Tuesday, 27th September 2022

ಪ್ರಶಾಂತ್ ಸಂಬರ್ಗಿಗೆ ಎಸಿಎಂಎಂ ಕೋರ್ಟ್ ಸಮನ್ಸ್

ಬೆಂಗಳೂರು : ಪ್ರಶಾಂತ್ ಸಂಬರ್ಗಿ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಜನವರಿ 21 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಪ್ರಶಾಂತ್ ಸಂಬರ್ಗಿಗೆ ಕೋರ್ಟ್ ಸಮನ್ಸ್ ನೀಡಿದೆ. ಶಾಸಕ ಜಮೀರ್ ಅಹಮದ್ ವಿರುದ್ಧ ಪ್ರಶಾಂತ್ ಸಂಬರ್ಗಿ ಡ್ರಗ್ಸ್ ವಿಚಾರ ಸಂಬಂಧ ಆರೋಪ ಮಾಡಿದ್ದರು. ಈ ಹಿನ್ನೆಲೆ ಪ್ರಶಾಂತ್ ಸಂಬರ್ಗಿ ವಿರುದ್ಧ ಜಮೀರ್ ಖಾಸಗಿ ದೂರು ಸಲ್ಲಿಸಿದ್ದರು.