Friday, 13th December 2024

ತೆರೆಗೆ ರೆಡಿಯಾದ ಚೆಡ್ಡಿದೋಸ್ತ್

ರೆಡ್ ಅಂಡ್ ವೈಟ್ ಖ್ಯಾತಿಯ ಸೆವೆನ್ ರಾಜ್ ನಿರ್ಮಿಸಿ, ಆಸ್ಕರ್ ಕೃಷ್ಣ ನಿರ್ದೇಶನ ಮಾಡಿರುವ ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ಚಿತ್ರ ಇದೇ ತಿಂಗಳು ತೆರೆಗೆ ಬರಲಿದೆ. ನಿರ್ದೇಶಕರು ಚಿತ್ರಮಂದಿರದಲ್ಲಿಯೇ ತಮ್ಮ ಚಿತ್ರ ಬಿಡುಗಡೆ ಮಾಡಬೇಕು ಎಂದು ಕಾದಿದ್ದರು.

ಈಗ ಚಿತ್ರಮಂದಿರಗಳು ತೆರೆದಿದ್ದು, ಇದೇ ತಿಂಗಳು ಚಿತ್ರವನ್ನು ತೆರೆಗೆ ತರಲು ನಿರ್ಧರಿಸಿದ್ದಾರೆ. ಇಬ್ಬರು ಸ್ನೇಹಿತರ ನಡುವೆ ನಡೆಯುವ ಸ್ಟೋರಿ ಚಿತ್ರದಲ್ಲಿದ್ದು, ಲವ್, ಸೆಂಟಿಮೆಂಟ್ ಅಂಶಗಳು ಚಿತ್ರದ ಕಥೆಯಲ್ಲಿ ಅಡಕವಾಗಿವೆ. ಆಸ್ಕರ್ ಕೃಷ್ಣ, ಲೋಕೇಂದ್ರ ಸೂರ್ಯ ಚಿತ್ರದ ನಾಯಕರಾಗಿ ನಟಿಸಿದ್ದು, ಗೌರಿ ನಾಯರ್
ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ಜತೆಗೆ ನಿರ್ಮಾಪಕ ಸೆವೆನ್ ರಾಜ್ ಕೂಡ ಚಿತ್ರದ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ಕೃಷ್ಣನ್, ಅನುರಾಧಾ ಭಟ್, ಜೋಗಿ ಸುನೀತಾ ಅವರ ದನಿಯಲ್ಲಿ ಮೂಡಿಬಂದಿರುವ ಚಿತ್ರದ ಹಾಡುಗಳು ಸಂಗೀತ ಪ್ರಿಯರನ್ನು ಸೆಳೆದಿವೆ. ಅನಂತ್ ಆರ್ಯನ್ ಸಂಗೀತ, ಗಗನ್ ಕುಮಾರ್ ಛಾಯಾಗ್ರಹಣ, ಮರಿಸ್ವಾಮಿ ಸಂಕಲನ, ಅಕುಲ್ ನೃತ್ಯ ಹಾಗೂ ವೈಲೆಂಟ್ ವೇಲು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.