Wednesday, 11th December 2024

ಕೊನೆಯ ಹಂತದಲ್ಲಿ ಎವಿಡೆನ್ಸ್

ಪ್ರವೀಣ್ ರಾಮಕೃಷ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಎವಿಡೆನ್ಸ್ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಅಂತಿಮ ಹಂತದ ಪೋಸ್ಟ್ ಪ್ರೊಸಕ್ಷನ್ ಕೆಲಸಗಳು ನಡೆಯುತ್ತಿವೆ.

ಸದ್ಯದಲ್ಲೇ ಸಿನಿಮಾದ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ. ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್ ಜತೆಗೆ ತ್ರಿಕೋನ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರವೀಣ್ ರಾಮಕೃಷ್ಣ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಮತ್ತು ನೆಲಮಂಗಲ ಹೊರವಲಯದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಜೋಶ್ ಖ್ಯಾತಿಯ ರೋಬೊ ಗಣೇಶನ್ ನಾಯಕನಾಗಿ ನಟಿಸಿದ್ದಾರೆ.

ಕಿರಗೂರಿನ ಗಯ್ಯಾಳಿಗಳು ಚಿತ್ರದಲ್ಲಿ ನಟಿಸಿದ್ದ ಮಾನಸಾ ಜೋಶಿ ಚಿತ್ರದ ನಾಯಕಿ ಯಾಗಿ ಕಾಣಿಸಿಕೊಂಡಿದ್ದಾರೆ. ಆಕರ್ಷ್ ಆದಿತ್ಯ, ರಚಿತಾ, ಪೂಜಿತಾ ಬೋಬೆಗೌಡ, ಚಮಕ್‌ಚಂದ್ರ, ಪವನ್ ಸುರೇಶ್, ಶಶಿಧರ್ ಕೋಟೆ, ಕಾರ್ತಿಕ್ ವರ್ಣೇಕರ್,
ಮನಮೋಹನ್ ರೈ, ರೇಣು ಶಿಕಾರಿ, ಆರಾಧ್ಯ ಶಿವಕುಮಾರ್ ಮುಂತಾದವರು ನಟಿಸಿ ದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಆರೋನ್ ಕಾರ್ತಿಕ್ ವೆಂಕಟೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಉಳಿದಂತೆ
ಡಾ.ವಿ.ನಾಗೇಂದ್ರ ಪ್ರಸಾದ್ ಮತ್ತು ಪ್ರವೀಣ್ ರಾಮಕೃಷ್ಣ ಸಾಹಿತ್ಯ ರಚಿಸಿದ್ದಾರೆ. ಹನುಮಯ್ಯ ಬಂಡಾರು ಮತ್ತು ಆರ್. ಚಂದ್ರಶೇಖರ ಪ್ರಸಾದ್ ಸಂಭಾಷಣೆ, ರವಿ ಸುವರ್ಣ ಛಾಯಾಗ್ರಹಣ, ಶೇಷಾಚಲ ಕುಲಕರ್ಣಿ ಸಂಕಲನ ಈ ಚಿತ್ರಕ್ಕಿದೆ. ಕರಿಯ ನಂದ ಮತ್ತು ರಘು ಆರ್.ಜೆ. ನೃತ್ಯ ನಿರ್ದೇಶನ, ಜಾನಿ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಧೃತಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗಿದ್ದು, ಶ್ರೀನಿವಾಸ್‌ಪ್ರಭು, ಕೆ. ಮಾದೇಶ್, ನಟರಾಜ್ ಸಿ.ಎಸ್ ಒಟ್ಟಾಗಿ ಚಿತ್ರ
ನಿರ್ಮಾಣಕ್ಕೆ ಬಂಡವಾಳ ಹೂಡಿದ್ದಾರೆ.