Saturday, 14th December 2024

ಚಿತ್ರೀಕರಣ ಮುಗಿಸಿದ ಬಾಂಡ್‌ ರವಿ

ಪ್ರಮೋದ್ ನಾಯಕನಾಗಿ ನಟಿಸುತ್ತಿರುವ ಬಾಂಡ್ ರವಿ ಚಿತ್ರದ ಚಿತ್ರೀಕರಣ ಮುಕ್ತಾಯ ವಾಗಿದ್ದು, ಚಿತ್ರತಂಡ ಕುಂಬಳಕಾಯಿ ಒಡೆದಿದೆ. ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ.

ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ, ಕುದುರೆಮುಖ, ಉಡುಪಿ ಮಂಗಳೂರು ಭಾಗದಲ್ಲಿ ಸುಮಾರು ಐವತ್ತು ದಿನಗಳ ಕಾಲ ಶೂಟಿಂಗ್ ನಡೆಸಿದೆ. ಕಳೆದ ಒಂದು ದಶಕದಿಂದಲೂ ನಿರ್ದೇಶನದ ವಿಭಾಗದಲ್ಲಿ ಕಾರ್ಯನಿರ್ವಹಿಸಿರುವ ಪ್ರಜ್ವಲ್ ಸಾರಥ್ಯದಲ್ಲಿ ಬಾಂಡ್ ರವಿ ಚಿತ್ರ ಮೂಡಿಬರುತ್ತಿದೆ. ಆಕ್ಷನ್ ಜತೆಗೆ ನವಿರಾದ ಪ್ರೇಮ ಕಥೆಯೂ ಚಿತ್ರದಲ್ಲಿದೆ.

ಈ ಹಿಂದೆ ಮಾದ ಮಾನಸಿ ಸಿನಿಮಾ ನಿರ್ಮಾಣ ಮಾಡಿದ್ದ ನರಸಿಂಹಮೂರ್ತಿ ಲೈಫ್ ಲೈನ್ ಫಿಲಂಸ್ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರದ ನಾಯಕಿ ಯಾಗಿ ಕಾಜಲ್ ಕುಂದರ್ ಬಣ್ಣಹಚ್ಚಿದ್ದಾರೆ. ಉಳಿದಂತೆ ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಮತ್ತಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಜಯಂತ್ ಕಾಯ್ಕಿಣಿ ಹಾಗೂ ನಾಗೇಂದ್ರ ಪ್ರಸಾದ್ ಸಾಹಿತ್ಯದಲ್ಲಿ ಚಿತ್ರದ ಹಾಡುಗಳು ಮೂಡಿಬಂದಿವೆ. ಪ್ರಸಿದ್ಧ ಸಂಗೀತ ನಿರ್ದೇಶಕ ಮನೋಮೂರ್ತಿ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಕೆ.ಎಸ್.ಚಂದ್ರ ಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನಿಲ್ ಮತ್ತು ದೇವ್.ಎನ್.ರಾಜ್ ಸಂಭಾಷಣೆ ಈ ಚಿತ್ರಕ್ಕಿದೆ.