U T Khader: ಆಶಾ ಕಾರ್ಯಕರ್ತೆಯರು ಇಲ್ಲದಿದ್ರೂ ಆರೋಗ್ಯ ಇಲಾಖೆ ನಡೆಯುತ್ತೆ: ಗೌರವಧನ ಹೆಚ್ಚಳ ಬೇಡಿಕೆಗೆ ಯು.ಟಿ. ಖಾದರ್ ಗರಂ
ASHA workers Protest: ತಮಿಳುನಾಡಿನಲ್ಲಿ ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ತಾಯಿ ಮರಣ ಪ್ರಮಾಣ ಹಾಗೂ ಶಿಶು ಮರಣ ಪ್ರಮಾಣ ಕಡಿಮೆ ಇದೆ ಎಂದು ಖಾದರ್ ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಸ್ವತಃ ಆಶಾಗಳೇ ತೋರಿಸಿಕೊಟ್ಟಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
-
ಬೆಂಗಳೂರು: ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ವಿರುದ್ಧ ಆರೋಗ್ಯ ಸಚಿವ ಯು.ಟಿ. ಖಾದರ್ ಗರಂ ಆಗಿದ್ದಾರೆ. 10 ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಆರೋಗ್ಯ ಇಲಾಖೆ ಏನಾದರೂ ಸಮಸ್ಯೆಗೆ ಸಿಲುಕಿದೆಯಾ? ಹಳ್ಳಿಗಳಲ್ಲಿ ಏನಾದರೂ ಸಮಸ್ಯೆಯಾಗಿದೆಯಾ? ಹೆರಿಗೆ ಆಗುತ್ತಿದೆ, ಎಲ್ಲವೂ ನಡೆಯುತ್ತಿದೆ’ ಎಂದು ಖಾದರ್ ಅಸಮಾಧಾನ ಹೊರಹಾಕಿದ್ದಾರೆ.
ಆಶಾ ಕಾರ್ಯಕರ್ತೆಯರ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಸ್ವತಃ ಆಶಾಗಳೇ ತೋರಿಸಿಕೊಟ್ಟಿದ್ದಾರೆ. ‘ಆಶಾಗಳು ಇದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ, ಇಲ್ಲದಿದ್ದರೂ ನಡೆಯುತ್ತೆ. ಅದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆಶಾಗಳು ಇಲ್ಲವೆಂದರೆ ಡಾಕ್ಟರ್ ಇಲ್ವಾ? ನರ್ಸ್ ಇಲ್ವಾ? ಎಂದು ಖಾದರ್ ಪ್ರಶ್ನಿಸಿದ್ದಾರೆ.
ತಮಿಳುನಾಡಿನಲ್ಲಿ ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ತಾಯಿ ಮರಣ ಪ್ರಮಾಣ ಹಾಗೂ ಶಿಶು ಮರಣ ಪ್ರಮಾಣ ಕಡಿಮೆ ಇದೆ ಎಂದು ಖಾದರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರಿದ್ದರೂ, ತಮಿಳುನಾಡಿನ ಆರೋಗ್ಯ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಲಿಖಿತ ಭರವಸೆ ನೀಡಲು ಸಾಧ್ಯವಿಲ್ಲ, ದಯವಿಟ್ಟು ವಾಪಸ್ ಕೆಲ್ಸಕ್ಕೆ ಹೋಗಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿಕೆಶಿ ಮನವಿ
ಇವರಿಗೆ 15 ಸಾವಿರ ರೂ. ಕೊಡಬೇಕಾ?
ನರ್ಸ್ಗಳಿಗೆ 10 ಸಾವಿರ ರೂಪಾಯಿ ಸಂಬಳ, ಶಿಕ್ಷಕರಿಗೆ 12 ಸಾವಿರ ರೂಪಾಯಿ ಸಂಬಳ, ಆರೋಗ್ಯ ಸಹಾಯಕರಿಗೆ 4,500 ರೂಪಾಯಿ ಸಂಬಳ ನೀಡಲಾಗುತ್ತಿದೆ. ಇವರಿಗೆ 15 ಸಾವಿರ ರೂಪಾಯಿ ಕೊಡಬೇಕಾ?’ ಎಂದು ಖಾದರ್ ಪ್ರಶ್ನಿಸಿದ್ದಾರೆ.