ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಮಲಿಂಗಾರೆಡ್ಡಿ ನನಗೆ ಬಹಳ ಆಪ್ತರು, ಅವರೊಂದಿಗೆ ಮಾತನಾಡುವೆ ಎಂದ ಡಿ.ಕೆ. ಶಿವಕುಮಾರ್

CM DK Shivakumar: ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ʼರಾಮಲಿಂಗಾರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತನಾಡುವೆ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. -

Profile
Siddalinga Swamy Jun 5, 2026 4:20 PM

ಬೆಂಗಳೂರು, ಜೂ. 05: ರಾಮಲಿಂಗಾ ರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಅವರು ಪ್ರತಿಕ್ರಿಯೆ ನೀಡಿದರು. ರಾಮಲಿಂಗಾ ರೆಡ್ಡಿ ಅವರು ರಾಜಿನಾಮೆ ನೀಡಿರುವ ಬಗ್ಗೆ ಕೇಳಿದಾಗ, ʼರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆʼ ಎಂದು ಹೇಳಿದರು.

ಕೆಲವು ಕಾರ್ಯಕರ್ತರು ರಾಜಿನಾಮೆ ನೀಡುತ್ತಿರುವ ಬಗ್ಗೆ ಕೇಳಿದಾಗ, ʼಏನೇ ಇದ್ದರು ಶಿಸ್ತು ಬಹಳ ಮುಖ್ಯʼ ಎಂದು ಅವರು ತಿಳಿಸಿದರು.‌

ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್‌ನಿಂದ ಐವರು ಅಭ್ಯರ್ಥಿಗಳು ಕಣಕ್ಕೆ: ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಅಣ್ಮಮ್ಮ ದೇವಿ ಆಶೀರ್ವಾದ

ಬೆಂಗಳೂರು ನಗರ ದೇವತೆ ಅಣ್ಣಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ʼಅಣ್ಣಮ್ಮ ದೇವಿ ಬೆಂಗಳೂರಿನ ಗ್ರಾಮ ದೇವತೆ. ನಾಡಿನ ದೇವತೆ ಚಾಮುಂಡಿ ತಾಯಿ. ತಾಯಿ ದರ್ಶನ ಮಾಡಿ ಆಶೀರ್ವಾದ ಪಡೆದು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಸಮೃದ್ಧಿ, ನೆಮ್ಮದಿ, ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ, ಕೆಲಸ ಪ್ರಾರಂಭಿಸಿದ್ದೇನೆʼ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.