ಕಿರುತೆರೆಯ ಗುಂಡಮ್ಮ, ಗೀತಾ ಭಾರತಿ ಮರಳಿ ಬಂದಿದ್ದಾರೆ. ಇನ್ನೂ ಹೆಸರಿಡದ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕಿರುತೆರೆಯ ಧಾರಾವಾಹಿ ಹಾಗೂ ಸಿನಿಮಾದಲ್ಲಿ ನಟಿಸಿದ್ದ ಗೀತಾ, ಪ್ರೇಕ್ಷಕರ ಮೆಚ್ಚಿನ ನಟಿಯಾಗಿದ್ದರು. ಬಿಗ್ಬಾಸ್ ಮನೆಗೂ ಗೀತಾ ಪ್ರವೇಶಸಿದ್ದರು. ಆ ಬಳಿಕ ನಟನೆ ಯಿಂದ ದೂರವೇ ಉಳಿದಿದ್ದರು. ಈಗ ಬಹು ದಿನಗಳ ಬಳಿಕ ಗೀತಾ ಭಾರತಿ ನಟನೆಗೆ ಮರಳಿದ್ದಾರೆ.
ದೃಷ್ಟಿ ಮೀಡಿಯಾ ಮತ್ತು ಪ್ರೊಡಕ್ಷನ್ಸ್ ನಲ್ಲಿ ನಿರ್ಮಾಣವಾಗುತ್ತಿರುವ, ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಗೀತಾ ಪ್ರಮುಖ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. ಚಿತ್ರಕ್ಕಾಗಿ ಒಂದಷ್ಟು ತೂಕವನ್ನು ಇಳಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡದ ಸೊಗಡು, ಭಾಷೆ, ಸಂಸ್ಕೃತಿಯ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗ ಲಿದೆ. ದಕ್ಷಿಣ ಕನ್ನಡದ ಸುಳ್ಯ, ಸಂಪಾಜೆ, ತೋಡಿಕಾನ ಆಸುಪಾಸಿನಲ್ಲಿ ಮೂವತ್ತು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಪಾವನಾ ಸಂತೋಷ್ ಕಥೆ, ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಸಂತೋಷ್ ಕೊಡಂಕೇರಿ ನಿರ್ದೇಶಿಸುತ್ತಿದ್ದಾರೆ.
ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಸಂಪತ್ ಮೈತ್ರೇಯ, ರಘು ಪಾಂಡೇಶ್ವರ್, ಖುಷಿ ಆಚಾರ್, ಮೀನಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮುರಳಿಧರ್, ಛಾಯಾಗ್ರಹಣ, ವಿನಯ್ ಸಂಗೀತ ನಿರ್ದೇಶನ, ರಘು ಸಂಕಲನ, ಕಿರಣ್ ಸಾಹಿತ್ಯ ಈ ಚಿತ್ರಕ್ಕಿದೆ.