ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Nikhil Kumaraswamy: ʼಜಾತಿ ಗಣತಿʼ ಸಿದ್ದರಾಮಯ್ಯ ಅವರಿಗಾಗಿ ಸಿದ್ದರಾಮಯ್ಯನವರೇ ಮಾಡಿಕೊಂಡ ವರದಿ: ನಿಖಿಲ್ ಕುಮಾರಸ್ವಾಮಿ ಲೇವಡಿ

Nikhil Kumaraswamy: ಸಮೀಕ್ಷೆ ನಡೆಸಿದವರು ಎಷ್ಟು ಮನೆಗಳಿಗೆ ಹೋಗಿದ್ದಾರೆ ಎಂಬ ದಾಖಲೆಗಳು ಇರಬೇಕು. ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು ಆಗಿರುವ ನಮ್ಮ ತಂದೆಯ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ಅದೇ ರೀತಿ ನಮ್ಮ ಅಜ್ಜ, ಈ ದೇಶದ ಮಾಜಿ ಪ್ರಧಾನಿಗಳು. ಅವರ ಮನೆಗೂ ಯಾರೂ ಭೇಟಿ ಕೊಟ್ಟು ಸಮೀಕ್ಷೆ ಮಾಡಿಲ್ಲ. ಇಂಥ ಅಸಂಖ್ಯಾತ ಉದಾಹರಣೆಗಳನ್ನು ಕೊಡಬಲ್ಲೆ. ನನಗೆ ಗಣತಿ ನಡೆದಿರುವ ಬಗ್ಗೆಯೇ ಅನುಮಾನವಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಜಾತಿ ಗಣತಿ ನೆಪದಲ್ಲಿ ಸಿದ್ದರಾಮಯ್ಯ ಟೆಸ್ಟ್ ರನ್ ಮಾಡ್ತಿದ್ದಾರೆ-ನಿಖಿಲ್

Profile Siddalinga Swamy Apr 14, 2025 8:15 PM

ಬೆಂಗಳೂರು: ಜಾತಿ ಗಣತಿ ವರದಿಯು ಸಿದ್ದರಾಮಯ್ಯ (CM Siddaramaiah) ಅವರಿಂದ ಸಿದ್ದರಾಮಯ್ಯ ಅವರಿಗಾಗಿ ಸಿದ್ದರಾಮಯ್ಯನವರೇ ಮಾಡಿಕೊಂಡ ವರದಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಲೇವಡಿ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸೋರಿಕೆ ಆಗಿರುವ ಈ ವರದಿಯಲ್ಲಿ ಇವೆ ಎನ್ನಲಾದ ಅಂಕಿ ಅಂಶಗಳನ್ನು ಒಮ್ಮೆ ನೋಡಿದರೆ ಈ ವರದಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಕ್ಷೇಮಕ್ಕಾಗಿ ತಯಾರು ಮಾಡಿಸಿಕೊಂಡಿರುವ ವರದಿ ಎಂದು ಆರೋಪಿಸಿದರು.

ನಮ್ಮ ರಾಜ್ಯದಲ್ಲಿ ಏಳು ಕೋಟಿ ಕನ್ನಡಿಗರು ಇದ್ದಾರೆ. ಸಮೀಕ್ಷೆ ನಡೆಸಿದವರು ಎಷ್ಟು ಮನೆಗಳಿಗೆ ಹೋಗಿದ್ದಾರೆ ಎಂಬ ದಾಖಲೆಗಳು ಇರಬೇಕು. ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು ಆಗಿರುವ ನಮ್ಮ ತಂದೆಯ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ಅದೇ ರೀತಿ ನಮ್ಮ ಅಜ್ಜ, ಈ ದೇಶದ ಮಾಜಿ ಪ್ರಧಾನಿಗಳು. ಅವರ ಮನೆಗೂ ಯಾರೂ ಭೇಟಿ ಕೊಟ್ಟು ಸಮೀಕ್ಷೆ ಮಾಡಿಲ್ಲ. ಇಂಥ ಅಸಂಖ್ಯಾತ ಉದಾಹರಣೆಗಳನ್ನು ಕೊಡಬಲ್ಲೆ. ನನಗೆ ಗಣತಿ ನಡೆದಿರುವ ಬಗ್ಗೆಯೇ ಅನುಮಾನವಿದೆ. ಗಣತಿ ವೈಜ್ಞಾನಿಕವಾಗಿ, ಪ್ರತಿಯೊಂದು ಕುಟುಂಬದ ಮನೆ ಬಾಗಿಲಿಗೆ ಹೋಗಿ ಮಾಡಬೇಕಿತ್ತು. ಆ ರೀತಿ ಆಗಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಜಾತಿ ಗಣತಿ ನೆಪದಲ್ಲಿ ಸಿದ್ದರಾಮಯ್ಯ ಟೆಸ್ಟ್ ರನ್ ಮಾಡ್ತಿದ್ದಾರೆ

ಜಾತಿ ಗಣತಿ ವರದಿಯವು ಎನ್ನಲಾದ ಕೆಲ ಅಂಕಿ-ಅಂಶ ಸೋರಿಕೆಯಾಗಿದೆ. ಎಲ್ಲಾ ಪತ್ರಿಕೆ, ಸುದ್ದಿವಾಹಿನಿಗಳು ಆ ಅಂಕಿ ಅಂಶಗಳು ಬಿತ್ತರವಾಗುತ್ತಿವೆ. ಈ ಅಂಕಿ ಅಂಶಗಳನ್ನು ಹೊರ ಹಾಕಿರುವವರು ಅಥವಾ ಸೋರಿಕೆ ಮಾಡಿದವರು ಯಾರು? ವರದಿ ಅಧಿಕೃತವಾಗಿ ಇನ್ನೂ ಬಹಿರಂಗ ಆಗಿಲ್ಲ. ಅಂಕಿ ಅಂಶಗಳು ಎಲ್ಲಾ ಕಡೆ ತೇಲಾಡುತ್ತಿವೆ. ಆದರೆ, ಇದು ಅನಧಿಕೃತ ಮಾಹಿತಿ. ಊಹಾಪೋಹದ ಅಂಕಿ ಅಂಶಗಳು. ಇದು ಸರ್ಕಾರದ ಕಡೆಯಿಂದಲೇ ಸೋರಿಕೆ ಆಗಿರುವ ಅನಧಿಕೃತ ಅಂಕಿ ಅಂಶಗಳು ಎನ್ನುವುದು ನನ್ನ ಅಭಿಪ್ರಾಯ. ಸಾರ್ವಜನಿಕ ವಲಯದಲ್ಲಿ ಯಾವ ರೀತಿ ಚರ್ಚೆ ಬರಬಹುದೆಂದು ನೋಡೋಣ ಎಂದು ಸಿದ್ದರಾಮಯ್ಯ ಅವರು ಟೆಸ್ಟ್ ರನ್ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಗಣತಿಗೆ ₹150 ಕೋಟಿ ಖರ್ಚಾಗಿದೆ ಸರಿ, ತನಿಖೆ ನಡೆಸಿ

ಕಾಂತರಾಜು ಆಯೋಗದ ವರದಿಗೆ ₹150 ಕೋಟಿ ಖರ್ಚು ಮಾಡಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಆಯೋಗ ಯಾರ ಮನೆಗೂ ಹೋಗಿ ಸಮೀಕ್ಷೆ ಮಾಡಿಲ್ಲ ಎಂದು ಜನರೇ ಹೇಳುತ್ತಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಸೃಷ್ಟಿಯಾದ ವರದಿ ಇದು. ಹಾಗಾದರೆ, ಇಷ್ಟು ಮೊತ್ತವನ್ನು ಎಲ್ಲಿ ಖರ್ಚು ಮಾಡಿದ್ದಾರೆ. ಯಾರ ಮನೆಗೆ ಹೋಗಿದ್ದಾರೆ? ಯಾಕೆ ಇಷ್ಟು ಹಣ ಖರ್ಚು ಮಾಡಿದ್ದಾರೆ? ಲೆಕ್ಕ ಬೇಕಲ್ಲವೇ? ಇದರ ಬಗ್ಗೆಯೂ ತನಿಖೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಜನರ ಕಲ್ಯಾಣಕ್ಕಾಗಿ ಜಾತಿ ಗಣತಿ ನಡೆಯಬೇಕು

ಜಾತಿಗಣತಿ ಆಗಬೇಕಿರೋದು ಆರ್ಥಿಕವಾಗಿ, ಶೈಕ್ಷಣಿಕ, ಸಮಾನತೆ ಜಾತಿಗಣತಿ ಆಗಬೇಕಿತ್ತು. ಅದರೆ ಜಾತಿಗಣತಿ ಒಂದು ದಶಕದ ಹಿಂದೆಯೇ ಕಾಂತರಾಜು ಸಮಿತಿಯನ್ನ ರಚನೆ ಮಾಡಿ ಅವರ ಮೂಲಕ ಸರ್ವೇ ಮಾಡಲು ತೆಗೆದುಕೊಂಡು ತೀರ್ಮಾನ ಇದು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | BY Vijayendra: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ: ವಿಜಯೇಂದ್ರ

ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಜವರಾಯಿ ಗೌಡ, ಮಾಜಿ ಶಾಸಕ ಡಾ. ಕೆ.ಅನ್ನದಾನಿ, ಮಾಜಿ ಎಂಎಲ್ಸಿ ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ರಶ್ಮಿ ರಾಮೇಗೌಡ, ಇತರರು ಉಪಸ್ಥಿತರಿದ್ದರು.