ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

CM oath ceremony: ಸಾರ್ವಜನಿಕರಿಗೆ ತೊಂದ್ರೆ ಆಗಬಾರದೆಂದು ಲೋಕಭವನದಲ್ಲಿ ಪ್ರಮಾಣದಲ್ಲಿ ವಚನ: ಡಿ.ಕೆ.ಶಿವಕುಮಾರ್‌

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಸರಳವಾಗಿ ನಡೆಯುತ್ತಿರುವುದರಿಂದ ಹೆಚ್ಚಿನ ಜನ ಸೇರಲು ಆಗುವುದಿಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರು ಕ್ಷಮಿಸಬೇಕು. ಬೆಂಗಳೂರಿನ ನಾಗರಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕಾರ್ಯಕ್ರಮವನ್ನು ಲೋಕಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಜನರಿಗೆ ತೊಂದ್ರೆ ಆಗಬಾರದೆಂದು ಲೋಕಭವನದಲ್ಲಿ ಪ್ರಮಾಣ ವಚನ

ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್‌. -

Prabhakara R
Prabhakara R May 31, 2026 8:54 PM

ಬೆಂಗಳೂರು, ಮೇ 31: ಬೆಂಗಳೂರಿನ ನಾಗರಿಕರಿಗೆ ತೊಂದರೆಯಾಗಬಾರದು, ಈ ಕಾರ್ಯಕ್ರಮಕ್ಕೆ ಹೊರಗಡೆಯಿಂದ ಹೆಚ್ಚಿನ ವಾಹನ ಆಗಮಿಸಿ ಸಂಚಾರ ದಟ್ಟಣೆ ಆಗಬಾರದು ಎಂಬ ಕಾರಣಕ್ಕೆ ವಿಧಾನಸೌಧದ ಮೆಟ್ಟಿಲುಗಳ ಬದಲು, ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು.

ರೇಸ್ ಕೋರ್ಸ್ ರಸ್ತೆ ಬಳಿ ಉದ್ದೇಶಿತ ಕಾಂಗ್ರೆಸ್ ಭವನ ನಿರ್ಮಾಣ ಜಾಗಕ್ಕೆ ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿ, ಈ ಕಾರ್ಯಕ್ರಮ ಸರಳವಾಗಿ ನಡೆಯುತ್ತಿರುವುದರಿಂದ ಹೆಚ್ಚಿನ ಜನ ಸೇರಲು ಆಗುವುದಿಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರು ಕ್ಷಮಿಸಬೇಕು ಎಂದರು.

ನಿಮ್ಮ ಜೊತೆ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡುವರೇ ಎಂದು ಕೇಳಿದಾಗ, ನನಗೆ ಆ ಬಗ್ಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.‌

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ಎಲ್ಲಾ ನಾಯಕರು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ ನೀಡಲು ಆಗದ ಕಾರಣ, ಎಲ್‌ಇಡಿ ಪರದೆಗಳಲ್ಲಿ ಆ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ನಮಗಾಗಿ ಹೋರಾಟ ಮಾಡಿ, ಶ್ರಮಿಸಿದ ನಾಯಕರಿಗೆ ನಾವು ಇಷ್ಟಾದರೂ ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.

ಪ್ರಮಾಣ ವಚನ ಸ್ವೀಕಾರದ ಬಳಿಕ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಸಲು ಆಲೋಚಿಸಲಾಗಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಇನ್ನಷ್ಟೇ ಸಮಯ ನಿಗದಿ ಮಾಡಬೇಕಿದೆ" ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಪಕ್ಷದ ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಅಧ್ಯಕ್ಷರು, ಶಾಸಕರು ಹಾಗೂ ಮಾಜಿ ಶಾಸಕರು, ಪಕ್ಷದ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಸಂಸದರು, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಿಗೆ ಆಹ್ವಾನ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ. ಕಾರ್ಯಕರ್ತರು ಕ್ಷಮಿಸಬೇಕು. ಅಲ್ಲಿ ಜಾಗದ ಕೊರತೆ ಇರುವುದರಿಂದ ಆಹ್ವಾನಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು" ಎಂದು ಹೇಳಿದರು.

Deputy CM: ಯಾರಾಗ್ತಾರೆ ಡಿಸಿಎಂ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ರಾಹುಲ್ ಗಾಂಧಿ ಅವರಿಗೆ ಇನ್ನಷ್ಟೇ ನೀಡಲಾಗುವುದು. ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಕಚೇರಿ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ" ಎಂದು ಮಾಹಿತಿ ನೀಡಿದರು.

ನೂರು ಕಚೇರಿಗಳ ಶಂಕುಸ್ಥಾಪನೆ ಬಗ್ಗೆ ಕೇಳಿದಾಗ, ಅದನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ತಿಳಿಸಿದರು.