Thursday, 12th December 2024

ಕಚಗುಳಿ ಇಡುವ ಕಂಬ್ಳಿಹುಳ

ಹೊಸಬರ ತಂಡವೇ ಸೇರಿ ನಿರ್ಮಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಜಾರೀ ಬಿದ್ದರೂ ಯಾಕೀ ನಗು… ಎಂಬ ಸಾಹಿತ್ಯದ ಗಾನ ಕೇಳುಗರನ್ನು ಮಂತ್ರ ಮುಗ್ದ ಗೊಳಿಸಿದೆ.

ಎರಡು ಮುದ್ದಾದ ಜೋಡಿಯ ನವೀರಾದ ಪ್ರೇಮಕಥೆಯನ್ನು ಈ ಹಾಡಿನಲ್ಲಿ ಕಟ್ಟಿಕೊಡ ಲಾಗಿದೆ. ಮಹದೇವ್ ಸ್ವಾಮಿ, ರವಿ ಧನ್ಯನ್ ಸಾಹಿತ್ಯದ ಹಾಡಿಗೆ ವಿಜಯ್ ಪ್ರಕಾಶ್, ಸಂಗೀತಾ ರವೀಂದ್ರನಾಥ್ ಧನಿಯಾಗಿದ್ದಾರೆ. ಶಿವ ಪ್ರಸಾದ್ ಸಂಗೀತ ಹಾಡಿನಲ್ಲಿ ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ.

ಆರ್.ಹೆಗ್ಡೆ ಜೋಡಿ ಸಹಜ ನಟನೆಯ ಮೂಲಕ ಗಮನಸೆಳೆಯುತ್ತಾರೆ. ಗ್ರೇ ಸ್ಕ್ವೇರ್ ಸ್ಟುಡಿ ಯೋಸ್ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗಿದೆ. ಈ ಚಿತ್ರಕ್ಕೆ ನವನ್ ಶ್ರೀನಿವಾಸ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಹಿಂದೆ ಕಿರುಚಿತ್ರಗಳ ಮೂಲಕ ನಿರ್ದೇಶನದ ಚಾಕಚಕತ್ಯೆ ಅರಿತಿರುವ ನವನ್ ಕಂಬ್ಳಿಹುಳ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ.

ಮಲೆನಾಡಿನ ಬ್ಯಾಕ್ ಡ್ರಾಪ್‌ನಲ್ಲಿ ನಡೆಯುವ ಚಿತ್ರವಿದು. ಶೃಂಗೇರಿ, ಸಕಲೇಶಪುರ, ತೀರ್ಥಹಳ್ಳಿ, ಸುತ್ತಮುತ್ತ ಶೂಟಿಂಗ್ ಮಾಡಿದ್ದೇವೆ. ಇದೊಂದು ಎಮೋಷನಲ್ ಜರ್ನಿ. ಎರಡು ಕಾಲು ಘಂಟೆ ನಗು, ಅಳು, ಕಾಮಿಡಿ ಎಲ್ಲವೂ ಇದೆ ಎನ್ನುತ್ತಾರೆ
ನಿರ್ದೇಶಕ ನವನ್ ಶ್ರೀನಿವಾಸ್. ನೈಜ ಘಟನೆಯಾಧಾರಿತ ಕಂಬ್ಳಿಹುಳ ಚಿತ್ರದಲ್ಲಿ ರೋಹಿತ್ ಕುಮಾರ್, ದೀಪಕ್ ರೈ ಪಣಜೆ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ಸೇರಿದಂತೆ ಹಲವರು ನಟಿಸಿದ್ದಾರೆ ಸತೀಶ್ ರಾಜೇಂದ್ರ ಛಾಯಾಗ್ರಾಹಣ, ಜಿತೇಂದ್ರ ನಾಯಕ ಮತ್ತು ಟಿ.ಕೆ.ರಾಘವೇಂದ್ರ ಸಂಕಲನ ಈ ಸಿನಿಮಾಕ್ಕಿದೆ.