಇರುತ್ತಿತ್ತು. ಆದರೆ ನೀವು ಅದನ್ನು ಕಳೆದುಕೊಂಡಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರಕ್ಕೆ ಸಾವಿರ ದಿನಗಳು ತುಂಬಿವೆ. ಈ ಸಾವಿರ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ಬದಲಾವಣೆಯಾಗಿದೆ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅಪಮಾನ, ಆದರ್ಶ ಇಲ್ಲದೆ ಸತ್ತರೆ ಬದುಕಿಗೆ ಅಪಮಾನ. ನಿಮ್ಮ ಋಣ ತೀರಿಸಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ತಿಳಿಸಿದರು.

ʼʼತಾಳ್ಮೆ ಕೂಡ ಸಾಕಷ್ಟು ಫಲ ನೀಡುತ್ತದೆʼʼ: ಅಧಿಕಾರ ಹಂಚಿಕೆಯ ಸೂಚನೆ ನೀಡಿದ್ರಾ ಡಿ.ಕೆ. ಶಿವಕುಮಾರ್‌?

ನಿನ್ನೆಗೆ ನಮ್ಮ ಸರ್ಕಾರಕ್ಕೆ ಸಾವಿರ ದಿನಗಳು ತುಂಬಿವೆ. ನಿನ್ನೆ ನಾವು ಈ ಕಾರ್ಯಕ್ರಮ ಮಾಡಬೇಕಿತ್ತು. ಆದರೆ ನಮ್ಮ ಸರ್ಕಾರ ಬೆಂಗಳೂರಿನಲ್ಲಿ ಅಣೆಕಟ್ಟು ಸುರಕ್ಷತೆ ವಿಚಾರವಾಗಿ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಇವತ್ತು ಆಯೋಜಿಸುವಂತೆ ಕೃಷ್ಣ ಭೈರೇಗೌಡರು ಹಾಗೂ ಶಿವಾನಂದ ಪಾಟೀಲ್ ಅವರಿಗೆ ಕೇಳಿಕೊಂಡೆ. ನಮ್ಮಲ್ಲಿರುವ ಅನೇಕ ಅಣೆಕಟ್ಟುಗಳು 60-70 ವರ್ಷಗಳಷ್ಟು ಹಳೆಯದಾಗಿವೆ. ಕೇಂದ್ರ ಸಚಿವರು, ವಿದೇಶಗಳಿಂದ 700 ತಜ್ಞರು ಆಗಮಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.