Tuesday, 23rd April 2024

ಚಿತ್ರೀಕರಣ ಮುಗಿಸಿದ ಗಜರಾಮ

ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟಿಸುತ್ತಿರುವ ಗಜರಾಮ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ.

ಸಿನಿಮಾ ಸೆಟ್ಟೇರಿದ ದಿನದಿಂದಲೇ ಚಿತ್ರೀಕರಣ ಆರಂಭಿಸಿದ ಚಿತ್ರತಂಡ ಹದಿ ನಾರು ದಿನಗಳ ಕಾಲ ಶೂಟಿಂಗ್ ನಡೆಸಿದ್ದು, ಮೊದಲ ಹಂತದ ಚಿತ್ರೀಕರಣ ವನ್ನು ಪೂರ್ಣಗೊಳಿಸಿದೆ. ಹದಿನಾರು ದಿನಗಳ ಕಾಲ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಮೊದಲ ಶೆಡ್ಯೂಲ್ ಮುಗಿದ್ದಿದ್ದು ಎರಡನೆ ಶೆಡ್ಯೂಲ್‌ಗಾಗಿ ಲೊಕೇಶನ್ ಹುಡುಕಾಟದಲ್ಲಿದ್ದೇವೆ. ಇನ್ನು ನಲವತ್ತು ದಿನಗಳ ಶೂಟಿಂಗ್ ಬಾಕಿಯಿದೆ ಎನ್ನುತ್ತಾರೆ ನಿರ್ದೇಶಕ ಸುನೀಲ್ ಕುಮಾರ್.

ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ ಸುನೀಲ್ ಕುಮಾರ್ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಲವ್ ಸ್ಟೋರಿಯ ಜತೆಗೆ ಸಾಹಸ ಪ್ರಧಾನ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರಾಜವರ್ಧನ್ ಮಾಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಪಸ್ವಿನಿ ನಾಯಕಿಯಾಗಿ ಬಣ್ಣಹಚ್ಚುತ್ತಿದ್ದಾರೆ. ಶಿಷ್ಯ ದೀಪಕ್ ಚಿತ್ರದ ಪ್ರಮುಖ ಪಾತ್ರದಲ್ಲಿ ಮಿಂಚುತ್ತಿದ್ದು, ಖಳನಟನಾಗಿ ಪೈಲ್ವಾನ್ ಖ್ಯಾತಿಯ ಕಬೀರ್ ದುಹಾನ್ ಸಿಂಗ್ ನಟಿಸುತ್ತಿದ್ದಾರೆ.

ಲೈಫ್ ಲೈನ್ ಫಿಲಂ ಪ್ರೊಡಕ್ಷನ್‌ನಲ್ಲಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೋಮೂರ್ತಿ ಸಂಗೀತ ನಿರ್ದೇಶನ, ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್.ಬಿ.ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್ ಸಾಹಿತ್ಯದಲ್ಲಿ ಹಾಡುಗಳು ಮೂಡಿಬರುತ್ತಿವೆ.

error: Content is protected !!