Tuesday, 29th November 2022

ಗುಂಡು ಹಾರಿಸಿ ಸ್ವಾಗತ: ಪಿಎಸ್‌ಐ ಸೇರಿದಂತೆ ನಾಲ್ವರ ಅಮಾನತು

ಯಾದಗಿರಿ : ಬಿಜೆಪಿ ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಕೇಂದ್ರ ಸಚಿವ ಬಗವಂತ ಕೂಬಾ ಅವರನ್ನು ನಾಡ ಬಂದೂಕಿನ ಮೂಲಕ ಗುಂಡು ಹಾರಿಸಿ, ಸ್ವಾಗತಿಸಿದ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಪಿಎಸ್‌ಐ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಈ ಕುರಿತಂತೆ ಆದೇಶ ಹೊರಡಿಸಿದ್ದು, ಬಿಜೆಪಿಯ ಜನಾಶೀರ್ವಾದ ಯಾತ್ರೆಯ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ, ಕೇಂದ್ರ ಸಚಿವರನ್ನು ಸ್ವಾಗತಿಸಿದಂತ ಪ್ರಕರಣಧ, ಹಿನ್ನಲೆಯಲ್ಲಿ ಪಿಎಸ್‌ಐ ಸುರೇಶ್ ಹಾಗೂ ಮೂವರು ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಘಟನೆಯ ಸಂಬಂಧ ಪಿಎಸ್‌ಐ ಹಾಗೂ ಮೂವರು ಪೊಲೀಸ್ ಕಾನ್ಸ್ ಟೇಬಲ್ ಗಳ ವಿರುದ್ಧ ಕರ್ತವ್ಯ ಲೋಪ ಪ್ರಕರಣ ದಾಖಲಾಗಿತ್ತು.