Wednesday, 11th December 2024

ತೆರೆಯಲ್ಲೂ ಒಂದಾದ ಅರವಿಂದ್‌-ದಿವ್ಯಾ

ಬಿಗ್‌ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯ ಮೇಲೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಅರವಿಂದ್ ಕೌಶಿಕ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅಧಂಬರ್ಧ ಪ್ರೇಮಕಥೆಯಲ್ಲಿ ಈ ಜೋಡಿ ಒಂದಾಗಿದೆ. ಬೈಕ್ ರೇಸರ್ ಅರವಿಂದ್ ಅವರನ್ನು ನಾಯಕನಾಗಿ ಪರಿಚಯಿಸು ತ್ತಿದ್ದಾರೆ. ಪ್ರೀತಿ ಎನ್ನುವುದು ನಮ್ಮ ಕನಸುಗಳ ಜತೆಗೆ ಬೆಳೆಯುತ್ತದೆ, ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದು ಉಳಿಯೋದು ಕಷ್ಟ. ಏಕೆಂದರೆ ಅದು ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿ ನಲ್ಲಿ ಬದುಕಬೇಕಾಗಿರುತ್ತದೆ. ಇಂಥ ಒಂದು ಲವ್ ಸ್ಟೋರಿಯೇ ಅಧಂ ಬರ್ಧ ಪ್ರೇಮಕಥೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ನಾಯಕನ ಇಂಟ್ರೊಡಕ್ಷನ್ ಟೀಸರ್ ಬಿಡುಗಡೆಯಾಗಿದೆ.

ಹಿರಿಯ ನಟ ದ್ವಾರಕೀಶ್ ಟೀಸರ್ ಬಿಡುಗಡೆ ಮಾಡಿ ಶುಭಕೋರಿದರು.

ಈ ಚಿತ್ರದಲ್ಲಿ ದ್ವಾರಕೀಶ್ ಅವರ ಪುತ್ರ ಅಭಿಲಾಷ್ ದ್ವಾರಕೀಶ್ ಕೂಡ ಪ್ರಮುಖ ಪಾತ್ರ ದಲ್ಲಿ ಕಾಣಿಸಿಕೊಂಡಿದ್ದು, ಇಪ್ಪತ್ತೈದು ವರ್ಷಗಳ ನಂತರ ನಟನೆಗೆ ಮರಳಿದ್ದಾರೆ.

ರ‍್ಯಾಪರ್ ಆಲ್‌ಓಕೆ ಅಲೋಕ್, ಶ್ರೇಯಾ, ವೆಂಕಟ್‌ಶಾಸ್ತ್ರೀ, ಪ್ರದೀಪ್ ರೋಷನ್, ಸೂರಜ್ ಹೂಗಾರ್, ಸುಜಿತ್ ಶೆಟ್ಟಿ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಬಕ್ಸಸ್ ಮೀಡಿಯಾ, ಲೈಟ್‌ಹೌಸ್ ಮಿಡಿಯಾ ಮತ್ತು ಆರ್‌ಎಸಿ ವಿಷುವಲ್ಸ್ ಒಟ್ಟಾಗಿ ಅಧಂಬರ್ಧ ಪ್ರೇಮ ಕಥೆ ಚಿತ್ರವನ್ನು ನಿರ್ಮಿಸಿದ್ದಾರೆ. ಸೂರ್ಯ ಛಾಯಾಗ್ರಹಣ, ಶಿವರಾಜ್ ಮೇಹು ಸಂಕಲನ ಈ ಚಿತ್ರಕ್ಕಿದೆ.

***

ಇಲ್ಲಿ ಬೈಕ್ ರೇಸಿಂಗ್ ಸಾಧನೆಗಳ ಬಗ್ಗೆ ಹೇಳಿಲ್ಲ. ಇದೊಂದು ಅಪ್ಪಟ ಪ್ರೇಮಕಥೆ ಯಾಗಿದ್ದು, ನಾನು ಮಾಡಿಕೊಂಡ ಕಥೆಗೆ ಒಬ್ಬ ಹೊಸ ಹೀರೋ ಬೇಕಿತ್ತು. ಆತ ಜನ ಗುರುತಿಸುವಂತಹ ಹೀರೋನೂ ಆಗಿರಬೇಕು ಅಂದುಕೊಂಡಾಗ ನೆನಪಿಗೆ ಬಂದದ್ದೇ ಕೆ.ಪಿ.ಅರವಿಂದ್. ಸದ್ಯ ಚಿತ್ರದ ಶೂಟಿಂಗ್ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದೆ ನವೆಂಬರ್‌ನಲ್ಲಿ
ಚಿತ್ರ ತೆರೆಗೆ ಬರಲಿದೆ.

-ಅರವಿಂದ್ ಕೌಶಿಕ್ ನಿರ್ದೇಶಕ