Friday, 30th September 2022

ಫ್ರೀಡಂ ಪಾರ್ಕ್’ನಲ್ಲಿ ಮಾತ್ರ ಪ್ರತಿಭಟನೆ ನಡೆಸಿ: ಹೈಕೋರ್ಟ್

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್) ಹೊರತುಪಡಿಸಿ ಬೆಂಗಳೂರಿನ ಯಾವುದೇ ಭಾಗದಲ್ಲೂ ರಾಜಕೀಯ ಪಕ್ಷ ಹಾಗೂ ಸಂಘಟನೆ ಗಳು ಪ್ರತಿಭಟನೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಪ್ರತಿಭಟನೆ-ಪಾದಯಾತ್ರೆಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುವ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ರಾಜಕೀಯ ಪಕ್ಷಗಳು ಅಥವಾ ಸಂಘಟನೆಗಳು ಪ್ರತಿಬಾರಿ ಪಾದಯಾತ್ರೆ-ಪ್ರತಿಭಟನೆ ಕೈಗೊಂಡಾಗಲೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕು ತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.